ಏಷ್ಯಾಕಪ್ ಹೋರಾಟದಲ್ಲಿ ರಾಹುಲ್-ಕೊಹ್ಲಿ ಸೆಂಚುರಿ ದಾಖಲೆ, ಪಾಕಿಸ್ತಾನಕ್ಕೆ 357 ರನ್ ಗುರಿ!

Published : Sep 11, 2023, 06:44 PM ISTUpdated : Sep 11, 2023, 06:49 PM IST
ಏಷ್ಯಾಕಪ್ ಹೋರಾಟದಲ್ಲಿ ರಾಹುಲ್-ಕೊಹ್ಲಿ ಸೆಂಚುರಿ ದಾಖಲೆ, ಪಾಕಿಸ್ತಾನಕ್ಕೆ 357 ರನ್ ಗುರಿ!

ಸಾರಾಂಶ

ಬದ್ಧವೈರಿ ಪಾಕಿಸ್ತಾನ ವಿರುದ್ದ ಟೀಂ ಇಂಡಿಯಾ ಹಲವು ದಾಖಲೆ ಬರೆದಿದೆ. ಕೊಹ್ಲಿ-ರಾಹುಲ್ ದ್ವಿಶತಕದ ಜೊತೆಯಾಟ, ಆಕರ್ಷಕ ಸೆಂಚುರಿ ಸೇರಿದಂತೆ ಕೆಲ ದಾಖಲೆ ನಿರ್ಮಾಣವಾಗಿದೆ. ಈ ಮೂಲಕ ಭಾರತ 357 ರನ್ ಬೃಹತ್ ಟಾರ್ಗೆಟ್ ನೀಡಿದೆ.

ಕೊಲೊಂಬೊ(ಸೆ.11) ಭಾರತ ಪಾಕಿಸ್ತಾನ ನಡುವಿನ ಏಷ್ಯಾಕಪ್ ಪಂದ್ಯಕ್ಕೆ ಅಂಟಿಕೊಂಟ ಮಳೆರಾಯನ ಶಾಪದ ನಡುವೆಯೂ ಟೀಂ ಇಂಡಿಯಾ ದಿಟ್ಟ ಹೋರಾಟ ನೀಡುವಲ್ಲಿ ಯಶಸ್ವಿಯಾಗಿದೆ.  ಸೂಪರ್ 4 ಮಹತ್ವದ ಪಂದ್ಯ ಮಳೆಯಿಂದಾಗಿ ರದ್ದಾಗಿ ಮೀಸಲು ದಿನಕ್ಕೆ ಮುಂದೂಡಲ್ಪಟ್ಟಿತ್ತು. ಮೊದಲ ದಿನ ನಾಯಕ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಹಾಫ್ ಸೆಂಚುರಿ ಸಿಡಿಸಿ ಮಿಂಚಿದ್ದರು. ಮೀಸಲು ದಿನದಲ್ಲಿ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಹೋರಾಟ ಟೀಂ ಇಂಡಿಯಾ ಕೈಹಿಡಿಯಿತು. ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿ ಮಿಂಚಿದರು.  ಇದರ ಪರಿಣಾಮ ಭಾರತ 2 ವಿಕೆಟ್ ನಷ್ಟಕ್ಕೆ 356 ರನ್ ಸಿಡಿಸಿದೆ. ಇದೀಗ ಪಾಕಿಸ್ತಾನಕ್ಕೆ ರನ್ ಟಾರ್ಗೆಟ್ ನೀಡಿದೆ.

