ಅಪ್ಪಟ ಕನ್ನಡ ಮಾತಾಡಿದ RCB ಮನೆ ದೇವ್ರು ಎಬಿ ಡಿವಿಲಿಯರ್ಸ್‌..! ವಿಡಿಯೋ ವೈರಲ್

By Naveen Kodase  |  First Published Mar 10, 2024, 1:09 PM IST

ಒಂದು ದಶಕಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದ ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ ಅಂದ್ರೆ ಆರ್‌ಸಿಬಿ ಫ್ರಾನ್ಸ್‌ಗೆ ಎಲ್ಲಿಲ್ಲದ ಪ್ರೀತಿ. ತಮ್ಮ ಅಮೋಘ ಆಟದ ಜತೆಗೆ ಸಿಂಪಲ್ ಮ್ಯಾನರಿಸಂ ಮೂಲಕ ಎಬಿಡಿ ಆರ್‌ಸಿಬಿ ಅಭಿಮಾನಿಗಳ ಮನಗೆದ್ದಿದ್ದಾರೆ.


ಬೆಂಗಳೂರು: 2024ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಿಲಿಯನ್ ಡಾಲರ್ ಕ್ರಿಕೆಟ್ ಟೂರ್ನಿಯನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಹೀಗಿರುವಾಗಲೇ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಕ್ರಿಕೆಟ್ ತಂಡದ ಆರಾಧ್ಯ ದೈವ, ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಕನ್ನಡ ಮಾತನಾಡಿರುವ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.

ಹೌದು, ಒಂದು ದಶಕಗಳ ಕಾಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅವಿಭಾಜ್ಯ ಅಂಗವಾಗಿ ಗುರುತಿಸಿಕೊಂಡಿದ್ದ ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ ಅಂದ್ರೆ ಆರ್‌ಸಿಬಿ ಫ್ರಾನ್ಸ್‌ಗೆ ಎಲ್ಲಿಲ್ಲದ ಪ್ರೀತಿ. ತಮ್ಮ ಅಮೋಘ ಆಟದ ಜತೆಗೆ ಸಿಂಪಲ್ ಮ್ಯಾನರಿಸಂ ಮೂಲಕ ಎಬಿಡಿ ಆರ್‌ಸಿಬಿ ಅಭಿಮಾನಿಗಳ ಮನಗೆದ್ದಿದ್ದಾರೆ. ಗೆಲ್ಲಲು ಅಸಾಧ್ಯ ಎನ್ನುವಂತಹ ಎಷ್ಟೋ ಪಂದ್ಯಗಳನ್ನು ಎಬಿ ಡಿವಿಲಿಯರ್ಸ್‌ ಏಕಾಂಗಿಯಾಗಿ ಆರ್‌ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಈ ಕಾರಣಕ್ಕಾಗಿಯೇ ಅಭಿಮಾನಿಗಳು ಅವರು ಆರ್‌ಸಿಬಿ ತಂಡದ ಆಪತ್ಭಾಂಧವ, ಮನೆ ದೇವ್ರು ಎಂದೆಲ್ಲಾ ಅಭಿಮಾನದಿಂದ ಕರೆಯುತ್ತಾರೆ. 

Latest Videos

undefined

112 ವರ್ಷಗಳಲ್ಲೇ ಮೊದಲು..! ಆಂಗ್ಲರನ್ನು ಬಗ್ಗುಬಡಿದು ಅಪರೂಪದ ದಾಖಲೆ ಬರೆದ ಟೀಂ ಇಂಡಿಯಾ

ಹೀಗಿರುವಾಗ, ಈಗಾಗಲೇ ಹಲವಾರು ಬಾರಿ ಕನ್ನಡ ಮಾತನಾಡಿರುವ ಎಬಿಡಿ, ಇದೀಗ ಮತ್ತೊಮ್ಮೆ ಕನ್ನಡದಲ್ಲೇ ಸ್ಪೂರ್ತಿಯ ಮಾತುಗಳನ್ನಾಡಿದ್ದಾರೆ. ಹೌದು, ಇದೀಗ ಎಬಿ ಡಿವಿಲಿಯರ್ಸ್‌ ಕನ್ನಡದ ಪ್ರಸಿದ್ದ ಗಾದೆಯೊಂದನ್ನು ನೆನಪಿಸಿಕೊಂಡಿದ್ದಾರೆ. 'ನನಗೆ ಮತ್ತೊಮ್ಮೆ ಒಂದು ಗಾದೆ ಮಾತು ನೆನಪಾಗುತ್ತದೆ. ಅದೆಂದರೆ 'ಮನಸ್ಸಿದ್ದರೆ ಮಾರ್ಗ' ಎಂದು ಹೇಳಿದ್ದಾರೆ. ಈ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟ್ರೆಂಡ್ ಆಗುತ್ತಿದೆ.

ಇದೀಗ ಸ್ಯಾಂಡಲ್‌ವುಡ್ ನಿರ್ದೇಶಕ, ನಿರ್ಮಾಪಕ ಹಾಗೂ ಆರ್‌ಸಿಬಿ ತಂಡದ ಅಪ್ಪಟ ಅಭಿಮಾನಿಯೂ ಆಗಿರುವ ಸಿಂಪಲ್ ಸುನಿ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, 'ABD ಬಾಯಾಗ #ಮನಸ್ಸಿದ್ದರೆಮಾರ್ಗ ಕೇಳೋಕ್ ಚೆಂದೈತಿ' ಎಂದು ಬರೆದು ಪೋಸ್ಟ್ ಮಾಡಿದ್ದಾರೆ. 

ಶುಭ್‌ಮನ್ ಗಿಲ್ ಅವರ ಐಶಾರಾಮಿ ಬಂಗಲೆ ಮೌಲ್ಯ ಕೋಟಿ-ಕೋಟಿ..! ಈ ಬಂಗಲೆಯೊಳಗೆ ಅಂತದ್ದೇನಿದೆ?

ABD ಬಾಯಾಗ
ಕೇಳೋಕ್ ಚೆಂದೈತಿ pic.twitter.com/Wy72uB6Nph

— ಸುನಿ/SuNi (@SimpleSuni)

ಇನ್ನು 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೇ ಮಾರ್ಚ್ 22ರಿಂದ ಆರಂಭವಾಗಲಿದ್ದು, ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ. ಚೊಚ್ಚಲ ಐಪಿಎಲ್ ಟ್ರೋಫಿ ಕನವರಿಕೆಯಲ್ಲಿರುವ ಆರ್‌ಸಿಬಿ ತಂಡವು ಈ ಬಾರಿಯಾದರೂ ಕಪ್ ಗೆಲ್ಲಲಿ ಎನ್ನುವುದು ಆರ್‌ಸಿಬಿ ಅಭಿಮಾನಿಗಳ ಹಾರೈಕೆಯಾಗಿದೆ.

click me!