
ಮುಂಬೈ(ನ.21) ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡು ಭಾರತ ಇದೀಗ ಸತತ ಸರಣಿಗೆ ಸಜ್ಜಾಗುತ್ತಿದೆ. ನವೆಂಬರ್ 23ರಿಂದ ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಆರಂಭಗೊಳ್ಳುತ್ತಿದೆ. ಬಳಿಕ ಸೌತ್ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಇದೀಗ ಜನವರಿಯಲ್ಲಿ ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಟಿ20 ಸರಣಿ ವೇಳಾಪಟ್ಟಿ ಪ್ರಕಟಗೊಂಡಿದೆ. 3 ಪಂದ್ಯದ ಟಿ20 ಸರಣಿಗೆ ಭಾರತ ಆತಿಥ್ಯವಹಿಸಲಿದೆ. ವಿಶೇಷ ಅಂದರೆ ಅಂತಿಮ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಭಾರತ ಹಾಗೂ ಆಫ್ಘಾನಿಸ್ತಾನ ನಡುವಿನ ಮೊದಲ ಟಿ20 ಪಂದ್ಯ ಜನವರಿ 11ರಂದು ನಡೆಯಲಿದೆ. ಈ ಪಂದ್ಯವನ್ನು ಮೊಹಾಲಿಯಲ್ಲಿ ಆಯೋಜಿಸಲಾಗಿದೆ. ಎರಡನೇ ಪಂದ್ಯ ಜನವರಿ 14 ರಂದು ಇಂದೋರ್‌ನಲ್ಲಿ ಆಯೋಜಿಸಲಾಗಿದೆ. ಇನ್ನು ಮೂರನೇ ಹಾಗೂ ಅಂತಿಮ ಪಂದ್ಯ ಜನವರಿ 17 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ವಿಶ್ವಕಪ್ ಬೆನ್ನಲ್ಲೇ ಐಸಿಸಿಯಿಂದ ಹೊಸ ರೂಲ್ಸ್, ವುಮೆನ್ಸ್ ಕ್ರಿಕೆಟ್‌ನಲ್ಲಿ ಮಂಗಳಮುಖಿಯರಿಗೆ ನಿಷೇಧ!
ಐಸಿಸಿ ವಿಶ್ವಕಪ್ ಟೂರ್ನಿಗಾಗಿ ಆಘ್ಘಾನಿಸ್ತಾನ ಭಾರತ ಪ್ರವಾಸ ಮಾಡಿತ್ತು. ಅದ್ಭುತ ಪ್ರದರ್ಶನ ನೀಡುವ ಮೂಲಕ ಇಂಗ್ಲೆಂಡ್, ಪಾಕಿಸ್ತಾನ ತಂಡವನ್ನೇ ಮಣಿಸಿತ್ತು. ಈ ಮೂಲಕ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಸಂಪಾದಿಸಿತ್ತು. ಇದೀಗ ಜನವರಿ ತಿಂಗಳಲ್ಲಿ ಮತ್ತೆ ಆಫ್ಘಾನಿಸ್ತಾನ ತಂಡ ಟಿ20 ಸರಣಿಗಾಗಿ ಭಾರತ ಪ್ರವಾಸ ಮಾಡಲಿದೆ.
ವಿಶ್ವಕಪ್ ಟೂರ್ನಿ ಮುಗಿಸಿದ ಭಾರತ ಇದೀಗ ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿ ಆಡಲು ಸಜ್ಜಾಗಿದೆ. ನವೆಂಬರ್ 23 ರಿಂದ ಡಿಸೆಂಬರ್ 3ರ ವರೆಗೆ ಟಿ20 ಪಂದ್ಯ ನಡೆಯಲಿದೆ. ವಿಶಾಖಪಟ್ಟಣದಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಇನ್ನು ನವೆಂಬರ್ 26 ರಂದು ತಿರುವನಂತಪುರದಲ್ಲಿ 2ನೇ ಪಂದ್ಯ ನಡೆಯಲಿದೆ. 3ನೇ ಪಂದ್ಯ ನವೆಂಬರ್ 28ರಂದು ಗುವ್ಹಾಟಿಯಲ್ಲಿ ಆಯೋಜಿಸಲಾಗಿದೆ. ಅಂತಿಮ 2 ಪಂದ್ಯದ ಸ್ಥಳ ಬದಲಿಸಲಾಗಿದೆ. ಡಿಸೆಂಬರ್ 1 ರಂದು ನಡೆಯಲಿರುವ 4ನೇ ಟಿ20 ಪಂದ್ಯವನ್ನು ರಾಯ್‌ಪುರಕ್ಕೆ ಬದಲಾಯಿಸಲಾಗಿದೆ. ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 5ನೇ ಹಾಗೂ ಅಂತಿಮ ಟಿ20 ಪಂದ್ಯ ಡಿಸೆಂಬರ್ 3 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
10ರಲ್ಲಿ ಪಾಸಾಗಿ 11ರಲ್ಲಿ ಫೇಲಾದ್ರಾ ರೋಹಿತ್ ಶರ್ಮಾ..? ಟೀಂ ಇಂಡಿಯಾ ಕ್ಯಾಪ್ಟನ್ ಮಾಡಿದ ಯಡವಟ್ಟೇನು?
ಈ ಸರಣಿ ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ ಸಂಪೂರ್ಣ ತಂಡ ಸೌತ್ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಡಿಸೆಂಬರ್ 10 ರಿಂದ ಜನನವರಿ 07ರ ವರೆಗೆ ಭಾರತ ತಂಜ ಸೌತ್ ಆಫ್ರಿಕಾ ವಿರುದ್ದ ಸರಣಿ ಆಡಲಿದೆ. ಸೌತ್ ಆಫ್ರಿಕಾ ವಿರುದ್ಧ ಭಾರತ 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯದ ಸರಣಿ ಆಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.