ಟೀಂ ಇಂಡಿಯಾ 24.1 ಓವರ್‌ನಲ್ಲಿ 2 ವಿಕೆಟ್ ನಷ್ಟಕ್ಕೆ 147 ರನ್ ಸಿಡಿಸಿತ್ತು. ಆದರೆ ಮಳೆಯಿಂದ ಪಂದ್ಯ ಸ್ಥಗಿತಗೊಂಡು ಮತ್ತೆ ಆರಂಭಗೊಳ್ಳಲಿಲ್ಲ. ಹೀಗಾಗಿ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿತ್ತು. ಮೀಸಲು ದಿನವಾದ ಇಂದು ಪಂದ್ಯ ಆರಂಭಕ್ಕೆ ಮತ್ತೆ ಮಳೆ ಅಡ್ಡಿಯಾಗಿತ್ತು. ಹೀಗಾಗಿ ವಿಳಂಬವಾಗಿ ಪಂದ್ಯ ಆರಂಭಗೊಂಡಿತ್ತು. ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಬ್ಯಾಟಿಂಗ್‌ನಿಂದ ಭಾರತ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿತು.

Asia cup ಪಾಕಿಸ್ತಾನ ವಿರುದ್ದ ಟೀಂ ಇಂಡಿಯಾ ದಾಖಲೆ, ಕೆಎಲ್ ರಾಹುಲ್-ವಿರಾಟ್ ಕೊಹ್ಲಿ ಶತಕ!

ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದ ಕೆಎಲ್ ರಾಹುಲ್ ತಮ್ಮ ಕಮ್‌ಬ್ಯಾಕ್ ಪಂದ್ಯದಲ್ಲೇ ಶತಕ ಸಿಡಿಸಿದ್ದಾರೆ. 100 ಎಸೆತದಲ್ಲಿ ಕೆಎಲ್ ರಾಹುಲ್ ಸೆಂಚುರಿ ಸಿಡಿಸಿ ಸಂಭ್ರಮಿಸಿದರು. ಕೆಎಲ್ ರಾಹುಲ್ 6ನೇ ಶತಕ ದಾಖಲಿಸಿದರು.  ಇತ್ತ ರಾಹುಲ್ ಬೆನ್ನಲ್ಲೇ ವಿರಾಟ್ ಕೊಹ್ಲಿ ತಮ್ಮ 47ನೇ ಏಕದಿನ ಸೆಂಚುರಿ ಸಿಡಿಸಿದರು. ಕೊಹ್ಲಿ 84 ಎಸೆತದಲ್ಲಿ ಶತಕ ಸಿಡಿಸಿದ್ದಾರೆ.

ಕೊಹ್ಲಿ ಹಾಗೂ ಗಿಲ್ ನಿರ್ಗಮನದ ಬಳಿಕ ಸಂಪೂರ್ಣ ಜವಾಬ್ದಾರಿ ಹೊತ್ತಕೊಂಡ ಕೊಹ್ಲಿ ಹಾಗೂ ರಾಹುಲ್ ದ್ವಿಶತಕದ ಜೊತೆಯಾಟ ವಾಡಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ 2ನೇ ವಿಕೆಟ್‌ಗೆ ದಾಖಲಾದ ಗರಿಷ್ಠ ಜೊತೆಯಾಟ ಅನ್ನೋ ದಾಖಲೆಗೂ ಪಾತ್ರವಾಗಿದೆ.  ವಿರಾಟ್ ಕೊಹ್ಲಿ 94 ಎಸೆತದಲ್ಲಿ ಅಜೇಯ 124 ರನ್ ಸಿಡಿಸಿದರೆ, ರಾಹುಲ್ 106  ಎಸೆತದಲ್ಲಿ ಅಜೇಯ  111 ರನ್ ಸಿಡಿಸಿದ್ದಾರೆ. ಈ ಮೂಲಕ ಭಾರತ 2 ವಿಕೆಟ್ ನಷ್ಟಕ್ಕೆ 356 ರನ್ ಸಿಡಿಸಿತು.

ತಂದೆಯಾದ ಬುಮ್ರಾಗೆ ಸರ್ಪ್ರೈಸ್‌ ಗಿಫ್ಟ್ ಕೊಟ್ಟ ಪಾಕ್ ವೇಗಿ ಶಾಹೀನ್ ಅಫ್ರಿದಿ..! ಹೃದಯಗೆದ್ದ ವಿಡಿಯೋ ವೈರಲ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?