15ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ 10 ತಂಡಗಳು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನುವಂತಹ ಸುದ್ದಿಯೊಂದು ಹೊರಬಿದ್ದಿದ್ದು, ಮೇ ತಿಂಗಳಿಗನಲ್ಲಿ 2 ಹೊಸ ತಂಡಗಳು ಸೇರ್ಪಡೆಯಾಗಲಿವೆ ಎಂದು ವರದಿಯಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ನವದೆಹಲಿ(ಮಾ.14): 2022ರಿಂದ ಐಪಿಎಲ್‌ನಲ್ಲಿ 10 ತಂಡಗಳು ಸ್ಪರ್ಧಿಸಲಿದ್ದು, 2 ಹೊಸ ತಂಡಗಳ ಸೇರ್ಪಡೆಗಾಗಿ ಮೇ ತಿಂಗಳಲ್ಲಿ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶನಿವಾರ ಬಿಸಿಸಿಐ ಅಧ್ಯಕ್ಷ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಸೇರಿ ಹಿರಿಯ ಅಧಿಕಾರಿಗಳು ಸಭೆ ನಡೆಸಿ ಈ ಬಗ್ಗೆ ನಿರ್ಧರಿಸಿದರು. ಮುಂದಿನ ವರ್ಷದಿಂದ 10 ಐಪಿಎಲ್ ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಹರಾಜು ಪ್ರಕ್ರಿಯೆ, ಹೊಸ ಫ್ರಾಂಚೈಸಿಗಳು ಯಾವುದೆಂದು ಮೇ ತಿಂಗಳಿನಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಯಾವಾಗ ಇನ್ನೆರಡು ಫ್ರಾಂಚೈಸಿಗಳ ಹೆಸರು ಅಂತಿಮವಾಗುವುದೋ ಅಂದಿನಿಂದಲೇ ತಂಡ ಕಟ್ಟುವ ನಿಟ್ಟಿನಲ್ಲಿ ತಮ್ಮ ಕಾರ್ಯಾಚರಣೆ ಆರಂಭಿಸಬಹುದು ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.
undefined
IPL 2021: ಪಂಜಾಬ್ ಕಿಂಗ್ಸ್ ತಂಡ ಕೂಡಿಕೊಂಡ ಡೇಮಿಯನ್ ರೈಟ್..!
ಸದ್ಯ 8 ತಂಡಗಳು ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದು, 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 9ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಟ ನಡೆಸಲಿವೆ.