
ಢಾಕಾ(ಜ.23): ತಮೀಮ್ ಇಕ್ಬಾಲ್ (50) ಅರ್ಧಶತಕ ಹಾಗೂ ಮೆಹದಿ ಹಸನ್ (4-25) ಉತ್ತಮ ಪ್ರದರ್ಶನದ ನೆರವಿನಿಂದ ಬಾಂಗ್ಲಾದೇಶ, ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ 7 ವಿಕೆಟ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಸರಣಿಯನ್ನು 2-0ಯಿಂದ ಗೆದ್ದುಕೊಂಡಿದೆ.
ಶುಕ್ರವಾರ ಮೊದಲು ಬ್ಯಾಟ್ ಮಾಡಿದ ವಿಂಡೀಸ್ 148 ರನ್‌ಗಳಿಗೆ ಆಲೌಟ್ ಆಯಿತು. ಬಾಂಗ್ಲಾ 33.2 ಓವರಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
ಭಾರತ ಎದುರಿನ ಮೊದಲೆರಡು ಟೆಸ್ಟ್ ಪಂದ್ಯಕ್ಕೆ ಬಲಿಷ್ಠ ಇಂಗ್ಲೆಂಡ್ ತಂಡ ಪ್ರಕಟ..!
ಸ್ಕೋರ್: ವಿಂಡೀಸ್ 148/10, ಬಾಂಗ್ಲಾ 149/3
ಲಂಕಾಕ್ಕೆ ಮ್ಯಾಥ್ಯೂಸ್ ಶತಕದ ಆಸರೆ
ಗಾಲೆ: ಮಾಜಿ ನಾಯಕ ಏಂಜೆಲೋ ಮ್ಯಾಥ್ಯೂಸ್ ಅಜೇಯ ಶತಕದ ನೆರವಿನಿಂದ ಶ್ರೀಲಂಕಾ, ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಗೌರವ ಮೊತ್ತದತ್ತ ಮುನ್ನಡೆದಿದೆ.
ಶುಕ್ರವಾರ ಇಲ್ಲಿ ಆರಂಭವಾದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಲಂಕಾ, ಮ್ಯಾಥ್ಯೂಸ್ (107*) ಹೋರಾಟದಿಂದ ದಿನದಂತ್ಯಕ್ಕೆ 4 ವಿಕೆಟ್‌ಗೆ 229 ರನ್ ಗಳಿಸಿದೆ. ಇಂಗ್ಲೆಂಡ್ ಪರ ವೇಗಿ ಜೇಮ್ಸ್ ಆ್ಯಂಡರ್ಸನ್ 3 ವಿಕೆಟ್ ಪಡೆದರು.
ಸ್ಕೋರ್: ಶ್ರೀಲಂಕಾ 229/4 (ಮೊದಲ ದಿನದಂತ್ಯಕ್ಕೆ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.