ಏಷ್ಯಾಕಪ್ 2025: ಭಾರತದ ಟಾಪ್ 3 ಗೇಮ್‌ಚೇಂಜರ್ಸ್‌ ಆಯ್ಕೆ ಮಾಡಿದ ಸೆಹ್ವಾಗ್! ಆದ್ರೆ ಸಂಜುಗಿಲ್ಲ ಸ್ಥಾನ

Published : Aug 29, 2025, 03:04 PM IST
Team India Asia Cup Squad

ಸಾರಾಂಶ

ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಏಷ್ಯಾಕಪ್‌ನಲ್ಲಿ ಭಾರತದ ಪರ ಗೇಮ್ ಚೇಂಜರ್ ಆಗಬಲ್ಲ ಮೂವರು ಆಟಗಾರರನ್ನು ಊಹಿಸಿದ್ದಾರೆ. ಆಶ್ಚರ್ಯಕರವಾಗಿ, ಈ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿಲ್ಲ. 

ದೆಹಲಿ: ಏಷ್ಯಾಕಪ್‌ನಲ್ಲಿ ಭಾರತದ ಪರ ಗೇಮ್‌ ಚೇಂಜರ್‌ಗಳು ಯಾರೆಂದು ಮಾಜಿ ಭಾರತೀಯ ಆಟಗಾರ ವೀರೇಂದ್ರ ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ. ಆದರೆ ತುಂಬಾ ಇಂಟ್ರೆಸ್ಟಿಂಗ್ ಸಂಗತಿಯೆಂದರೆ ಮೂವರ ಪಟ್ಟಿಯಲ್ಲಿ ಕೇರಳ ಮೂಲದ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಸೆಹ್ವಾಗ್ ಕೈಬಿಟ್ಟಿದ್ದಾರೆ. 2025ರ ಏಷ್ಯಾಕಪ್ ಟೂರ್ನಿಯಲ್ಲಿ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಭಾರತ ಕಣಕ್ಕಿಳಿಯಲಿದೆ. ಸೆಪ್ಟೆಂಬರ್ 10 ರಂದು ಯುಎಇ ವಿರುದ್ಧ ಭಾರತ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ಮತ್ತು ಓಮನ್ ಭಾರತ ಗುಂಪು ಹಂತದಲ್ಲಿ ಕಾದಾಡಲಿದೆ. ಸೂರ್ಯಕುಮಾರ್ ಯಾದವ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದು, ಆರಂಭಿಕ ಬ್ಯಾಟರ್ ಶುಭ್‌ಮನ್ ಗಿಲ್ ಉಪನಾಯಕರಾಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಮಧ್ಯೆ, ಸೆಹ್ವಾಗ್ ಮೂವರು ಗೇಮ್‌ ಚೇಂಜರ್‌ಗಳನ್ನು ಆಯ್ಕೆ ಮಾಡಿದ್ದಾರೆ. ಅಭಿಷೇಕ್ ಶರ್ಮಾ, ಜಸ್ಪ್ರೀತ್ ಬುಮ್ರಾ ಮತ್ತು ವರುಣ್ ಚಕ್ರವರ್ತಿ ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಪಂದ್ಯಶ್ರೇಷ್ಠರಾಗಿ ಹೊರಹೊಮ್ಮಬಹುದು ಎಂದು ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ. ''ಅಭಿಷೇಕ್ ಶರ್ಮಾ ಪಂದ್ಯದ ಗತಿ ಬದಲಾಯಿಸಬಲ್ಲರು ಎಂದು ನಾನು ಭಾವಿಸುತ್ತೇನೆ. ಬುಮ್ರಾ ಯಾವಾಗಲೂ ಪಂದ್ಯದ ಗತಿ ಬದಲಾಯಿಸುವವರು ಎಂದು ನಮಗೆ ಗೊತ್ತಿದೆ. ಇನ್ನು ಚಾಂಪಿಯನ್ಸ್ ಟ್ರೋಫಿ ಮತ್ತು ಟಿ20 ಮಾದರಿಯಲ್ಲಿ ವರುಣ್ ಚಕ್ರವರ್ತಿ ತಮ್ಮ ಬೌಲಿಂಗ್‌ನಿಂದ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು. ಭಾರತಕ್ಕೆ ತಮ್ಮದೇ ಆದ ಪ್ರದರ್ಶನದಿಂದ ಗೆಲುವು ತಂದುಕೊಡುವ ಸಾಮರ್ಥ್ಯ ಈ ಮೂವರಿಗೂ ಇದೆ.'' ಎಂದು ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ.

