Ashes Test Series: ಅಡಿಲೇಡ್‌ ಟೆಸ್ಟ್ ಪಂದ್ಯದಿಂದ ಹೊರಬಿದ್ದ ವೇಗಿ ಜೋಶ್ ಹೇಜಲ್‌ವುಡ್..!

Suvarna News   | Asianet News
Published : Dec 13, 2021, 02:16 PM IST
Ashes Test Series: ಅಡಿಲೇಡ್‌ ಟೆಸ್ಟ್ ಪಂದ್ಯದಿಂದ ಹೊರಬಿದ್ದ ವೇಗಿ ಜೋಶ್ ಹೇಜಲ್‌ವುಡ್..!

ಸಾರಾಂಶ

* ಆ್ಯಷಸ್ ಟೆಸ್ಟ್‌ ಸರಣಿಯಲ್ಲಿ ಶುಭಾರಂಭ ಮಾಡಿರುವ ಆಸ್ಟ್ರೇಲಿಯಾ * ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ತಂಡದಿಂದ ಹೊರಬಿದ್ದ ಜೋಶ್ ಹೇಜಲ್‌ವುಡ್‌ * ಇಂಗ್ ಎರಡನೇ ಟೆಸ್ಟ್‌ ಪಂದ್ಯಕ್ಕೆ ಅಡಿಲೇಡ್‌ ಮೈದಾನ ಆತಿಥ್ಯ

ಬ್ರಿಸ್ಬೇನ್(ಡಿ.13): ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ (Australia vs England) ನಡುವಿನ ಪ್ರತಿಷ್ಠಿತ ಆ್ಯಷಸ್ ಟೆಸ್ಟ್‌ ಸರಣಿ (Ashes Test Series) ಆರಂಭವಾಗಿದ್ದು, ಮೊದಲ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವು 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಅಡಿಲೇಡ್‌ ಟೆಸ್ಟ್‌ (Adelaide Test) ಪಂದ್ಯ ಆರಂಭಕ್ಕೂ ಮುನ್ನ ಕಾಂಗರೂ ಪಡೆಗೆ ಆಘಾತವೊಂದು ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಜೋಶ್ ಹೇಜಲ್‌ವುಡ್‌ (Josh Hazlewood) ಗಾಯದ ಸಮಸ್ಯೆಯಿಂದಾಗಿ ಎರಡನೇ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ.

ಹೌದು, ಆಸೀಸ್‌ ಬಲಗೈ ವೇಗಿ ಜೋಶ್ ಹೇಜಲ್‌ವುಡ್‌ ಸೊಂಟದ ಸ್ನಾಯು ಸೆಳೆತದಿಂದಾಗಿ ಅಡಿಲೇಡ್‌ನಲ್ಲಿ ಡಿಸೆಂಬರ್ 16ರಿಂದ ಆರಂಭವಾಗಲಿರುವ ಆ್ಯಷಸ್ ಸರಣಿಯ ಎರಡನೇ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ. ಇದೀಗ ಹೇಜಲ್‌ವುಡ್ ಬದಲಿಗೆ ಜೇ ರಿಚರ್ಡ್‌ಸನ್‌(Jhye Richardson), ಆಸೀಸ್ ತಂಡ ಕೂಡಿಕೊಂಡಿದ್ದಾರೆ. ಬ್ರಿಸ್ಬೇನ್‌ನ ಗಾಬಾ ಟೆಸ್ಟ್‌ (Gabba Test) ಪಂದ್ಯದ ವೇಳೆಯೇ ಜೋಶ್ ಹೇಜಲ್‌ವುಡ್‌ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇದೀಗ ಜೋಶ್ ಹೇಜಲ್‌ವುಡ್‌ ಬದಲಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡ (Australian Cricket Team) ಕೂಡಿಕೊಂಡಿರುವ ಜೇ ರಿಚರ್ಡ್‌ಸನ್‌ ಟೆಸ್ಟ್ ವೃತ್ತಿ ಜೀವನದ ಮೂರನೇ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. 2019ರಲ್ಲಿ ಶ್ರೀಲಂಕಾ ವಿರುದ್ದದ ಟೆಸ್ಟ್‌ ಸರಣಿಯಲ್ಲಿ ರೆಡ್ ಬಾಲ್ ಕ್ರಿಕೆಟ್‌ಗೆ ಪಾದಾರ್ಪಣೆ ರಿಚರ್ಡ್‌ಸನ್, ಇದೀಗ ಮತ್ತೆ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. 

