ವೈಟ್‌ವಾಶ್ ತಪ್ಪಿಸಿಕೊಳ್ಲುತ್ತಾ ಭಾರತ?

Suvarna News   | Asianet News
Published : Dec 02, 2020, 09:19 AM IST
ವೈಟ್‌ವಾಶ್ ತಪ್ಪಿಸಿಕೊಳ್ಲುತ್ತಾ ಭಾರತ?

ಸಾರಾಂಶ

ಭಾರತ-ಆಸ್ಟ್ರೇಲಿಯಾ ನಡುವಿನ ಕೊನೆಯ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಭಾರತ ಇದೀಗ ವೈಟ್‌ವಾಶ್ ಭೀತಿ ಅನುಭವಿಸುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕ್ಯಾನ್‌ಬೆರ್ರಾ(ಡಿ.02):  ಕೊರೋನಾ ಲಾಕ್‌ಡೌನ್‌ ಬಳಿಕ ವಿದೇಶದಲ್ಲಿ ಮೊದಲ ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ, ಬುಧವಾರ ಇಲ್ಲಿ ನಡೆಯಲಿರುವ ಸರಣಿಯ 3ನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಆಸ್ಪ್ರೇಲಿಯಾ ವಿರುದ್ಧ ಗೆಲುವಿನ ವಿಶ್ವಾಸದಲ್ಲಿದೆ. ಈ ಪಂದ್ಯದಲ್ಲಿ ಗೆದ್ದು ಕ್ಲೀನ್‌ ಸ್ವೀಪ್‌ ಅವಮಾನವನ್ನು ತಪ್ಪಿಸಿಕೊಳ್ಳುವ ಲೆಕ್ಕಾಚಾರದಲ್ಲಿ ಕೊಹ್ಲಿ ಪಡೆ ಇದೆ. 

ಮೊದಲ 2 ಪಂದ್ಯಗಳು ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ನಡೆದಿತ್ತು. 3ನೇ ಪಂದ್ಯ ಇಲ್ಲಿನ ಮನುಕಾ ಓವಲ್‌ನಲ್ಲಿ ನಡೆಯಲಿದೆ. ಮೊದಲೆರಡು ಪಂದ್ಯಗಳಲ್ಲಿ ಆತಿಥೇಯ ಆಸೀಸ್‌ ಭರ್ಜರಿ ಗೆಲುವು ಸಾಧಿಸಿ, ಸರಣಿಯನ್ನು 2-0 ಯಿಂದ ವಶಪಡಿಸಿಕೊಂಡಿದೆ. ಈ ಪಂದ್ಯ ಔಪಚಾರಿಕ ಎನಿಸಿಕೊಂಡಿದೆ.

ಆಸ್ಪ್ರೇಲಿಯಾ ತಂಡ ಈ ಪಂದ್ಯದಲ್ಲಿ ಗೆದ್ದು, ಭಾರತವನ್ನು ವೈಟ್‌ವಾಶ್‌ ಮಾಡುವ ಉತ್ಸಾಹದಲ್ಲಿದೆ. ಈ ವರ್ಷದ ಫೆಬ್ರವರಿಯಲ್ಲಿ ನ್ಯೂಜಿಲೆಂಡ್‌ ಪ್ರವಾಸದಲ್ಲಿ ಭಾರತ ತಂಡ 0-3 ರಿಂದ ಕಿವೀಸ್‌ ಎದುರು ವೈಟ್‌ವಾಶ್‌ಗೆ ಗುರಿಯಾಗಿತ್ತು. ಇದೀಗ ಆಸೀಸ್‌ ವಿರುದ್ಧದ ಏಕದಿನ ಸರಣಿಯಲ್ಲೂ ಅದೇ ಭೀತಿಯಲ್ಲಿದೆ.

