ಭಾರತದ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ತಂಡ ಆಯ್ಕೆ ಮಾಡಿದ ಅಜಿಂಕ್ಯ ರಹಾನೆ..! ಕೊಹ್ಲಿ ಸೇರಿ ಈ ಮೂರು ಸ್ಟಾರ್ ಆಟಗಾರರಿಗಿಲ್ಲ ಸ್ಥಾನ

Published : Oct 25, 2026, 01:50 PM IST
Virat Kohli Ajinkya Rahane Jasprit Bumrah

ಸಾರಾಂಶ

ಮಾಜಿ ಕ್ರಿಕೆಟಿಗ ಅಜಿಂಕ್ಯ ರಹಾನೆ ಭಾರತದ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ತಂಡವನ್ನು ಪ್ರಕಟಿಸಿದ್ದಾರೆ. ಎಂ.ಎಸ್. ಧೋನಿ ನಾಯಕತ್ವದ ಈ ತಂಡದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಜಸ್ಪ್ರೀತ್ ಬುಮ್ರಾಗೆ ಸ್ಥಾನ ನೀಡದಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

Rahane's All-Time India Test XI: Full Team List: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭಾರತದ ದಿಗ್ಗಜ ಬ್ಯಾಟರ್‌ಗಳಾಗಿ ಬೆಳೆದು ನಿಂತಿದ್ದಾರೆ. ಇನ್ನು ಜಸ್ಪ್ರೀತ್ ಬುಮ್ರಾ ಮೂರು ಮಾದರಿಯ ಕ್ರಿಕೆಟ್‌ನಲ್ಲೂ ಭಾರತದ ನಂ.1 ವೇಗದ ಬೌಲರ್ ಎನಿಸಿಕೊಂಡಿದ್ದಾರೆ. ಆದರೆ ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅಜಿಂಕ್ಯ ರಹಾನೆ, ಭಾರತದ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ತಂಡವನ್ನು ಆಯ್ಕೆ ಮಾಡಿದ್ದು, ಕೊಹ್ಲಿ, ರೋಹಿತ್ ಹಾಗೂ ಬುಮ್ರಾ ಅವರಿಗೆ ಸ್ಥಾನ ನೀಡದೇ ಇರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

38 ವರ್ಷದ ರಹಾನೆ, ಭಾರತದ ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ತಂಡದ ನಾಯಕತ್ವವನ್ನು ವಿಕೆಟ್ ಕೀಪರ್ ಬ್ಯಾಟರ್ ಎಂ ಎಸ್ ಧೋನಿ ಅವರಿಗೆ ನೀಡಿದ್ದಾರೆ. ಅಜಿಂಕ್ಯ ರಹಾನೆ ಧೋನನಿ ನಾಯಕತ್ವದಲ್ಲಿಯೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇನ್ನು ಅಚ್ಚರಿಯ ಸಂಗತಿಯೆಂದರೇ ಮುರುಳಿ ವಿಜಯ್ ಹಾಗೂ ಶಿಖರ್ ಧವನ್ ಅವರನ್ನು ಸಾರ್ವಕಾಲಿಕ ಶ್ರೇಷ್ಠ ಟೆಸ್ಟ್ ತಂಡದ ಆರಂಭಿಕರನ್ನಾಗಿ ಆಯ್ಕೆ ಮಾಡಿದ್ದಾರೆ. ಸ್ಪೋಟಕ ಬ್ಯಾಟರ್ ವಿರೇಂದ್ರ ಸೆಹ್ವಾಗ್ ಅವರಿಗೆ ಆರಂಭಿರನ್ನಾಗಿ ಸ್ಥಾನ ನೀಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ.