ಭಾರತಕ್ಕಾಗಿ ಮೂರು ಮಾದರಿಗಳಲ್ಲಿ ಆಡುವ ಬುಮ್ರಾ ಕೊನೆಯದಾಗಿ ಟಿ20 ಆಡಿದ್ದು 2024 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ. ಅದರ ನಂತರ, ಬೆನ್ನುನೋವಿನ ಗಾಯದಿಂದಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದರು. ನಂತರ, ಬುಮ್ರಾ ಅವರನ್ನು ನಿಗದಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಪ್ರಮುಖ ಟೂರ್ನಮೆಂಟ್‌ಗಳಲ್ಲಿ ಮಾತ್ರ ಆಡಿಸಬೇಕೆಂದು ನಿರ್ಧರಿಸಲಾಯಿತು. ಇತ್ತೀಚೆಗೆ ಮುಕ್ತಾಯಗೊಂಡ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ, ಕೆಲಸದ ಹೊರೆಯ ನಿರ್ವಹಣೆಯ ಭಾಗವಾಗಿ ಐದು ಟೆಸ್ಟ್ ಪಂದ್ಯಗಳಲ್ಲಿ ಮೂರರಲ್ಲಿ ಮಾತ್ರ ಬುಮ್ರಾ ಆಡಿದ್ದರು. ಐಪಿಎಲ್‌ನಲ್ಲಿ 12 ಪಂದ್ಯಗಳಿಂದ 6.67 ಎಕಾನಮಿಯಲ್ಲಿ 18 ವಿಕೆಟ್‌ಗಳನ್ನು ಪಡೆಯುವಲ್ಲಿ ಬುಮ್ರಾ ಯಶಸ್ವಿಯಾಗಿದ್ದರು.

ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಪ್ರಸ್ತುತ ಅಗ್ರಸ್ಥಾನದಲ್ಲಿರುವ ಅಭಿಷೇಕ್. 2024 ರ ಜುಲೈನಲ್ಲಿ ಜಿಂಬಾಬ್ವೆ ವಿರುದ್ಧ ಪಾದಾರ್ಪಣೆ ಮಾಡಿದ ನಂತರ ಭಾರತದ ಪರ ನಿರಂತರವಾಗಿ ಆರಂಭಿಕ ಆಟಗಾರರಾಗಿದ್ದಾರೆ. ಭಾರತ ತಂಡಕ್ಕೆ ಮರಳಿದ ನಂತರ ವರುಣ್ ಚಕ್ರವರ್ತಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಸರಣಿಯಲ್ಲಿ, ಅವರು ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. ನಂತರ 2025 ರ ಜನವರಿಯಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಇಂಗ್ಲೆಂಡ್ ಅನ್ನು ಅಚ್ಚರಿಗೊಳಿಸಿದರು ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದರು. 18 ಟಿ20 ಪಂದ್ಯಗಳಿಂದ 7.02 ಎಕಾನಮಿ ದರದಲ್ಲಿ 33 ವಿಕೆಟ್‌ಗಳನ್ನು ಪಡೆದಿದ್ದಾರೆ.

ಏಷ್ಯಾಕಪ್‌ಗಾಗಿ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್

ಸ್ಟ್ಯಾಂಡ್‌ಬೈ ಆಟಗಾರರು: ಯಶಸ್ವಿ ಜೈಸ್ವಾಲ್, ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊನೆಗೂ ಮದುವೆಗೆ ರೆಡಿ ಆದ್ರಾ ಸ್ಮೃತಿ ಮಂಧನಾ-ಪಲಾಶ್‌ ಮುಚ್ಚಾಲ್‌?
ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