
ಕ್ರೈಸ್ಟ್‌ಚರ್ಚ್(ಡಿ.02): ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರ ಕೋವಿಡ್ ನಿಯಮ ಉಲ್ಲಂಘಿಸಿರುವ ಪರಿಣಾಮ ಮತ್ತೆ ಮೂವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೆಲ ದಿನಗಳ ಹಿಂದಷ್ಟೇ ಪಾಕ್ ತಂಡದ 7 ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಒಟ್ಟಾರೆ ಪಾಕಿಸ್ತಾನ ತಂಡದ 10 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ. ಹೀಗಾಗಿ ಪಾಕಿಸ್ತಾನ ತಂಡ ಆತಂಕದಲ್ಲಿದೆ. ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿ, 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲು ಪಾಕ್, ನ್ಯೂಜಿಲೆಂಡ್‌ಗೆ ಬಂದಿಳಿದಿತ್ತು. ನ್ಯೂಜಿಲೆಂಡ್ ಸರ್ಕಾರದ ಕೋವಿಡ್ ನಿಯಮಗಳ ಪ್ರಕಾರ ಪ್ರವಾಸಿ ತಂಡ, ಕ್ರೈಸ್ಟ್ ಚರ್ಚ್‌ನಲ್ಲಿ 15 ದಿನಗಳ ಕಡ್ಡಾಯ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿದೆ.
ನೀ ಹುಟ್ಟುವ ಮೊದಲೇ ಸೆಂಚುರಿ ಸಿಡಿಸಿದ್ದೇನೆ; ಲಂಕಾ ಲೀಗ್‌ನಲ್ಲಿ ಆಫ್ರಿದಿ-ನವೀನ್ ಕಿತ್ತಾಟ!
ಡಿಸೆಂಬರ್ 18ರಿಂದ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ 3 ಪಂದ್ಯಗಳ ಟಿ20 ಸರಣಿಯಾಡಲಿದೆ. ಇದಾದ ಬಳಿಕ ಬಾಬರ್ ಅಜಂ ನೇತೃತ್ವದ ಪಾಕಿಸ್ತಾನ ತಂಡ 2 ಪಂದ್ಯಗಳ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯಗಳನ್ನಾಡಲಿದೆ. ಇತ್ತೀಚೆಗಷ್ಟೇ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು 2-0 ಅಂತರದಲ್ಲಿ ಕಿವೀಸ್ ತಂಡ ಕೈವಶ ಮಾಡಿಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.