ಮೊದಲ ಎರಡೂ ಪಂದ್ಯಗಳಲ್ಲಿ ಭಾರತ ಬೌಲಿಂಗ್‌ ಹಾಗೂ ಕ್ಷೇತ್ರ ರಕ್ಷಣೆಯಲ್ಲಿ ಕಳಪೆ ಪ್ರದರ್ಶನ ತೋರಿತ್ತು. ಕ್ಷೇತ್ರರಕ್ಷಣೆ ವೇಳೆ ಭಾರತ ಆಟಗಾರರು ಸುಲಭ ಕ್ಯಾಚ್‌ಗಳನ್ನು ಕೈ ಚೆಲ್ಲಿದ್ದರು. ಬೌಂಡರಿ ತಡೆಯುವಲ್ಲಿ ವಿಫಲರಾಗಿದ್ದರು. ಆಟಗಾರರ ಇಂತಹ ಪ್ರದರ್ಶನ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು. ಈ ಪಂದ್ಯದಲ್ಲಿ ಇಂತಹ ಎಲ್ಲಾ ತಪ್ಪುಗಳನ್ನು ತಿದ್ದಿಕೊಂಡು ಭಾರತ ತಂಡ ಆಡಬೇಕಿದೆ. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗಲಿದೆ.

ನೀ ಹುಟ್ಟುವ ಮೊದಲೇ ಸೆಂಚುರಿ ಸಿಡಿಸಿದ್ದೇನೆ; ಲಂಕಾ ಲೀಗ್‌ನಲ್ಲಿ ಆಫ್ರಿದಿ-ನವೀನ್ ಕಿತ್ತಾಟ!

ಉತ್ತಮ ಪ್ರದರ್ಶನದ ನಿರೀಕ್ಷೆ:

ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಕ್ಷೇತ್ರ ರಕ್ಷಣೆಯಲ್ಲಿ ಸಂಪೂರ್ಣ ವೈಫಲ್ಯ ಕಂಡಿರುವ ವಿರಾಟ್‌ ಕೊಹ್ಲಿ ಪಡೆ, ಅಂತಿಮ 11ರಲ್ಲಿ ಬದಲಾವಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಬೆಂಚ್‌ ಕಾಯುತ್ತಿರುವ ಆಟಗಾರರಿಗೆ ತಂಡದಲ್ಲಿ ಅವಕಾಶ ಕಲ್ಪಿಸುವ ಯೋಚನೆ ತಂಡದ ಆಡಳಿತಕ್ಕಿದೆ ಎನ್ನಲಾಗಿದೆ. ಹೆಚ್ಚುವರಿ ವಿಕೆಟ್‌ ಕೀಪರ್‌ ಆಗಿ ತಂಡದಲ್ಲಿ ಸ್ಥಾನ ಪಡೆದಿರುವ ಸಂಜು ಸ್ಯಾಮ್ಸನ್‌, ಟಿ. ನಟರಾಜನ್‌ ಹಾಗೂ ಶಾರ್ದೂಲ್‌ ಠಾಕೂರ್‌ ವೇಗದ ಬೌಲಿಂಗ್‌ ವಿಭಾಗದಲ್ಲಿ ತಂಡ ಸೇರಿಸಿಕೊಳ್ಳುವ ಸಾಧ್ಯತೆಯಿದೆ. ಆರಂಭಿಕರಾಗಿ ಧವನ್‌ ಹಾಗೂ ಮಯಾಂಕ್‌ ಅಷ್ಟಾಗಿ ಯಶಸ್ಸು ಕಂಡಿಲ್ಲ. ಆರಂಭಿಕರನ್ನು ಬದಲಿಸುವ ಯೋಚನೆ ಕೊಹ್ಲಿಗಿದೆ ಎನ್ನಲಾಗಿದೆ. ಉಳಿದಂತೆ ಕೊಹ್ಲಿ, ಶ್ರೇಯಸ್‌, ಕೆ.ಎಲ್‌. ರಾಹುಲ್‌, ಹಾರ್ದಿಕ್‌ ಪಾಂಡ್ಯ ಹಾಗೂ ಜಡೇಜಾ ಬ್ಯಾಟ್‌ನಿಂದ ರನ್‌ ಹರಿದುಬರಬೇಕಿದೆ. ನಿರೀಕ್ಷೆ ಹುಸಿಗೊಳಿಸಿರುವ ನವದೀಪ್‌ ಸೈನಿ ಬದಲು ನಟರಾಜನ್‌ ಅಥವಾ ಶಾರ್ದೂಲ್‌ ಸ್ಥಾನ ಗಿಟ್ಟಿಸಬಹುದಾಗಿದೆ. ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಬದಲಿಗೆ ಎಡಗೈ ಸ್ಪಿನ್ನರ್‌ ಕುಲ್ದೀಪ್‌ ಯಾದವ್‌ಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.

