ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಗಸ್ಟ್ 30ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ, ಶ್ರೀಲಂಕಾದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 2ರಂದು ಪಾಕ್ ವಿರುದ್ಧ ಆಡುವ ಮೂಲಕ ಭಾರತ ಅಭಿಯಾನ ಆರಂಭಿಸಲಿದೆ.
ನವದೆಹಲಿ(ಆ.24): ಮುಂಬರುವ ಆಗಸ್ಟ್ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಈಗಾಗಲೇ 17 ಆಟಗಾರರನ್ನೊಳಗೊಂಡ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಭಾರತ ತಂಡದ ಆಯ್ಕೆಯ ಕುರಿತಂತೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಏಷ್ಯಾಕಪ್ ಟೂರ್ನಿಗೆ ಆಯ್ಕೆ ಮಾಡಿದ ತಂಡದ ಕುರಿತಂತೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮೊದಲ ಬಾರಿಗೆ ತುಟಿಬಿಚ್ಚಿದ್ದಾರೆ.
ಹಾರ್ದಿಕ್ ಪಾಂಡ್ಯ ಅವರಿಗೆ ಬ್ಯಾಕ್ ಅಪ್ ಆಟಗಾರನಾಗಿ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಿದ್ದರ ಕುರಿತಂತೆ ಗೌತಮ್ ಗಂಭೀರ್ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕಳೆದ ಕೆಲ ಸಮಯದಿಂದ ಟೀಂ ಇಂಡಿಯಾ ಪ್ರತಿನಿಧಿಸುತ್ತಾ ಬಂದಿರುವ ಶಾರ್ದೂಲ್ ಠಾಕೂರ್ ಬೌಲಿಂಗ್ ಜತೆಗೆ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ಆಸರೆಯಾಗಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ಗಂಭೀರ್ ಪ್ರಕಾರ ಹಾರ್ದಿಕ್ ಪಾಂಡ್ಯ ಅವರಿಗೆ ಶಾರ್ದೂಲ್ ಠಾಕೂರ್ ಸೂಕ್ತ ಬ್ಯಾಕ್‌ಅಪ್ ಆಟಗಾರ ಅಲ್ಲ. ಶಾರ್ದೂಲ್ ಠಾಕೂರ್ ಬದಲಿಗೆ ಶಿವಂ ದುಬೆ ಒಳ್ಳೆಯ ಬ್ಯಾಕ್‌ಅಪ್ ಆಟಗಾರ ಎಂದು ಗೌತಿ ಅಭಿಪ್ರಾಯಪಟ್ಟಿದ್ದಾರೆ.
undefined
Asia Cup 2023 ಟೂರ್ನಿಗೂ ಮುನ್ನ Yo Yo Test ಪಾಸ್ ಮಾಡಿದ ವಿರಾಟ್ ಕೊಹ್ಲಿ..! ಗಳಿಸಿದ ಪಾಯಿಂಟ್ ಎಷ್ಟು?
ಈ ಕುರಿತಂತೆ ಸ್ಟಾರ್‌ಸ್ಪೋರ್ಟ್ಸ್‌ನಲ್ಲಿ ಭಾಗವಹಿಸಿ ಮಾತನಾಡಿದ ಗಂಭೀರ್, "ಏಷ್ಯಾಕಪ್ ಟೂರ್ನಿಗೆ ತಂಡವನ್ನು ಆಯ್ಕೆ ಮಾಡುವಾಗ ಶಿವಂ ದುಬೆ ಅವರ ಹೆಸರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕಿತ್ತು. ಯಾಕೆಂದರೆ ಅವರು ಸದ್ಯ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ಅವರಿಗೆ ಸೂಕ್ತ ಬ್ಯಾಕ್‌ಅಪ್ ಆಟಗಾರನ ಅಗತ್ಯವಿದೆ. ಆದರೆ ಶಾರ್ದೂಲ್ ಠಾಕೂರ್, ಹಾರ್ದಿಕ್ ಪಾಂಡ್ಯಗೆ ಸೂಕ್ತ ಬ್ಯಾಕ್‌ಅಪ್ ಆಟಗಾರನಲ್ಲ" ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಗೌತಮ್ ಗಂಭೀರ್ ಅವರ ಅಭಿಪ್ರಾಯವನ್ನು ಕನ್ನಡಿಗ ಸುನಿಲ್ ಗವಾಸ್ಕರ್ ಕೌಂಟರ್ ಮಾಡಿದ್ದಾರೆ. "ನನಗೆ ಹಾಗೆ ಅನಿಸುತ್ತಿಲ್ಲ. ನಾವು ಶಿವಂ ದುಬೆ ಆಟ ನೋಡಿದ್ದೇವೆ. ಶಿವಂ ದುಬೆ ಟಿ20 ಕ್ರಿಕೆಟ್‌ನಲ್ಲಿ ಒಳ್ಳೆಯ ರೀತಿಯಲ್ಲಿ ರನ್ ಗಳಿಸಿದ್ದಾರೆ. ಆದರೆ ಏಷ್ಯಾಕಪ್ ಟೂರ್ನಿಯು ಸಂಪೂರ್ಣ ವಿಭಿನ್ನ ಮಾದರಿ. ಗೌತಮ್ ಗಂಭೀರ್ ಅವರ ಬಗ್ಗೆ ಗೌರವ ಇಟ್ಟುಕೊಂಡೇ ಹೇಳುತ್ತಿದ್ದೇನೆ, ಶಿವಂ ದುಬೆ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
ಚಂದ್ರಯಾನ 3 ಸಕ್ಸಸ್ ಬೆನ್ನಲ್ಲೇ ಟೀಂ ಇಂಡಿಯಾದಲ್ಲೂ ಹುಮ್ಮಸ್ಸು..! ಈ ಸಲ ಕಪ್ ನಮ್ದೇ ಬಾಸೂ..!
ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಆಗಸ್ಟ್ 30ರಿಂದ ಸೆಪ್ಟೆಂಬರ್ 17ರ ವರೆಗೆ ಪಾಕಿಸ್ತಾನ, ಶ್ರೀಲಂಕಾದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 2ರಂದು ಪಾಕ್ ವಿರುದ್ಧ ಆಡುವ ಮೂಲಕ ಭಾರತ ಅಭಿಯಾನ ಆರಂಭಿಸಲಿದೆ.
ಏಷ್ಯಾಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡ ಹೀಗಿದೆ ನೋಡಿ:
ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.