
ಪುಣೆ(ಮಾ.27): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದು, 33 ಬುಕ್ಕಿಗಳನ್ನು ಪುಣೆಯ ಪಿಂಪ್ರಿ ಚಿಂಚ್ವಾಡ್ ಪೊಲೀಸರು ಬಂಧಿಸಿದ್ದಾರೆ.
ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯುತ್ತಿದ್ದ ಪಂದ್ಯವನ್ನು ಕೆಲವರು ಬೈನಾಕ್ಯುಲರ್ ಮೂಲಕ ವೀಕ್ಷಿಸಿ ಬೆಟ್ಟಿಂಗ್ ನಡೆಸಲು ಬುಕ್ಕಿಗಳಿಗೆ ನೆರವಾಗುತ್ತಿದ್ದರು ಎಂದು ಆರೋಪಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪೋಲಿಸರು ಎಂಸಿಎ ಮೈದಾನದ ಸುತ್ತಮುತ್ತ ಮೂರು ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಹೈರೆಸ್ಯೂಲೇಷನ್ ಕ್ಯಾಮರ ಹಾಗೂ ಬೈನಾಕ್ಯುಲರ್ ಬಳಸಿ ಪಂದ್ಯ ವೀಕ್ಷಿಸುತ್ತಿದ್ದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಈ ಘಟನೆಯ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಕಮೀಷನರ್, ನಾವು 33 ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಈ ಪೈಕಿ ಮಧ್ಯಪ್ರದೇಶದ ಐವರು, ಹರ್ಯಾಣದ 13, ಮಹಾರಾಷ್ಟ್ರದ 11, ರಾಜಸ್ಥಾನದ ಇಬ್ಬರು, ಗೋವಾ ಹಾಗೂ ಉತ್ತರ ಪ್ರದೇಶದ ತಲಾ ಒಬ್ಬರನ್ನು ಬಂಧಿಸಿದ್ದೇವೆ. ಬಂಧಿತರಿಂದ 45 ಲಕ್ಷ ರುಪಾಯಿ ನಗದು, 74 ಮೊಬೈಲ್ ಫೋನ್‌ಗಳು, 3 ಲ್ಯಾಪ್‌ಟಾಪ್‌ಗಳು, ಒಂದು ಟ್ಯಾಬ್ಲೆಟ್, 8 ಹೈರೆಸ್ಯೂಲೂಷನ್ ಕ್ಯಾಮರಾ, ಬೈನಾಕ್ಯುಲರ್ ಇದರ ಜತೆಗೆ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಂಪೈರ್ ಎಡವಟ್ಟು: ವಿಶ್ವಕಪ್ ಫೈನಲ್‌ನಲ್ಲಿ ಹೀಗಾಗಿದ್ದರೆ ಏನ್ಮಾಡ್ತೀರಾ ಎಂದ ಚೋಪ್ರಾ..!
ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದ್ದು, ಎಲ್ಲಾ 33 ಮಂದಿಯನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ 6 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.