ಟಿ20 ಲೀಗ್‌ಗಳು ಟೆಸ್ಟ್‌ ಕ್ರಿಕೆಟ್‌ಗೆ ಮಾರಕ: ಎಬಿ ಡಿವಿಲಿಯರ್ಸ್‌

Published : Jan 08, 2024, 11:20 AM IST
ಟಿ20 ಲೀಗ್‌ಗಳು ಟೆಸ್ಟ್‌ ಕ್ರಿಕೆಟ್‌ಗೆ ಮಾರಕ: ಎಬಿ ಡಿವಿಲಿಯರ್ಸ್‌

ಸಾರಾಂಶ

ಭಾರತ ಹಾಗೂ ದ.ಆಫ್ರಿಕಾ ನಡುವಿನ ಟೆಸ್ಟ್‌ ಸರಣಿಯು ಕೇವಲ 2 ಪಂದ್ಯಗಳನ್ನು ಒಳಗೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಎಬಿಡಿ, ‘ಕೆಲವೊಂದು ವಿಚಾರಗಳು ಆದಷ್ಟು ಬೇಗ ಸರಿ ಹೋಗಬೇಕು’ ಎಂದಿದ್ದಾರೆ.

ಡರ್ಬನ್‌(ಜ.08): ಫ್ರಾಂಚೈಸಿ ಟಿ20 ಲೀಗ್‌ಗಳಿಂದಾಗಿ ಟೆಸ್ಟ್‌ ಕ್ರಿಕೆಟ್‌ನ ಮಹತ್ವ ಕುಸಿಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಕ್ರಿಕೆಟಿಗರ ಸಾಲಿಗೆ ದ.ಆಫ್ರಿಕಾದ ದಿಗ್ಗಜ ಎಬಿ ಡಿ ವಿಲಿಯರ್ಸ್‌ ಸಹ ಸೇರ್ಪಡೆಗೊಂಡಿದ್ದಾರೆ. 

ಭಾರತ ಹಾಗೂ ದ.ಆಫ್ರಿಕಾ ನಡುವಿನ ಟೆಸ್ಟ್‌ ಸರಣಿಯು ಕೇವಲ 2 ಪಂದ್ಯಗಳನ್ನು ಒಳಗೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಎಬಿಡಿ, ‘ಕೆಲವೊಂದು ವಿಚಾರಗಳು ಆದಷ್ಟು ಬೇಗ ಸರಿ ಹೋಗಬೇಕು’ ಎಂದಿದ್ದಾರೆ. ‘ಭಾರತ-ದ.ಆಫ್ರಿಕಾ ಸರಣಿಯಲ್ಲಿ 3ನೇ ಟೆಸ್ಟ್‌ ಇರಲಿಲ್ಲ ಎನ್ನುವುದು ಬಹಳ ಬೇಸರ ತರಿಸಿದೆ. ಜಗತ್ತಿನಾದ್ಯಂತ ನಡೆಯುತ್ತಿರುವ ಟಿ20 ಲೀಗ್‌ಗಳೇ ಇದಕ್ಕೆ ಕಾರಣ ಎನ್ನುವುದರಲ್ಲಿ ಅನುಮಾನವಿಲ್ಲ. ಈ ಪರಿಸ್ಥಿತಿ ತಲುಪಿರುವುದಕ್ಕೆ ಯಾರನ್ನು ದೂಷಿಸಬೇಕು ಎಂದು ನನಗೆ ಗೊತ್ತಿಲ್ಲ’ ಎಂದು ತಮ್ಮ ಯೂಟ್ಯೂಬ್‌ ಚಾನೆಲ್‌ನಲ್ಲಿ ಹೇಳಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ, ರೋಹಿತ್‌ ಆಡ್ಬೇಕು: ದಾದಾ

ಕೋಲ್ಕತಾ: ಮುಂಬರುವ ಐಸಿಸಿ ಟಿ20 ವಿಶ್ವಕಪ್‌ ತಂಡದಲ್ಲಿ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾಗೆ ಸ್ಥಾನ ನೀಡಬೇಕು ಎಂದು ಬಿಸಿಸಿಐ ಮಾಜಿ ಅಧ್ಯಕ್ಷ, ಭಾರತದ ಮಾಜಿ ನಾಯಕ ಸೌರವ್‌ ಗಂಗೂಲಿ ಅಭಿಪ್ರಾಯಿಸಿದ್ದಾರೆ. ಕಳೆದ 14 ತಿಂಗಳಿಂದ ಅಂ.ರಾ.ಟಿ20 ಪಂದ್ಯವನ್ನಾಡದಿದ್ದರೂ ಈಗಲೂ ಟಿ20 ಕ್ರಿಕೆಟ್‌ನಲ್ಲಿ ಇವರಿಬ್ಬರು ಪ್ರಸ್ತುತ, ಇಬ್ಬರ ಸೇವೆ ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಅಗತ್ಯವಿದೆ. ರೋಹಿತ್‌ರನ್ನೇ ನಾಯಕನನ್ನಾಗಿ ನೇಮಿಸಬೇಕು’ ಎಂದು ಗಂಗೂಲಿ ಹೇಳಿದ್ದಾರೆ.

