
ಕೊಲೊಂಬೊ(ಮೇ.19): ಕೊರೋನಾ ವೈರಸ್ ಇದೀಗ ಪ್ರತಿ ಕ್ಷೇತ್ರಕ್ಕೆ ಹೊಡೆತ ನೀಡುತ್ತಿದೆ. ಕೊರೋನಾ ನಡುವೆ ಆರಂಭಿಸಿದ ಐಪಿಎಲ್ ಟೂರ್ನಿ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ರದ್ದಾಯಿತು. ಇದೀಗ ಪ್ರತಿಷ್ಠಿತ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಕೊರೋನಾ ಕಾರಣದಿಂದ ರದ್ದಾಗಿದೆ.
ಆಸೀಸ್ ಕ್ವಾರಂಟೈನ್‌ಗೂ ಬಿಸಿಸಿಐನಿಂದಲೇ ಹಣ!
ಶ್ರೀಲಂಕಾದಲ್ಲಿ ಆಯೋಜಿಸಲು ಉದ್ದೇಶಿಸಿದ್ದ 2021ರ ಏಷ್ಯಾಕಪ್ ಟೂರ್ನಿ ರದ್ದಾಗಿದೆ. ಈ ಕುರಿತು ಶ್ರೀಲಂಕಾ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಆಶ್ಲೇ ಡಿ ಸಿಲ್ವ ಸ್ಪಷ್ಟಪಡಿಸಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿರುವ ಬಹುತೇಕ ದೇಶದಲ್ಲಿ ಕೊರೋನಾ 2ನೇ ಅಲೆ ವಿಪರೀತವಾಗಿದೆ. ಹೀಗಾಗಿ ಟೂರ್ನಿ ಅನಿವಾರ್ಯವಾಗಿ ರದ್ದು ಮಾಡಬೇಕಿದೆ ಎಂದು ಅ್ಯಶ್ಲೇ ಹೇಳಿದ್ದಾರೆ.
ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ, ಆತಿಥೇಯ ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘಾನಿಸ್ತಾನ ಹಾಗೂ ಮಲೇಷಿಯಾ ತಂಡಗಳು ಪಾಲ್ಗೊಳ್ಭೇಕಿತ್ತು. ಆದರೆ ಭಾರತ ಸೇರಿದಂತೆ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಕೊರೋನಾ ಅಲೆ ಆತಂಕದ ವಾತಾರವಣ ಸೃಷ್ಟಿಸಿದೆ.
ಕೋವಿಡ್ ಸೋಂಕಿನಿಂದ ಹಸ್ಸಿ ಗುಣಮುಖ, ಸಾಹಗೆ ಮತ್ತೆ ಪಾಸಿಟಿವ್!
ಕೊರೋನಾ ಕಾರಣ ಜೂನ್ ತಿಂಗಳಲ್ಲಿ ಏಷ್ಯಾಕಪ್ ಟೂರ್ನಿ ಅಸಾಧ್ಯವಾಗಿದೆ. ಕೆಲ ದಿನಗಳಲ್ಲಿ ಕೊರೋನಾ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವ ಲಕ್ಷಣಗಳಿಲ್ಲ. ಇದರ ಜೊತೆಗೆ ಕೆಲ ರಾಷ್ಟ್ರಗಳು ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನೂ ರದ್ದುಮಾಡಿದೆ. ಪರಿಸ್ಥಿತಿ ಹೀಗಿರುವಾಗ ಕ್ರಿಕೆಟ್ ಆಯೋಜನೆ ಸಾಧ್ಯವಿಲ್ಲ ಎಂದು ಆ್ಯಶ್ಲೆ ಹೇಳಿದ್ದಾರೆ. 2021ರ ಏಷ್ಯಾಕಪ್ ಟೂರ್ನಿಯನ್ನು 2023ರ ವಿಶ್ವಕಪ್ ಟೂರ್ನಿ ಬಳಿಕ ಆಯೋಜಿಸಲಾಗುವುದು ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.