
ನವದೆಹಲಿ: ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಕಳೆದೊಂದು ವರ್ಷದಿಂದ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ಸೂರ್ಯಕುಮಾರ್ ಯಾದವ್ ಮೇಲೆ ನಟಿ ಹಾಗೂ ಮಾಡೆಲ್ ಖುಷಿ ಮುಖರ್ಜಿ ಆಡಿರುವ ಮಾತುಗಳು ಇದೀಗ ಕ್ರಿಕೆಟ್ ವಲಯದಲ್ಲಿ ಸಂಚಲನ ಮೂಡಿಸಿವೆ.
ತಮ್ಮ ಬೋಲ್ಡ್ ಚಾಯ್ಸ್ ಫ್ಯಾಷನ್ ಮೂಲಕವೇ ಸದಾ ಚರ್ಚೆಯ ಕೇಂದ್ರ ಬಿಂದುವಾಗಿರುವ ಖುಷಿ ಮುಖರ್ಜಿ, ಇದೀಗ ಭಾರತ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಕುರಿತಂತೆ ಗುರುತರ ಆರೋಪ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಹಲವು ಕ್ರಿಕೆಟಿಗರು ನನ್ನ ಹಿಂದೆ ಬಿದ್ದಿದ್ದರು. ಈ ಪೈಕಿ ಸೂರ್ಯಕುಮಾರ್ ಯಾದವ್ ನಿರಂತರವಾಗಿ ನಮ್ಮ ಜತೆ ಮೆಸೇಜ್ ಮಾಡುತ್ತಿದ್ದರು ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಖ್ಯಾತ ಮಾಡೆಲ್ ಖುಷಿ ಮುಖರ್ಜಿ, 'ಹಲವು ಕ್ರಿಕೆಟಿಗರು ನನ್ನ ಹಿಂದೆ ಬಿದ್ದಿದ್ದರು. ಈ ಪೈಕಿ ಸೂರ್ಯಕುಮಾರ್ ಯಾದವ್ ಸಾಕಷ್ಟು ಮೆಸೇಜ್ ಮಾಡುತ್ತಿದ್ದರು. ಆದರೆ ನಮ್ಮಿಬ್ಬರ ನಡುವೆ ಹೆಚ್ಚಿನ ಮಾತುಕತೆ ನಡೆದಿಲ್ಲ. ನಾನು ಅವರ ಜತೆ ಸಂಪರ್ಕ ಹೊಂದಲು ಬಯಸಲಿಲ್ಲ. ಯಾರೊಂದಿಗೂ ಲಿಂಕ್ ಆಗುವುದು ನನಗೆ ಇಷ್ಟವಿಲ್ಲ. ಹೀಗಾಗಿ ನಮ್ಮ ನಡುವೆ ಯಾವುದೇ ಸಂಪರ್ಕವಿಲ್ಲ" ಎಂದು ಹೇಳಿದ್ದಾರೆ.
ದಕ್ಷಿಣ ಭಾರತದ ಸಿನಿಮಾಗಳ ಜತೆ ರಿಯಾಲಿಟಿ ಶೋ ಹಾಗೂ ಬೋಲ್ಡ್ ವೆಬ್ ಸೀರಿಸ್‌ನಲ್ಲಿ ಖುಷಿ ಮುಖರ್ಜಿಗೆ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಹಾಗೂ ಗಮನ ಸೆಳೆಯುವಂತ ಹೇಳಿಕೆ ನೀಡುವುದು ಹೊಸತೇನಲ್ಲ. 24 ನವೆಂಬರ್ 1996ರಲ್ಲಿ ಕೋಲ್ಕತಾದಲ್ಲಿ ಜನಿಸಿದ ಖುಷಿ ಮುಖರ್ಜಿ, 2013ರಲ್ಲಿ ತಮಿಳಿನ ಅಂಜಲ್ ಥುರಾಯಿ ಸಿನಿಮಾದಲ್ಲಿ ನಟಿಸುವ ಮೂಲಕ ತಮ್ಮ ವೃತ್ತಿಜೀವನವನ್ನು ಆರಂಭಿಸಿದರು. ಇದಾದ ಬಳಿಕ ತೆಲುಗಿನ ಡೋಂಗ್ ಪ್ರೇಮಾ, ಹಾರ್ಟ್ ಅಟ್ಯಾಕ್ ಹಾಗೂ ಬಾಲಿವುಡ್‌ನಲ್ಲಿ ಶೃಂಗಾರ್ ಸಿನಿಮಾದಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು. ಇದಷ್ಟೇ ಅಲ್ಲದೇ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಜನಮನ ಸೆಳಯುವಲ್ಲಿ ಯಶಸ್ವಿಯಾಗಿದ್ದರು.
