ಅನುಷ್ಕಾ ಶರ್ಮಾ ಕೂಡಾ ಪಂದ್ಯ ಆರಂಭಕ್ಕೂ ಮುನ್ನವೇ ಅನುಷ್ಕಾ ಶರ್ಮಾ, ನರೇಂದ್ರ ಮೋದಿ ಸ್ಟೇಡಿಯಂನತ್ತ ಬಂದಿದ್ದಾರೆ. ಇದಷ್ಟೇ ಅಲ್ಲದೇ ಹಲವು ಸೆಲಿಬ್ರಿಟಿಗಳು ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ಬಂದು ಪಂದ್ಯವನ್ನು ಎಂಜಾಯ್ ಮಾಡುತ್ತಿದ್ದಾರೆ.
ಅಹಮದಾಬಾದ್(ಅ.14): ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯ ಎನಿಸಿಕೊಂಡಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಈ ಪಂದ್ಯವನ್ನು ಕಣ್ತುಂಬಿಕೊಳ್ಳಲಿ ಇಡೀ ಕ್ರಿಕೆಟ್ ಜಗತ್ತೇ ತುದಿಗಾಲಿನಲ್ಲಿ ನಿಂತಿತ್ತು. ಇದೀಗ ಪಾಕಿಸ್ತಾನ ಎದುರು ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುವ ನಿರ್ಧಾರ ತೆಗೆದುಕೊಂಡು ಕಣಕ್ಕಿಳಿದಿದೆ.
ಈ ಹೈವೋಲ್ಟೇಜ್ ಪಂದ್ಯಕ್ಕೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಆಗಿರುವ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಸುಮಾರು 1 ಲಕ್ಷದ 32 ಸಾವಿರ ಮಂದಿ ಏಕಕಾಲದಲ್ಲಿ ಕುಳಿತು ಪಂದ್ಯ ವೀಕ್ಷಿಸುವ ಸಾಮರ್ಥ್ಯವನ್ನು ಹೊಂದಿರುವ ನರೇಂದ್ರ ಮೋದಿ ಸ್ಟೇಡಿಯಂ ಸಂಪೂರ್ಣ ನೀಲಿಮಯವಾಗಿದ್ದು, ಭಾರತದ ಪರ ಜಯಘೋಷಗಳು ಜೋರಾಗಿವೆ. ಇನ್ನು ಈ ಪಂದ್ಯವನ್ನು ವೀಕ್ಷಿಸಲು ಕ್ರಿಕೆಟ್ ದಂತಕಥೆ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಸ್ಟೇಡಿಯಂಗೆ ಬಂದು ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ.
undefined
ICC World Cup 2023: ಬದ್ದ ಎದುರಾಳಿ ಕಾಳಗದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ..!
ಈ ಸಂದರ್ಭದಲ್ಲಿ ಮಾಧ್ಯಮದವರ ಜತೆಗೆ ಮಾತನಾಡಿದ ಸಚಿನ್ ತೆಂಡುಲ್ಕರ್, "ನಾನು ಇಲ್ಲಿರುವುದು ತಂಡವನ್ನು ಬೆಂಬಲಿಸುವುದಕ್ಕೆ. ನಾವೆಲ್ಲರೂ ಅಂದುಕೊಂಡ ಫಲಿತಾಂಶವೇ ನಮಗೆ ಸಿಗಲಿದೆ ಎನ್ನುವ ವಿಶ್ವಾಸವಿದೆ" ಎಂದು ಮಾಸ್ಟರ್ ಬ್ಲಾಸ್ಟರ್ ಚುಟುಕಾಗಿಯೇ ಉತ್ತರಿಸಿದ್ದಾರೆ.
God of Cricket Sachin Tendulkar with World Cup Trophy at Narendra Modi Stadium. pic.twitter.com/y20Dp62wBh
— Johns. (@CricCrazyJohns)ಇನ್ನು ಅನುಷ್ಕಾ ಶರ್ಮಾ ಕೂಡಾ ಪಂದ್ಯ ಆರಂಭಕ್ಕೂ ಮುನ್ನವೇ ಅನುಷ್ಕಾ ಶರ್ಮಾ, ನರೇಂದ್ರ ಮೋದಿ ಸ್ಟೇಡಿಯಂನತ್ತ ಬಂದಿದ್ದಾರೆ. ಇದಷ್ಟೇ ಅಲ್ಲದೇ ಹಲವು ಸೆಲಿಬ್ರಿಟಿಗಳು ಪಂದ್ಯ ವೀಕ್ಷಿಸಲು ಅಹಮದಾಬಾದ್‌ಗೆ ಬಂದು ಪಂದ್ಯವನ್ನು ಎಂಜಾಯ್ ಮಾಡುತ್ತಿದ್ದಾರೆ.
| Gujarat: Actress Anushka Sharma arrives in Ahmedabad for the India Vs Pakistan ICC Cricket World Cup match in Ahmedabad today pic.twitter.com/vTJVYXsg68
— ANI (@ANI)ಇನ್ನು ಭಾರತ ಹಾಗೂ ಪಾಕಿಸ್ತಾನ ತಂಡಗಳು ಪ್ರಸಕ್ತ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಲಾ ಎರಡು ಪಂದ್ಯಗಳನ್ನಾಡಿದ್ದು, ಎರಡು ಪಂದ್ಯಗಳಲ್ಲೂ ಗೆಲುವಿನ ನಗೆ ಬೀರಿವೆ. ಇದೀಗ ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿ ಉಭಯ ತಂಡಗಳು ಕಣಕ್ಕಿಳಿದಿವೆ. ಮೊದಲ 28 ಓವರ್ ಅಂತ್ಯದ ವೇಳೆಗೆ ಪಾಕಿಸ್ತಾನ ತಂಡವು 2 ವಿಕೆಟ್ ಕಳೆದುಕೊಂಡು 144 ರನ್ ಬಾರಿಸಿದ್ದು, ನಾಯಕ ಬಾಬರ್ ಅಜಂ 45 ಹಾಗೂ ಮೊಹಮ್ಮದ್ ರಿಜ್ವಾನ್ 42 ರನ್ ಬಾರಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.
ತಂಡದ ಆಟಗಾರರ ಪಟ್ಟಿ ಹೀಗಿದೆ ನೋಡಿ:
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್ ಉಲ್ ಹಕ್, ಬಾಬರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕಾರ್ ಅಹಮ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹಸನ್/ವಸೀಂ, ಹ್ಯಾರಿಸ್ ರೌಫ್.