ಗಾಬಾ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟದ ವೇಳೆ ಜೋಶ್ ಹೇಜಲ್‌ವುಡ್‌ ಅವರ ಫಿಟ್ನೆಸ್ ಕುರಿತಂತೆ ಅನುಮಾನಗಳು ವ್ಯಕ್ತವಾಗಿದ್ದವು. ನಾಲ್ಕನೇ ದಿನದಾಟದಲ್ಲಿ ಹೇಜಲ್‌ವುಡ್ ಕೇವಲ 8 ಓವರ್‌ಗಳನ್ನಷ್ಟೇ ಬೌಲಿಂಗ್‌ ಮಾಡಿದ್ದರು. ಎರಡನೇ ಇನಿಂಗ್ಸ್‌ ಮುಗಿದ ಬಳಿಕ ಮಾತನಾಡಿದ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್‌ (Pat Cummins), ಹೌದು, ಹೇಜಲ್‌ವುಡ್‌ ಅವರಿಗೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರು ಹೆಚ್ಚು ಹೊತ್ತು ಬೌಲಿಂಗ್‌ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದರು.

ಗಾಬಾ ಟೆಸ್ಟ್‌ ಮುಕ್ತಾಯದ ಬಳಿಕ ಮಾತನಾಡಿದ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಜೋಶ್ ಹೇಜಲ್‌ವುಡ್, ಇದು ಐದು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿಯಾಗಿರುವುದರಿಂದ, ನಾವು ಹೇಜಲ್‌ವುಡ್ ವಿಚಾರದಲ್ಲಿ ಹೆಚ್ಚಿನ ಪ್ರಯೋಗ ನಡೆಸಲು ಮುಂದಾಗಿಲ್ಲ. ಅವರ ಆರೋಗ್ಯದ ಮೇಲೆ ಗಮನವಿಡಲಾಗಿದೆ ಎಂದು ತಿಳಿಸಿದ್ದಾರೆ. 

ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಆಸ್ಟ್ರೇಲಿಯಾ:
ಸಾಂಪ್ರದಾಯಿಕ ಎದುರಾಳಿಗಳೆಂದು ಬಿಂಬಿಸಲ್ಪಟ್ಟಿರುವ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ನಡುವಿನ ಆ್ಯಷಸ್ ಸರಣಿಯ ಮೊದಲ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್‌ ನೇತೃತ್ವದ ಆಸ್ಟ್ರೇಲಿಯಾ ತಂಡವು ಭರ್ಜರಿ ಗೆಲುವು ಸಾಧಿಸುವ ಮೂಲಕ ಸರಣಿಯಲ್ಲಿ ಶುಭಾರಂಭ ಮಾಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಪ್ರವಾಸಿ ಇಂಗ್ಲೆಂಡ್ ತಂಡವು ವೇಗಿ ಪ್ಯಾಟ್ ಕಮಿನ್ಸ್ ಮಾರಕ ದಾಳಿಗೆ ತತ್ತರಿಸಿ ಕೇವಲ 147 ರನ್‌ಗಳಿಗೆ ಸರ್ವಪತನ ಕಂಡಿತ್ತು. ಮೊದಲ ಇನಿಂಗ್ಸ್‌ನಲ್ಲಿ ಪ್ಯಾಟ್ ಕಮಿನ್ಸ್‌ 5 ವಿಕೆಟ್ ಕಬಳಿಸಿದ್ದರು. ಮಿಚೆಲ್ ಸ್ಟಾರ್ಕ್‌, ಜೋಶ್ ಹೇಜಲ್‌ವುಡ್ ತಲಾ 2 ವಿಕೆಟ್ ಕಬಳಿಸಿದ್ದರು. 

ಇನ್ನು ಆಸ್ಟ್ರೇಲಿಯಾ ತಂಡವು ಮೊದಲ ಇನಿಂಗ್ಸ್‌ನಲ್ಲಿ ಡೇವಿಡ್ ವಾರ್ನರ್‌(95) ಆಕರ್ಷಕ ಅರ್ಧಶತಕ ಹಾಗೂ ಟ್ರಾವಿಸ್ ಹೆಡ್(152) ಸ್ಪೋಟಕ ಶತಕದ ನೆರವಿನಿಂದ 425 ರನ್‌ ಬಾರಿಸಿ ಆಲೌಟ್ ಆಯಿತು. ಭಾರೀ ಹಿನ್ನೆಡೆಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್ ತಂಡವು 297 ರನ್ ಬಾರಿಸಿ ಆಲೌಟ್ ಆಗುವ ಮೂಲಕ ಆಸೀಸ್‌ಗೆ ಗೆಲ್ಲಲು ಕೇವಲ 20 ರನ್‌ಗಳ ಗುರಿ ನೀಡಿತ್ತು. ಒಂದು ವಿಕೆಟ್ ಕಳೆದುಕೊಂಡು ಆಸ್ಟ್ರೇಲಿಯಾ ತಂಡವು ಗೆಲುವಿನ ನಗೆ ಬೀರಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌
ಕುಲ್ದೀಪ್-ಪ್ರಸಿದ್ದ್ ಮಾರಕ ದಾಳಿ; ಏಕದಿನ ಸರಣಿ ಗೆಲ್ಲಲು ಭಾರತಕ್ಕೆ ಸ್ಪರ್ಧಾತ್ಮಕ ಗುರಿ