ಖುಷಿ MTV ಯ ಸ್ಪ್ಲಿಟ್ಸ್‌ವಿಲ್ಲಾ 10 ಮತ್ತು ಲವ್ ಸ್ಕೂಲ್ 3 ನಲ್ಲಿ ಕಾಣಿಸಿಕೊಳ್ಳುವ ಮೂಲಕ ಹೆಚ್ಚು ಜನಪ್ರಿಯರಾದರು. ಅವರು ಬಾಲ್ವೀರ್ ರಿಟರ್ನ್ಸ್‌ನಲ್ಲಿ ಜ್ವಾಲಾ ಪರಿ ಮತ್ತು ಪೌರಾಣಿಕ ನಾಟಕ ಕಹತ್ ಹನುಮಾನ್ ಜೈ ಶ್ರೀ ರಾಮ್‌ನಂತಹ ಜನಪ್ರಿಯ ಟಿವಿ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.ಇದರ ಜತೆಗೆ ಅವರು ಅಡಲ್ಟ್ ಥೀಮ್ ಇರುವ ಭಾರತೀಯ ವೆಬ್ ಸರಣಿಯ ಪ್ರಸಿದ್ಧ ಮುಖವಾಗಿಯೂ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.
ಇನ್ನು ಸೂರ್ಯಕುಮಾರ್ ಯಾದವ್ ವಿಚಾರಕ್ಕೆ ಬರುವುದಾದರೇ ಮಂಗಳೂರು ಮೂಲದ ತಮ್ಮ ಬಾಲ್ಯದ ಗೆಳತಿ ದಿವಿಶಾ ಶೆಟ್ಟಿ ಅವರನ್ನು ಮದುವೆಯಾಗಿದ್ದಾರೆ. ಸಾಕಷ್ಟು ವರ್ಷಗಳ ಕಾಲ ಡೇಟಿಂಗ್ ನಡೆಸಿದ ಈ ಜೋಡಿ 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ಇನ್ನು ಸದ್ಯ ಭಾರತ ಟಿ20 ತಂಡದ ನಾಯಕರಾಗಿರುವ ಸೂರ್ಯಕುಮಾರ್ ಯಾದವ್, 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
2025ರಲ್ಲಿ ಸೂರ್ಯಕುಮಾರ್ ಯಾದವ್ ಭಾರತ ಪರ 19 ಟಿ20 ಪಂದ್ಯಗಳನ್ನಾಡಿ ಕೇವಲ 13.62ರ ಬ್ಯಾಟಿಂಗ್ ಸರಾಸರಿಯಲ್ಲಿ ಕೇವಲ 218 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಈ ವರ್ಷ ಸೂರ್ಯ ಒಂದೇ ಒಂದು ಅರ್ಧಶತಕ ಸಿಡಿಸಿಲ್ಲ. ಅವರ ವೈಯುಕ್ತಿಕ ಗರಿಷ್ಠ ಸ್ಕೋರ್ ಅಜೇಯ 47 ರನ್ ಮಾತ್ರ. ಇದೆಲ್ಲಕ್ಕಿಂತ ಹೆಚ್ಚು ತಲೆನೋವು ಹೆಚ್ಚುವಂತೆ ಮಾಡಿದ್ದು ಸೂರ್ಯಕುಮಾರ್ ಯಾದವ್ ಅವರ ಬ್ಯಾಟಿಂಗ್ ಸ್ಟ್ರೈಕ್‌ರೇಟ್. ಸೂರ್ಯ ಕೇವಲ 123.16 ಸ್ಟ್ರೈಕ್‌ರೇಟ್‌ನಲ್ಲಿ ರನ್ ಗಳಿಸಿದ್ದಾರೆ. ಇದು ಟಿ20 ಕ್ರಿಕೆಟ್‌ನಲ್ಲಿ ಸಾಧಾರಣ ಸ್ಟ್ರೈಕ್‌ರೇಟ್ ಎನಿಸಿಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.