ಬಲಿಷ್ಠ ಬ್ಯಾಟಿಂಗ್‌ ಪಡೆ:

ಮತ್ತೊಂದೆಡೆ ಆಸ್ಪ್ರೇಲಿಯಾ ತಂಡ ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನು ಹೊಂದಿದೆ. ತಾರಾ ಬೌಲರ್‌ಗಳು ತಂಡದ ಪ್ರಮುಖ ಅಸ್ತ್ರವಾಗಿದ್ದಾರೆ. ಯುವ ಸ್ಪಿನ್ನರ್‌ ಆ್ಯಡಂ ಜಂಪಾ ಹಾಗೂ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ನಾಯಕನ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ. ವಾರ್ನರ್‌ ಅಲಭ್ಯತೆ ಆಸೀಸ್‌ ತಂಡದ ಅಗ್ರ ಕ್ರಮಾಂಕಕ್ಕೆ ಅಷ್ಟಾಗಿ ಕಾಡುವುದಿಲ್ಲ. ನಾಯಕ ಫಿಂಚ್‌, ಸ್ಟೀವ್‌ ಸ್ಮಿತ್‌, ಲಬುಶೇನ್‌ ಲಯದಲ್ಲಿದ್ದು ತಂಡಕ್ಕೆ ಹೆಚ್ಚಿನ ಬಲ ನೀಡಿದ್ದಾರೆ. ಗ್ಲೆನ್‌ ಮ್ಯಾಕ್ಸ್‌ವೆಲ್‌ ಅಬ್ಬರದ ಬ್ಯಾಟಿಂಗ್‌ನಿಂದ ಗಮನಸೆಳೆದಿದ್ದಾರೆ. ಕೆಳ ಕ್ರಮಾಂಕದಲ್ಲಿ ಅಲೆಕ್ಸ್‌ ಕೇರಿ ಸಾಮರ್ಥ್ಯ ತಂಡಕ್ಕೆ ದೊರೆಯಲಿದೆ. ವೇಗಿ ಮಿಚೆಲ್‌ ಸ್ಟಾರ್ಕ್, ಹೇಜಲ್‌ವುಡ್‌, ಪ್ಯಾಟ್‌ ಕಮಿನ್ಸ್‌ ಎದುರಾಳಿ ತಂಡದ ಬ್ಯಾಟ್ಸ್‌ಮನ್‌ಗಳಿಗೆ ನಡುಕಹುಟ್ಟಿಸಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

ಪಿಚ್‌ ರಿಪೋರ್ಟ್‌:

ಕ್ಯಾನ್‌ಬೆರ್ರಾದ ಪಿಚ್‌ ಬ್ಯಾಟ್ಸ್‌ಮನ್‌ಗಳಿಗೆ ಪೂರಕವಾಗಿದೆ. ಸಮಯ ಕಳೆದಂತೆ ಪಿಚ್‌ ತಿರುವು ಪಡೆಯಲಿದ್ದು ಸ್ಪಿನ್ನರ್‌ಗಳು ಹಾಗೂ ವೇಗಿಗಳು ವಿಕೆಟ್‌ ಪಡೆಯಲಿದ್ದಾರೆ. ಟಾಸ್‌ ಪ್ರಮುಖ ಪಾತ್ರವಹಿಸಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!