ಬಲಿಷ್ಠವಾಗಿದೆ ಮಧ್ಯಮ ಕ್ರಮಾಂಕ

ಇನ್ನು ಮಧ್ಯಮ ಕ್ರಮಾಂಕದಲ್ಲಿ ಮೂರನೇ ಕ್ರಮಾಂಕದಲ್ಲಿ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್, ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ನಾಲ್ಕನೇ ಕ್ರಮಾಂಕದಲ್ಲಿ ಐದನೇ ಕ್ರಮಾಂಕದಲ್ಲಿ ತಮ್ಮನ್ನು ತಾವೇ ರಹಾನೆ ಆಯ್ಕೆ ಮಾಡಿಕೊಂಡಿದ್ದಾರೆ. ಆರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಎಂ ಎಸ್ ಧೋನಿ, ಸ್ಪಿನ್‌ ಆಲ್ರೌಂಡರ್‌ಗಳಾದ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್‌ಗೆ ಏಳು ಹಾಗೂ ಎಂಟನೇ ಕ್ರಮಾಂಕದಲ್ಲಿ ಸ್ಥಾನ ನೀಡಿದ್ದಾರೆ. ಇನ್ನು ವೇಗದ ಬೌಲರ್‌ಗಳಾಗಿ ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಹಾಗೂ ಇಶಾಂತ್ ಶರ್ಮಾಗೆ ಸ್ಥಾನ ನೀಡಿದ್ದಾರೆ.

ಬುಮ್ರಾ, ಕೊಹ್ಲಿ, ರೋಹಿತ್‌ಗಿಲ್ಲ ಸ್ಥಾನ:

ಇನ್ನು ಇಂಟ್ರೆಸ್ಟಿಂಗ್ ಸಂಗತಿಯೆಂದರೇ ವಿರಾಟ್ ಕೊಹ್ಲಿ ಬ್ಯಾಟರ್ ಆಗಿ ಹಾಗೂ ನಾಯಕನಾಗಿ ಹೆಚ್ಚು ಯಶಸ್ಸು ಗಳಿಸಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ ತಂಡವು ಮೊದಲ ಸಲ ಆಸೀಸ್ ನೆಲದಲ್ಲಿ ಟೆಸ್ಟ್ ಸರಣಿ ಜಯಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೂಡಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದಾರೆ. ಇನ್ನು ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಎಷ್ಟು ಅಪಾಯಕಾರಿ ವೇಗದ ಬೌಲರ್ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಹೀಗಿದ್ದೂ, ಈ ಮೂವರಿಗೆ ಅಜಿಂಕ್ಯ ರಹಾನೆ ಟೆಸ್ಟ್ ತಂಡದಲ್ಲಿ ಮಣೆಹಾಕದೇ ಇರುವುದು ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಭಾರತ ಪರ 85 ಟೆಸ್ಟ್ ಪಂದ್ಯಗಳನ್ನಾಡಿ 38.46ರ ಬ್ಯಾಟಿಂಗ್ ಸರಾಸರಿಯಲ್ಲಿ ರಹಾನೆ 5,077 ರನ್ ಬಾರಿಸಿದ್ದಾರೆ. ಇನ್ನು ಟೀಂ ಇಂಡಿಯಾ ಪರ 90 ಏಕದಿನ ಹಾಗೂ 20 ಟಿ20 ಪಂದ್ಯಗಳನ್ನಾಡಿ ಕ್ರಮವಾಗಿ 2962 ಹಾಗೂ 375 ರನ್ ಬಾರಿಸಿದ್ದರು. ರಹಾನೆ ಇದೇ ಜುಲೈನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.

ಅಜಿಂಕ್ಯ ರಹಾನೆ ಆಯ್ಕೆ ಮಾಡಿದ ಸಾರ್ವಕಾಲಿಕ ಶ್ರೇಷ್ಠ ಭಾರತ ಟೆಸ್ಟ್ ತಂಡ ಹೀಗಿದೆ:

ಮುರುಳಿ ವಿಜಯ್, ಶಿಖರ್ ಧವನ್, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ಅಜಿಂಕ್ಯ ರಹಾನೆ, ಎಂ ಎಸ್ ಧೋನಿ(ನಾಯಕ, ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

IND vs NZ 3rd T20 ಮ್ಯಾಚ್: ಅನುಭವಿ ಬ್ಯಾಟರ್ ಎಂಟ್ರಿ, ಇಬ್ಬರು ಸ್ಟಾರ್ ಔಟ್; ಸಂಭಾವ್ಯ ಪ್ಲೇಯಿಂಗ್ ಇಲೆವೆನ್
Vaibhav: ಅವನ ಕೈಲಿ ಅದು ಸಾಧ್ಯವೇ ಇಲ್ಲ; ವೈಭವ್ ಆಟ ನೋಡಿ ಮ್ಯಾನೇಜ್‌ಮೆಂಟ್ ವಿರುದ್ಧ ಕೆಂಡಕಾರಿದ ಮಾಜಿ ಪ್ಲೇಯರ್