ಭಾರತ-ಇಂಗ್ಲೆಂಡ್‌ 2ನೇ ಟೆಸ್ಟ್‌: ಪ್ರೇಕ್ಷಕರಿಗೆ ಪ್ರವೇಶ?

By Suvarna NewsFirst Published Feb 1, 2021, 11:32 AM IST
Highlights

ಭಾರತ-ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಶೇ.50% ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಚೆನ್ನೈ(ಫೆ.01): ಕ್ರೀಡಾಂಗಣಗಳಿಗೆ ಪ್ರೇಕ್ಷಕರ ಪ್ರವೇಶಕ್ಕೆ ಕೇಂದ್ರ ಹಾಗೂ ತಮಿಳುನಾಡು ಸರ್ಕಾರ ಅನುಮತಿ ನೀಡಿದ್ದು, ಫೆ.13ರಿಂದ ಆರಂಭಗೊಳ್ಳಲಿರುವ ಭಾರತ-ಇಂಗ್ಲೆಂಡ್‌ 2ನೇ ಟೆಸ್ಟ್‌ಗೆ ಶೇ.50ರಷ್ಟು ಪ್ರೇಕ್ಷಕರಿಗೆ ಪ್ರವೇಶ ಸಿಗುವ ಸಾಧ್ಯತೆ ಇದೆ. 

ಬರೋಬ್ಬರಿ ಒಂದು ವರ್ಷದ ಬಳಿಕ ಭಾರತದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಪಂದ್ಯಾವಳಿಗಳು ಆರಂಭವಾಗುತ್ತಿವೆ. ಫೆಬ್ರವರಿ 5ರಿಂದ ಆರಂಭಗೊಳ್ಳಲಿರುವ ಮೊದಲ ಟೆಸ್ಟ್‌ ಖಾಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. 

ಮನ್‌ ಕೀ ಬಾತ್‌ನಲ್ಲಿ ಟೀಂ ಇಂಡಿಯಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಚೆನ್ನೈನ ಚೆಪಾಕ್‌ ಕ್ರೀಡಾಂಗಣದಲ್ಲಿ 50 ಸಾವಿರ ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ. ಒಂದು ವೇಳೆ 50% ಪ್ರೇಕ್ಷಕರು ಮೈದಾನ ಪ್ರವೇಶಕ್ಕೆ ಅವಕಾಶ ಸಿಕ್ಕರೆ 25 ಸಾವಿರ ಮಂದಿ ಮೈದಾನದಲ್ಲಿ ಒಂದು ವರ್ಷದ ಬಳಿಕ ಕ್ರಿಕೆಟ್‌ ಪಂದ್ಯಾವಳಿಯನ್ನು ವೀಕ್ಷಿಸಬಹುದಾಗಿದೆ. ಇನ್ನು ಮೂರು ಹಾಗೂ ನಾಲ್ಕನೇ ಟೆಸ್ಟ್ ಪಂದ್ಯಾವಳಿಯು ಅಹಮದಾಬಾದ್‌ನ ಸರ್ದಾರ್ ವಲ್ಲಭಬಾಯಿ ಪಟೇಲ್‌ನಲ್ಲಿ ನಡೆಯಲಿದೆ. 

ಒಂದು ಕಡೆ ಭಾರತ ತಂಡವು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಜಯಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದ್ದರೆ, ಇನ್ನೊಂದು ಕಡೆ ಇಂಗ್ಲೆಂಡ್ ತಂಡವು ಶ್ರೀಲಂಕಾ ವಿರುದ್ದ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಹೀಗಾಗಿ ಭಾರತ-ಇಂಗ್ಲೆಂಡ್ ನಡುವಿನ ಸರಣಿ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ.  
 

click me!