
ಮುಂಬೈ(ಜು.11): ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಆಟದಿಂದ ಮಾತ್ರವಲ್ಲ, ಫಿಟ್ನೆಸ್ ಹಾಗೂ ಆಹಾರ ಪದ್ಧತಿಯಿಂದಲೂ ಕ್ರೀಡಾಪಟುಗಳಿಗೆ ಮಾದರಿಯಾಗಿದ್ದಾರೆ.
ಕೊಹ್ಲಿ ತಮ್ಮ ಡಯೆಟ್‌ಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಾರೆ ಎನ್ನುವುದನ್ನು ಅವರ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸಾಮಾಜಿಕ ತಾಣಗಳಲ್ಲಿ ಬಹಿರಂಗಗೊಳಿಸಿದ್ದಾರೆ. ಇಂತಿಷ್ಟೇ ಪ್ರಮಾಣದಲ್ಲಿ ಆಹಾರ ಸ್ವೀಕರಿಸಬೇಕು ಎನ್ನುವ ಉದ್ದೇಶದಿಂದ ಕೊಹ್ಲಿ ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ತಕ್ಕಡಿಯೊಂದನ್ನು ಇಟ್ಟುಕೊಂಡಿದ್ದಾರೆ. ಕೊಹ್ಲಿ 100 ಗ್ರಾಂ ಅವಲಕ್ಕಿಯನ್ನು ತೂಕ ಮಾಡಿ ಸೇವಿಸುತ್ತಿರುವ ವಿಡಿಯೋವನ್ನು ಅನುಷ್ಕಾ ಇನ್‌ಸ್ಟಾಗ್ರಾಂನಲ್ಲಿ ಹಾಕಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.
ಕ್ಯಾಪ್ಟನ್ ಕೊಹ್ಲಿಗೆ ನೀರ್ ದೋಸೆ ಕೊಟ್ಟ ಶ್ರೇಯಸ್ ಅಯ್ಯರ್!
ಕೊರೋನಾ ವೈರಸ್‌ನಿಂದಾಗಿ ಎಲ್ಲಾ ಕ್ರೀಡಾಚಟುವಟಿಕೆಗಳು ಸ್ತಬ್ಧವಾಗಿವೆ. ಹೀಗಾಗಿ ವಿರುಷ್ಕಾ ಜೋಡಿ ಮನೆಯಲ್ಲೇ ಬಂಧಿಯಾಗಿದ್ದಾರೆ. ಈ ಬಿಡುವಿನ ಸಮಯವನ್ನು ಸಖತ್ತಾಗಿಯೇ ಎಂಜಾಯ್ ಮಾಡುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಸಹ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಮ್ಮ ಮಾಡಿದ್ದ ನೀರ್ ದೋಸೆ ತಂದು ವಿರಾಟ್ ಕೊಹ್ಲಿಗೆ ನೀಡಿದ್ದರು. ಬಹಳ ದಿನಗಳ ಬಳಿಕ ಇಷ್ಟು ರುಚಿಯಾದ ದೋಸೆಯನ್ನು ಸವಿದಿದ್ದೇನೆ ಎಂದು ಕೊಹ್ಲಿ ಟ್ವೀಟ್ ಮಾಡಿದ್ದರು. ಮಾತ್ರವಲ್ಲ ಅಣಬೆ(ಮೊಶ್ರೂಮ್) ಬಿರಿಯಾನಿಯನ್ನು ಶ್ರೇಯಸ್‌ಗೆ ಕೊಟ್ಟು ಕಳಿಸಿದ್ದರು.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ- ಬಾಲಿವುಡ್ ನಟಿ ಅನುಷ್ಕಾ ಶರ್ಮಾ 2017ರಲ್ಲಿ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮದುವೆ ಬಳಿಕ ನಮ್ಮ ಜೀವನದಲ್ಲಿ ಅಷ್ಟೇನು ಬದಲಾವಣೆಯಾಗಿಲ್ಲ. ಸ್ನೇಹಿತರಂತೆ ಕಾಲ ಕಳೆಯುತ್ತಿದ್ದೇವೆ. ನಮ್ಮಿಬ್ಬರಿಗೂ ಸಮಯ ಸಿಗುವುದೇ ವಿರಳ, ಸಿಕ್ಕ ಸಮಯದಲ್ಲಿ ಪ್ರತಿ ಕ್ಷಣವನ್ನು ಎಂಜಾಯ್ ಮಾಡುತ್ತೇವೆ ಎಂದು ಇತ್ತೀಚೆಗಷ್ಟೇ ಅನುಷ್ಕಾ ಶರ್ಮಾ ಸಂದರ್ಶನವೊಂದರಲ್ಲಿ ತಿಳಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.