ಎಲೈಸಿ ಪೆರ್ರಿ ಸ್ಫೋಟಕ ಆಟಕ್ಕೆ ಮಣಿದ ಟೀಂ ಇಂಡಿಯಾ

ಟಿ20 ತಂಡಕ್ಕೆ ರೋಹಿತ್‌, ಕೊಹ್ಲಿ ವಾಪಸ್‌!

ದಿಗ್ಗಜ ಕ್ರಿಕೆಟಿಗರಾದ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಒಂದು ವರ್ಷಕ್ಕೂ ಹೆಚ್ಚು ಸಮಯದ ಬಳಿಕ ಭಾರತ ಟಿ20 ತಂಡಕ್ಕೆವಾಪಸಾಗಿದ್ದು, ಅಫ್ಘಾನಿಸ್ತಾನ ವಿರುದ್ಧದ 3 ಪಂದ್ಯಗಳ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಸರಣಿಯು ಮುಂಬರುವ ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಆಡಲಿರುವ ಕೊನೆಯ ಅಂತಾರಾಷ್ಟ್ರೀಯ ಟಿ20 ಸರಣಿ ಆಗಿದ್ದು, ವಿಶ್ವಕಪ್‌ ತಂಡದಲ್ಲೂ ರೋಹಿತ್‌ ಹಾಗೂ ಕೊಹ್ಲಿ ಇರಲಿದ್ದಾರೆ ಎನ್ನುವ ಸುಳಿವನ್ನು ಬಿಸಿಸಿಐ ಕೊಟ್ಟಂತಿದೆ.

ಹಾರ್ದಿಕ್‌ ಪಾಂಡ್ಯ ಹಾಗೂ ಸೂರ್ಯಕುಮಾರ್‌ ಯಾದವ್‌ ಇಬ್ಬರೂ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ, ರೋಹಿತ್‌ರನ್ನೇ ನಾಯಕನನ್ನಾಗಿ ನೇಮಿಸಲಾಗಿದ್ದು, ವಿಶ್ವಕಪ್‌ನಲ್ಲೂ ಅವರೇ ಭಾರತವನ್ನು ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.

ಆಘ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ, ರೋಹಿತ್-ಕೊಹ್ಲಿ ವಾಪಸ್!

2022ರ ನವೆಂಬರ್‌ನಲ್ಲಿ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಸೋತ ಬಳಿಕ, ರೋಹಿತ್‌ ಹಾಗೂ ಕೊಹ್ಲಿ ಇಬ್ಬರೂ ಅಂ.ರಾ. ಟಿ20 ಪಂದ್ಯವನ್ನಾಡಿಲ್ಲ, ಆದರೆ ಜೂನ್‌ನಲ್ಲಿ ವೆಸ್ಟ್‌ಇಂಡೀಸ್‌ ಹಾಗೂ ಅಮೆರಿಕದಲ್ಲಿ ನಡೆಯಲಿರುವ ವಿಶ್ವಕಪ್‌ನಲ್ಲಿ ಈ ಇಬ್ಬರು ಹಿರಿಯ ಆಟಗಾರರ ಅವಶ್ಯಕತೆ ತಂಡಕ್ಕಿದೆ ಎನ್ನುವುದನ್ನು ಮನಗಂಡಿರುವ ಬಿಸಿಸಿಐ ಆಯ್ಕೆ ಸಮಿತಿ, ಇಬ್ಬರನ್ನೂ ತಂಡಕ್ಕೆ ವಾಪಸ್‌ ಕರೆ ತಂದಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್‌ಮನ್‌ ಗಿಲ್‌, ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ತಿಲಕ್‌ ವರ್ಮಾ, ರಿಂಕು ಸಿಂಗ್‌, ಜಿತೇಶ್‌ ಶರ್ಮಾ, ಸಂಜು ಸ್ಯಾಮ್ಸನ್‌, ಶಿವಂ ದುಬೆ, ವಾಷಿಂಗ್ಟನ್‌ ಸುಂದರ್‌, ಅಕ್ಷರ್‌ ಪಟೇಲ್‌, ರವಿ ಬಿಷ್ಣೋಯ್‌, ಕುಲ್ದೀಪ್‌ ಯಾದವ್‌, ಅರ್ಶ್‌ದೀಪ್‌ ಸಿಂಗ್‌, ಆವೇಶ್‌ ಖಾನ್‌, ಮುಕೇಶ್‌ ಕುಮಾರ್‌.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?
ಸಂಜು ಸ್ಯಾಮ್ಸನ್ ಔಟ್, ಶುಭ್‌ಮನ್ ಗಿಲ್ ಇನ್: ಅಸಲಿ ಸತ್ಯ ಬಿಚ್ಚಿಟ್ಟ ರವಿಚಂದ್ರನ್ ಅಶ್ವಿನ್!