ದೆಹಲಿ ಕ್ರಿಕೆಟ್ ಅಧ್ಯಕ್ಷರಾಗಿ ಅರುಣ್ ಜೇಟ್ಲಿ ಪುತ್ರ ರೋಹನ್ ಅವಿರೋಧ ಆಯ್ಕೆ!

Published : Oct 17, 2020, 10:16 PM ISTUpdated : Oct 17, 2020, 10:17 PM IST
ದೆಹಲಿ ಕ್ರಿಕೆಟ್ ಅಧ್ಯಕ್ಷರಾಗಿ ಅರುಣ್ ಜೇಟ್ಲಿ ಪುತ್ರ ರೋಹನ್ ಅವಿರೋಧ ಆಯ್ಕೆ!

ಸಾರಾಂಶ

ಮಾಜಿ ಹಣಕಾಸು ಸಚಿವ, ದಿವಗಂತ ಬಿಜೆಪಿ ನಾಯಕ ಅರುಣ್ ಜೇಟ್ಲಿ ಪುತ್ರ ದೆಹಲಿ ಕ್ರಿಕೆಟ್ ಸಂಸ್ಥೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅರುಣ್ ಜೇಟ್ಲಿ ಬಳಿಕ ಇದೀಗ ಪುತ್ರ ರೋಹನ್ ಜೇಟ್ಲಿ ದೆಹಲಿ ಕ್ರಿಕೆಟ್ ಸಂಸ್ಥೆ ಚುಕ್ಕಾಣಿ ಹಿಡಿದಿದ್ದಾರೆ.  

ದೆಹಲಿ(ಅ.17): ದೆಹಲಿ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಪತ್ರಕರ್ತ ರಜತ್ ಶರ್ಮಾ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ಅವಿರೋಧವಾಗಿ ಕೇಂದ್ರದ ಮಾಜಿ ಹಣಕಾಸು ಸಚಿವ, ಕಳೆದ ವರ್ಷ ನಿಧನರಾದ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ಆಯ್ಕೆಯಾಗಿದ್ದಾರೆ.

ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ರಾಜಕೀಯ; ಅಧ್ಯಕ್ಷ ಸ್ಥಾನಕ್ಕೆ ರಜತ್ ಶರ್ಮಾ ರಾಜೀನಾಮೆ!..

ವೃತ್ತಿಯಲ್ಲಿ ವಕೀಲರಾಗಿರುವ ರೋಹನ್ ಜೇಟ್ಲಿ ಅಂತಿಮ ಕ್ಷಣದಲ್ಲಿ ದೆಹಲಿ ಕ್ರಿಕೆಟ್ ಸಂಸ್ಥೆ ಅಧ್ಯಕ್ಷೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ರೋಹನ್ ಜೇಟ್ಲಿ ಅಖಾಡಕ್ಕೆ ಇಳಿಯುತ್ತಿದ್ದಂತೆ ಇತರ ಎಲ್ಲಾ ಸದಸ್ಯರು ಬೆಂಬಲ ನೀಡಿದ್ದಾರೆ. ಹೀಗಾಗಿ ರೋಹನ್ ಜೇಟ್ಲಿ ಅವಿರೋಧವಾಗಿ ದೆಹಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ದೆಹಲಿ ಕ್ರಿಕೆಟ್‌ ಚುನಾವಣೆ ಸ್ಪರ್ಧಿಸಲು ಗಂಭೀರ್ ಅನರ್ಹ..!.

ಅರುಣ್ ಜೇಟ್ಲಿ 1999ರಿಂದ 2013ರ ವರೆಗೆ ದೆಹಲಿ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇದೀಗ ಅರುಣ್ ಜೇಟ್ಲಿ ಪುತ್ರ ರೋಹನ್ ಜೇಟ್ಲಿ ರಾಷ್ಟ್ರ ರಾಜಧಾನಿ ಕ್ರಿಕೆಟ್ ಆಡಳಿತಕ್ಕೆ ಇಳಿದಿದ್ದಾರೆ.

ನವೆಂಬರ್ 5 ಮತ್ತು 6 ರಂದು ದೆಹಲಿ ಕ್ರಿಕೆಟ್ ಸಂಸ್ಥೆಯ ಖಜಾಂಚಿ, ಕಾರ್ಯದರ್ಶಿ ಸೇರಿದಂತೆ ಇತರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?