ಶೀಘ್ರದಲ್ಲಿ ಡಿವಿಲಿಯರ್ಸ್ ತಂಡಕ್ಕೆ ವಾಪಸ್; ನಾಯಕ ಡುಪ್ಲೆಸಿಸ್ ಸ್ಪಷ್ಟನೆ!

Published : Dec 17, 2019, 02:41 PM IST
ಶೀಘ್ರದಲ್ಲಿ ಡಿವಿಲಿಯರ್ಸ್ ತಂಡಕ್ಕೆ ವಾಪಸ್; ನಾಯಕ ಡುಪ್ಲೆಸಿಸ್ ಸ್ಪಷ್ಟನೆ!

ಸಾರಾಂಶ

ಸೌತ್ ಆಫ್ರಿಕಾ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಮತ್ತೆ ತಂಡಕ್ಕೆ ಕಮ್‌ಬ್ಯಾಕ್ ಮಾಡುತ್ತಾರಾ? ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ, ಲೀಗ್ ಟೂರ್ನಿಯಲ್ಲಿ ಮಾತ್ರ ಕಾಣಿಸಿಕೊಂಡಿರುವ ಎಬಿಡಿ, ಸೌತ್ ಆಫ್ರಿಕಾ ತಂಡ ಸೇರಿಕೊಳ್ಳಲು ರೆಡಿಯಾಗಿದ್ದಾರೆ. ಈ ಕುರಿತು ನಾಯಕ ಫಾಫ್ ಡುಪ್ಲೆಸಿಸ್ ಮಾಹಿತಿ ಬಹಿರಂಗ ಪಡಿಸಿದ್ದಾರೆ. 

ಜೋಹಾನ್ಸ್‌ಬರ್ಗ್(ಡಿ.17): ವಿಶ್ವ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿ ಸುದ್ದಾ ಕಾದಿದೆ. ಎಲ್ಲಾ ಮಾದರಿ ಕ್ರಿಕೆಟ್‌ಗೆ ದಿಢೀರ್ ವಿದಾಯ ಹೇಳಿ ಅಚ್ಚರಿ ಮೂಡಿಸಿದ್ದ ಸೌತ್ ಆಫ್ರಿಕಾ ಸ್ಫೋಟಕ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಮತ್ತೆ ತಂಡಕ್ಕೆ ವಾಪಸ್ಸಾಗುವ ಸಾಧ್ಯತೆ ಹೆಚ್ಚಿದೆ. ಈಗಾಲೇ ತಂಡದ ನೂತನ ಕೋಚ್ ಮಾರ್ಕ್ ಬೌಷರ್ ಡಿವಿಲಿಯರ್ಸ್ ಕಮ್‌ಬ್ಯಾಕ್  ಕುರಿತು ಬೆಳಕು ಚೆಲ್ಲಿದ್ದರೆ, ಇದೀಗ ನಾಯಕ ಫಾಫ್ ಡುಪ್ಲೆಸಿಸ್ ಸ್ಪಷ್ಟ ಪಡಿಸಿದ್ದಾರೆ.

ಇದನ್ನೂ ಓದಿ: MSL 2019: ಐಪಿಎಲ್‌ಗೂ ಮುನ್ನ ಎಬಿಡಿ ಭರ್ಜರಿ ಫಾರ್ಮ್; 360 ಡಿಗ್ರಿ ಪರ್ಫಾಮೆನ್ಸ್!

ಕಳೆದ 3 ತಿಂಗಳಿಂದ ಡಿವಿಲಿಯರ್ಸ್ ಜೊತೆ ಮಾತುಕತೆ ನಡೆಯುತ್ತಿದೆ. ಮಾರ್ಕ್ ಬೌಷರ್ ತಂಡದ ಕೋಚ್ ಜವಾಬ್ದಾರಿ ವಹಿಸಿದ ಬೆನ್ನಲ್ಲೇ ಡಿವಿಲಿಯರ್ಸ್ ವಾಪಸ್ ಕರೆತರುವ ಕಾರ್ಯಕ್ಕೆ ಮತ್ತಷ್ಟು ವೇಗ ಸಿಕ್ಕಿದೆ. ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೂ ಮೊದಲು ಡಿವಿಲಿಯರ್ಸ್ ತಂಡಕ್ಕೆ ಕಮ್‌ಬ್ಯಾಕ್ ಮಾಡಲಿದ್ದಾರೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇದನ್ನೂ ಓದಿ: ಪಾಕ್ ಸೂಪರ್ ಲೀಗ್ ಟೂರ್ನಿಯಿಂದ ಹಿಂದೆ ಸರಿದ ಎಬಿ ಡಿವಿಲಿಯರ್ಸ್!

ಡಿವಿಲಿಯರ್ಸ್ ವಿದಾಯದ ಬಳಿಕವೂ ಟಿ20 ಲೀಗ್ ಕ್ರಿಕೆಟ್ ಆಡುತ್ತಿದ್ದಾರೆ. ಹೀಗಾಗಿ ಮತ್ತೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಆಡುವುದು ಎಬಿಡಿಗೆ ಕಷ್ಟವಾಗಲ್ಲ. ಎಬಿಡಿ ತಂಡ ಸೇರಿಕೊಂಡರೆ ಮುಂಬರುವ ಟಿ20  ವಿಶ್ವಕಪ್ ಟೂರ್ನಿಯಲ್ಲಿ ಸೌತ್ ಆಫ್ರಿಕಾ ಅತ್ಯುತ್ತಮ ಪ್ರದರ್ಶನ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

2019ರ ವಿಶ್ವಕಪ್ ಟೂರ್ನಿಗೂ ಮುನ್ನ ಡಿವಿಲಿಯರ್ಸ್ ಡಿಢೀರ್ ವಿದಾಯ ಹೇಳಿದ್ದರು. ಇದು ವಿಶ್ವ ಕ್ರಿಕೆಟ್ ಅಭಿಮಾನಿಗಳಿಗೆ ಶಾಕ್ ನೀಡಿತ್ತು. 2019ರ ವಿಶ್ವಕಪ್ ಟೂರ್ನಿಗೆ ಎಬಿಡಿ ಕರೆತರುವ ಪ್ರಯತ್ನ ನಡೆದಿತ್ತು. ಆದರೆ ಕೈಗೂಡಿರಲಿಲ್ಲ. ಇದೀಗ ಟಿ20 ವಿಶ್ವಕಪ್ ಟೂರ್ನಿಗೆ ಎಬಿಡಿ ಮರಳುವ ಸಾಧ್ಯತೆ ಹೆಚ್ಚಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?