ಟೀಂ ಇಂಡಿಯಾ-ಬಾಂಗ್ಲಾದೇಶ ನಡುವಿನ ಮೂರನೇ ಹಾಗೂ ನಿರ್ಣಾಯಕ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿದ್ದು, ಅಂತಿಮ ಪಂದ್ಯದಲ್ಲಿ ಯಾರು ಗೆದ್ದು ಸರಣಿ ಕೈವಶ ಮಾಡಿಕೊಳ್ಳಲಿದ್ದಾರೆ ಎನ್ನುವುದು ಸದ್ಯದ ಕುತೂಹಲ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ನಾಗ್ಪುರ[ನ.10]: 2020ರ ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿರುವ ಭಾರತ ತಂಡ, ಬಾಂಗ್ಲಾದೇಶ ವಿರುದ್ಧ ಇಲ್ಲಿ ಭಾನುವಾರ ನಡೆಯಲಿರುವ ಟಿ20 ಸರಣಿಯ 3ನೇ ಹಾಗೂ ಕೊನೆಯ ಪಂದ್ಯದಲ್ಲಿ ಜಯಿಸುವ ಮೂಲಕ ಈ ಋತುವಿನ ಮೊದಲ ಟಿ20 ಸರಣಿ ಗೆಲುವಿನ ವಿಶ್ವಾಸದಲ್ಲಿದೆ. ಈಗಾಗಲೇ ಮೊದಲ 2 ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದರಲ್ಲಿ ಗೆಲುವು ಪಡೆದಿದ್ದು ಸರಣಿ 1-1ರಿಂದ ಸಮಬಲವಾಗಿದೆ. ಹೀಗಾಗಿ ಅಂತಿಮ ಟಿ20 ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ.
3 ಹೊಸ ನಗರಗಳಲ್ಲಿ IPL ಪಂದ್ಯ ಆಯೋಜನೆ?
ವಿದರ್ಭ ಕ್ರಿಕೆಟ್ ಸಂಸ್ಥೆ ಮೈದಾನ ಸ್ಪಿನ್ ಸ್ನೇಹಿ ಪಿಚ್ ಆಗಿರುವುದರಿಂದ 3ನೇ ಪಂದ್ಯದಲ್ಲಿ ಸ್ಪಿನ್ನರ್‌ಗಳು ಪಂದ್ಯದ ಫಲಿತಾಂಶ ನಿರ್ಧರಿಸಲಿದ್ದಾರೆ. ಇತ್ತೀಚೆಗಷ್ಟೇ ದ. ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸಮಬಲ ಸಾಧಿಸಿದ್ದ ಭಾರತ ತಂಡ, ಬಾಂಗ್ಲಾ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿ ಕಣಕ್ಕಿಳಿಯುತ್ತಿದೆ. ಒಂದೊಮ್ಮೆ ದೆಹಲಿ ಪಂದ್ಯದಲ್ಲಿ ಮಾಡಿದ ಎಡವಟ್ಟುಗಳು ಇಲ್ಲಿ ಮರುಕಳಿಸಿದರೆ ಬಾಂಗ್ಲಾ, ಭಾರತದ ನೆಲದಲ್ಲಿ ಐತಿಹಾಸಿಕ ಟಿ20 ಸರಣಿ ಜಯಿಸಲಿದೆ. ಹೀಗಾಗಿ ಭಾರತ ಎಚ್ಚರಿಕೆಯ ಹೆಜ್ಜೆಯಿಡಬೇಕಿದೆ.
INDvBAN 3ನೇ ಟಿ20: ಇದೊಂದು ಬದಲಾವಣೆಯಾದರೆ ಭಾರತಕ್ಕೆ ಗೆಲುವು ಪಕ್ಕಾ!
ಭಾರತ ಮೊದಲ 2 ಪಂದ್ಯಗಳಲ್ಲಿ ಆಡಿದ ತಂಡವನ್ನೆ 3ನೇ ಪಂದ್ಯಕ್ಕೆ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಆರಂಭಿಕರಾಗಿ ರೋಹಿತ್, ಧವನ್ ಒಆರ್ಮ್ ನಲ್ಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕೆ.ಎಲ್. ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ನಿರೀಕ್ಷೆ ಉಳಿಸಿಕೊಂಡಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ಶಿವಂ ದುಬೆ ಕಾಣಿಸಿಕೊಂಡರೆ, ಕೃನಾಲ್ ಪಾಂಡ್ಯ, ಚಹಲ್ ಜೊತೆ ವಾಷಿಂಗ್ಟನ್ ಸುಂದರ್ ಭರವಸೆ ಮೂಡಿಸಿದ್ದಾರೆ. ವೇಗಿ ದೀಪಕ್ ಚಾಹರ್ ವಿಕೆಟ್ ಕೀಳುತ್ತಿದ್ದಾರೆ. ಆದರೆ ಮತ್ತೊಬ್ಬ ವೇಗಿ ಖಲೀಲ್ ಅಹ್ಮದ್ ದುಬಾರಿಯಾಗುತ್ತಿದ್ದು, ಖಲೀಲ್ ಬದಲು ಶಾರ್ದೂಲ್ ಠಾಕೂರ್‌ಗೆ ತಂಡದಲ್ಲಿ ಅವಕಾಶ ನೀಡುವ ಸಾಧ್ಯತೆಯಿದೆ. ಉಳಿದಂತೆ ಬಾಂಗ್ಲಾದೇಶ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೊನೆಯ ಟಿ20 ಪಂದ್ಯವನ್ನು ಗೆದ್ದು ಸರಣಿ ಜಯಿಸುವ ಉತ್ಸಾಹದಲ್ಲಿ ಮಹಮದುಲ್ಲಾ ಪಡೆ ಕಣಕ್ಕಿಳಿಯುತ್ತಿದೆ.
ಪಂದ್ಯ ಆರಂಭ: ಸಂಜೆ 7ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ 1