ಪಾಕ್ ಚೆಂಡಾಡಿದ ಭಾರತ; ಅಭಿಷೇಕ್ ಆರ್ಭಟಕ್ಕೆ ಪಾಕಿಸ್ತಾನ ಧೂಳೀಪಟ!

Published : Sep 14, 2025, 11:19 PM IST
Abhishek Sharma

ಸಾರಾಂಶ

ಏಷ್ಯಾಕಪ್‌ನಲ್ಲಿ ಭಾರತ-ಪಾಕಿಸ್ತಾನ ಕಾದಾಟದಲ್ಲಿ ಭಾರತ 7 ವಿಕೆಟ್‌ಗಳ ಜಯ ಸಾಧಿಸಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವು ಸೂಪರ್ 4 ಹಂತಕ್ಕೆ ಪ್ರವೇಶ ಪಡೆದಿದೆ. ಅಭಿಷೇಕ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಸ್ಪೋಟಕ ಬ್ಯಾಟಿಂಗ್ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿದೆ.

ದುಬೈ: ಏಷ್ಯಾಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯ ಎನಿಸಿಕೊಂಡಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟದಲ್ಲಿ ನಿರೀಕ್ಷೆಯಂತೆಯೇ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಸೂಪರ್ 4 ಹಂತಕ್ಕೆ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವಲ್ಲಿ ಹಾಲಿ ಚಾಂಪಿಯನ್ ಭಾರತ ಯಶಸ್ವಿಯಾಗಿದೆ. ಆರಂಭಿಕ ಬ್ಯಾಟರ್ ಅಭೀಷೇಕ್ ಶರ್ಮಾ, ನಾಯಕ ಸೂರ್ಯಕುಮಾರ್ ಯಾದವ್ ಸ್ಪೋಟಕ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್ ಪ್ರದರ್ಶನದ ಎದುರು ಪಾಕಿಸ್ತಾನ ಮಂಡಿಯೂರಿದೆ.

ಭಾರತಕ್ಕೆ ಸುಲಭ ಜಯ

ಗೆಲ್ಲಲು ಕೇವಲ 128 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಶುಭಮನ್ ಗಿಲ್‌ ಕೇವಲ 10 ರನ್ ಗಳಿಸಿ ಸೈಮ್ ಆಯುಬ್‌ ಬೌಲಿಂಗ್‌ನಲ್ಲಿ ಸ್ಟಂಪೌಟ್‌ ಆಗಿ ಪೆವಿಲಿಯನ್ ಸೇರಿದರು. ಗಿಲ್ ವಿಕೆಟ್ ಪತನದ ಹೊರತಾಗಿಯೂ ಮತ್ತೊಂದು ತುದಿಯಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 238.46ರ ಸ್ಟ್ರೈಕ್‌ರೇಟ್‌ನಲ್ಲಿ 31 ರನ್ ಸಿಡಿಸಿ ಸೈಮ್ ಆಯುಬ್‌ಗೆ ಎರಡನೇ ಬಲಿಯಾದರು. ಈ ವೇಳೆಗೆ ಭಾರತ ಕೇವಲ 3.4 ಓವರ್‌ಗಳಲ್ಲಿ 41 ರನ್ ಕಲೆಹಾಕಿತು.

ಇದಾದ ಬಳಿಕ ಮೂರನೇ ವಿಕೆಟ್‌ಗೆ ಜತೆಯಾದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಅಸರೆಯಾದರು. ಈ ಜೋಡಿ ಮೂರನೇ ವಿಕೆಟ್‌ಗೆ ಆಕರ್ಷಕ 56 ರನ್‌ಗಳ ಜತೆಯಾಟವಾಡಿದರು. ತಿಲಕ್ ವರ್ಮಾ 31 ಎಸೆತಗಳಲ್ಲಿ 31 ರನ್ ಸಿಡಿಸಿ ಸೈಮ್ ಆಯುಬ್‌ಗೆ ಮೂರನೇ ಬಲಿಯಾದರು. ಇನ್ನು ಮತ್ತೊಂದು ತುದಿಯಲ್ಲಿ ನಾಯಕನ ಆಟವಾಡಿದ

ಈ ಗೆಲುವಿನೊಂದಿಗೆ 'ಎ' ಗುಂಪಿನಲ್ಲಿ ಭಾರತ ತಂಡವು 4 ಅಂಕಗಳೊಂದಿಗೆ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಬೌಲಿಂಗ್ ದಾಳಿಗೆ ಪಾಕ್ ಕಂಗಾಲು

ಇದಕ್ಕೂ ಮೊದಲು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಮೊದಲು ಬ್ಯಾಟ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಪಾಕಿಸ್ತಾನ ಆರು ರನ್ ಗಳಿಸುವಷ್ಟರಲ್ಲೇ ಅಗ್ರಕ್ರಮಾಂಕದ ಇಬ್ಬರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದರು. ಇದಾದ ಬಳಿಕ ಮೂರನೇ ವಿಕೆಟ್‌ಗೆ ಶಾಹಿಝಾದ್ ಫರ್ಹಾನ್ ಹಾಗೂ ಫಖರ್ ಜಮಾನ್ 39 ರನ್‌ಗಳ ಜತೆಯಾಟವಾಡುವ ಮೂಲಕ ಆಸರೆಯಾದರು.

ಆದರೆ ಫಖರ್ ಜಮಾನ್ ವಿಕೆಟ್ ಪತನದ ಬಳಿಕ ಪಾಕಿಸ್ತಾನ ತಂಡವು ನಾಟಕೀಯ ಕುಸಿತ ಕಂಡಿತು. ಭಾರತದ ವಿಶ್ವದರ್ಜೆಯ ಸ್ಪಿನ್ನರ್‌ಗಳ ಎದುರು ರನ್ ಗಳಿಸಲು ಪಾಕಿಸ್ತಾನ ಬ್ಯಾಟರ್‌ಗಳು ತಿಣುಕಾಡಿದರು. ನಾಯಕ ಸಲ್ಮಾನ್ ಅಘಾ 3, ಹಸನ್ ನವಾಜ್ 5, ಮೊಹಮ್ಮದ್ ನವಾಜ್ 0, ಫಾಹೀಮ್ ಅಶ್ರಫ್ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಒಂದು ಹಂತದಲ್ಲಿ ಪಾಕಿಸ್ತಾನ 97 ರನ್ ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತ್ತು. ಆದರೆ ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಆರಂಭಿಕ ಬ್ಯಾಟರ್ ಶಾಹಿಝಾದ್ ಫರ್ಹಾನ್ 44 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ 40 ರನ್ ಗಳಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ಶಾಹೀನ್ ಶಾ ಅಫ್ರಿದಿ ಕೇವಲ 16 ಎಸೆತಗಳಲ್ಲಿ 4 ಸಿಕ್ಸರ್ ಸಹಿತ ಅಜೇಯ 33 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 120ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಭಾರತ ಪರ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