
ಅಹಮದಾಬಾದ್: ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಲ್ಲಿನ ಫಾರ್ಮ್ ಮುಂದುವರೆಸಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆ ಎಲ್ ರಾಹುಲ್, ಇದೀಗ ವೆಸ್ಟ್ ಇಂಡೀಸ್ ಎದುರಿನ ಮೊದಲ ಟೆಸ್ಟ್‌ನಲ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ತವರಿನಲ್ಲಿ ಬರೋಬ್ಬರಿ 8 ವರ್ಷಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. ರಾಹುಲ್ ಅವರ ಶತಕದ ನೆರವಿನಿಂದ ಟೀಂ ಇಂಡಿಯಾ ಎರಡನೇ ದಿನದಾಟದ ಮೊದಲ ಸೆಷನ್‌ನಲ್ಲಿ 3 ವಿಕೆಟ್ ಕಳೆದುಕೊಂಡು 213 ರನ್ ಸಿಡಿಸಿದ್ದು, ಒಟ್ಟಾರೆ 51 ರನ್ ಮುನ್ನಡೆ ಸಾಧಿಸಿದೆ.
ಕನ್ನಡಿಗ ಕೆ ಎಲ್ ರಾಹುಲ್ 8 ವರ್ಷಗಳ ಹಿಂದೆ ಅಂದರೆ 2016ರಲ್ಲಿ ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ಎದುರಿನ ಟೆಸ್ಟ್‌ನಲ್ಲಿ ಕೊನೆಯ ಬಾರಿಗೆ ತವರಿನಲ್ಲಿ ಶತಕ ಸಿಡಿಸಿದ್ದರು. ಅದೇ ಟೆಸ್ಟ್‌ನಲ್ಲಿ ಕರುಣ್ ನಾಯರ್ ತ್ರಿಶತಕ ಸಿಡಿಸಿದ್ದರು. ಇದಾದ ಬಳಿಕ ರಾಹುಲ್ ತವರಿನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮೂರಂಕಿ ಮೊತ್ತ ದಾಖಲಿಸಲು ಪದೇ ಪದೇ ವಿಫಲವಾಗುತ್ತಾ ಬಂದಿದ್ದರು. ಆದರೆ ಇದೀಗ ವಿಂಡೀಸ್ ಎದುರು ಶತಕ ಸಿಡಿಸುವ ಮೂಲಕ ತವರಿನಲ್ಲಿ ಟೆಸ್ಟ್ ಶತಕದ ಬರ ನೀಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆರಂಭದಿಂದಲೂ ಸಾಕಷ್ಟು ಎಚ್ಚರಿಕೆಯಿಂದ ಬ್ಯಾಟ್ ಬೀಸಿದ ಕೆ ಎಲ್ ರಾಹುಲ್ 190 ಎಸೆತಗಳನ್ನು ಎದುರಿಸಿ 12 ಬೌಂಡರಿ ಸಹಿತ ಮೂರಂಕಿ ಮೊತ್ತ ದಾಖಲಿಸಿದರು.
ಇದಕ್ಕೂ 122 ರನ್‌ಗಳೊಂದಿಗೆ ಎರಡನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾ ಮತ್ತೊಮ್ಮೆ ಎಚ್ಚರಿಕೆಯ ಆರಂಭ ಪಡೆಯಿತು. ಕೆ ಎಲ್ ರಾಹುಲ್ ಹಾಗೂ ಶುಭ್‌ಮನ್ ಗಿಲ್ ಜೋಡಿ ಮೂರನೇ ವಿಕೆಟ್‌ಗೆ 98 ರನ್‌ಗಳ ಅಮೂಲ್ಯ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಯಿತು. ಶುಭ್‌ಮನ್ ಗಿಲ್ 100 ಎಸೆತಗಳನ್ನು ಎದುರಿಸಿ 5 ಬೌಂಡರಿ ಸಹಿತ 50 ರನ್ ಗಳಿಸಿ ನಾಯಕ ರೋಸ್ಟನ್ ಚೇಸ್‌ಗೆ ವಿಕೆಟ್ ಒಪ್ಪಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.