
ಮ್ಯಾಂಚೆಸ್ಟರ್(ಆ.06): ಬಾಬರ್ ಆಜಂ ಹಾಗೂ ಶಾನ್ ಮಸೂದ್‌ರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ, ಬುಧವಾರ ಇಲ್ಲಿ ಆರಂಭಗೊಂಡ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಪಾಕಿಸ್ತಾನ ಉತ್ತಮ ಆರಂಭ ಪಡೆದುಕೊಂಡಿದ್ದು, ಮೊದಲ ದಿನಾಟದಂತ್ಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿದೆ.
ಮೊದಲ ಇನ್ನಿಂಗ್ಸ್‌ನಲ್ಲಿ ಮೊದಲ ದಿನದ ಚಹಾ ವಿರಾಮಕ್ಕೆ 2 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿತ್ತು. ಬಾಬರ್ ಅರ್ಧಶತಕ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದರು. ಬಳಿಕ ಕೆಲಕಾಲ ವರುಣ ಪಂದ್ಯಕ್ಕೆ ಅಡ್ಡಿಪಡಿಸಿತು. ಅಂತಿಮವಾಗಿ 49 ಓವರ್‌ಗಳಷ್ಟೇ ಪಂದ್ಯ ನಡೆಯಲು ಸಾಧ್ಯವಾಯಿತು. ಮೊದಲ ದಿನದಾಟದಂತ್ಯದ ವೇಳೆಗೆ ಪಾಕಿಸ್ತಾನ 2 ವಿಕೆಟ್ ಕಳೆದುಕೊಂಡು 139 ರನ್ ಬಾರಿಸಿದೆ.
ಧೋನಿ ಹೆಸರಿನಲ್ಲಿದ್ದ ಅಪರೂಪದ ವಿಶ್ವದಾಖಲೆ ಅಳಿಸಿ ಹಾಕಿದ ಇಂಗ್ಲೆಂಡ್ ನಾಯಕ ಮಾರ್ಗನ್..!
ಪಾಕಿಸ್ತಾನ ಪರ ಬಾಬರ್ ಅಜಂ 100 ಎಸೆತಗಳನ್ನು ಎದುರಿಸಿ 11 ಬೌಂಡರಿ ಸಹಿತ ಅಜೇಯ 69 ರನ್ ಗಳಿಸಿದರೆ, ಶಾನ್ ಮಸೂದ್ 152 ಎಸೆತಗಳನ್ನು ಎದುರಿಸಿ 7 ಬೌಂಡರಿಗಳ ನೆರವಿನೊಂದಿಗೆ 46 ರನ್‌ಗಳಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ ಹಾಗೂ ಕ್ರಿಸ್ ವೋಕ್ಸ್ ತಲಾ ಒಂದೊಂದು ವಿಕೆಟ್ ಪಡೆದಿದ್ದಾರೆ.
ಸ್ಕೋರ್: ಪಾಕಿಸ್ತಾನ 139/2 (ಮೊದಲ ದಿನದಾಟ ಮುಕ್ತಾಯಕ್ಕೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.