4ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. ಉಭಯ ತಂಡಗಳು ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿದಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..
ವೆಲ್ಲಿಂಗ್ಟನ್(ಜ.31): ಭಾರತ-ನ್ಯೂಜಿಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿದೆ.
New Zealand have won the toss and they will bowl first. pic.twitter.com/IXbSLmsQ1Q
— BCCI (@BCCI)ಈಗಾಗಲೇ 3-0 ಅಂತರದಲ್ಲಿ ಟಿ20 ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ, ವೈಟ್‌ವಾಶ್ ಮಾಡುವತ್ತ ಚಿತ್ತ ನೆಟ್ಟಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಮೊದಲೇ ಹೇಳಿದಂತೆ ತಂಡದಲ್ಲಿ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ.ಟೀಂ ಇಂಡಿಯಾದಲ್ಲಿ 3 ಬದಲಾವಣೆ ಮಾಡಲಾಗಿದ್ದು, ಜಡೇಜಾ, ರೋಹಿತ್ ಶರ್ಮಾ, ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಲಾಗಿದ್ದು, ಸಂಜು ಸ್ಯಾಮ್ಸನ್, ಸೈನಿ ಹಾಗೂ ವಾಷಿಂಗ್ಟನ್ ಸುಂದರ್ ತಂಡ ಕೂಡಿಕೊಂಡಿದ್ದಾರೆ.
undefined
ವೈಟ್ ವಾಶ್‌ನಿಂದ ತಪ್ಪಿಸಿಕೊಳ್ಳುತ್ತಾ ನ್ಯೂಜಿಲೆಂಡ್..?
ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿದ್ದರಿಂದ ಕೇರಳದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸಲಿದ್ದಾರೆ. ಶಮಿಗೆ ವಿಶ್ರಾಂತಿ ನೀಡಿದ್ದರಿಂದ ನವದೀಪ್ ಸೈನಿ ಕಿವೀಸ್ ನೆಲದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಡಲು ಸಜ್ಜಾಗಿದ್ದಾರೆ.
ಇನ್ನು ಕಳೆದ ಪಂದ್ಯದಲ್ಲಿ 95 ರನ್ ಬಾರಿಸಿದ್ದ ಕೇನ್ ವಿಲಿಯಮ್ಸನ್ ಗಾಯಕ್ಕೆ ತುತ್ತಾಗಿದ್ದು, ಟಿಮ್ ಸೌಥಿ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನುಳಿದಂತೆ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ಬದಲಿಗೆ ಟಾಮ್ ಬ್ರೂಸ್ ತಂಡಕೂಡಿಕೊಂಡಿದ್ದರೆ, ವಿಲಿಯಮ್ಸನ್ ಬದಲಿಗೆ ಮಿಚೆಲ್ ತಂಡಕ್ಕೆ ಸೇರಿಕೊಂಡಿದ್ದಾರೆ.
ತಂಡಗಳು ಹೀಗಿವೆ:
ಭಾರತ:
4th T20I. India XI: S Samson, KL Rahul, V Kohli, S Iyer, M Pandey, S Dube, W Sundar, S Thakur, Y Chahal, N Saini, J Bumrah https://t.co/QyAOabEhPN
— BCCI (@BCCI)ನ್ಯೂಜಿಲೆಂಡ್:
4th T20I. New Zealand XI: M Guptill, C Munro, T Bruce, R Taylor, T Seifert, M Santner, S Kuggeleijn, T Southee, I Sodhi, H Bennett, D Mitchell https://t.co/QyAOabEhPN
— BCCI (@BCCI)