
ದುಬೈ (ಸೆ.24) ಅಭಿಶೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್, ಹಾರ್ದಿಕ್ ಪಾಂಡ್ಯ ನೆರವಿನಿಂದ ಟೀಂ ಇಂಡಿಯಾ, ಬಾಂಗ್ಲಾದೇಶ ವಿರುದ್ಧ 6 ವಿಕೆಟ್ ನಷ್ಟಕ್ಕೆ 168 ರನ್ ಸಿಡಿಸಿದೆ. ಆರಂಭದಲ್ಲಿ ಅಬ್ಬರಿಸಿ ಬೃಹತ್ ಮೊತ್ತದ ಸೂಚನೆ ನೀಡಿದ್ದ ಟೀಂ ಇಂಡಿಯಾ ಒಂದು ಹಂತದಲ್ಲಿ ಕುಸಿತ ಕಂಡಿತ್ತು. ಆದರೆ ಅಂತಿಮ ಹಂತದಲ್ಲಿ ಮತ್ತೆ ಅಬ್ಬರಿಸಿ 169ರನ್ ಟಾರ್ಗೆಟ್ ನೀಡಿದೆ.
ಅಭಿಶೇಕ್ ಶರ್ಮಾ ಹಾಗೂ ಶಿವಂ ದುಬೆ ಸ್ಫೋಟಕ ಆರಂಭದಿಂದ ಟೀಂ ಇಂಡಿಯಾ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತ್ತು. ಅಭಿಶೇಕ್ ಎಂದಿನ ಶೈಲಿಯಲ್ಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಬೌಂಡರಿ ಸಿಕ್ಸರ್ ಮೂಲಕ ಬಾಂಗ್ಲಾದೇಶಕ್ಕೆ ತಲೆನೋವಾದರು. ಶುಬಮನ್ ಗಿಲ್ ಉತ್ತಮ ಸಾಥ್ ನೀಡಿದರು. ಈ ಜೋಡಿ ಅತೀ ವೇಗದಲ್ಲಿ ಅರ್ಧಶತಕದ ಜೊತೆಯಾಟ ನೀಡಿತ್ತು. 19 ಎಸೆತದಲ್ಲಿ 29 ರನ್ ಸಿಡಿಸಿ ಶುಬಮನ್ ಗಿಲ್ ನಿರ್ಗಮಿಸಿದರು. ಭಾರತ 77 ರನ್‌ಗೆ ಮೊದಲ ವಿಕೆಟ್ ಕಳೆದುಕೊಂಡಿತು.
ಅಭಿಶೇಕ್ ಶರ್ಮಾ ಅಬ್ಬರದಿಂದ ಟೀಂ ಇಂಡಿಯಾ ಉತ್ತಮ ರನ್ ರೇಟ್ ಕಾಪಾಡಿಕೊಂಡಿತ್ತು. ಅಭಿಶೇಕ್ ಅರ್ಧಶತಕ ಸಿಡಿಸಿ ಮಿಂಚಿದರು. 200ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ಮಾಡಿದ ಅಭಿಶೇಕ್ ಶರ್ಮಾ 37 ಎಸೆತದಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಮೂಲಕ 75 ರನ್ ಸಿಡಿಸಿದರು.
ಆರಂಭಿಕರ ವಿಕೆಟ್ ಪತನದ ಬಳಿಕ ಭಾರತ ದಿಢೀರ್ ಕುಸಿತ ಕಂಡಿತ್ತು. ಶಿವಂ ದುಬೆ 2 ರನ್ ಸಿಡಿಸಿ ಔಟಾದರು. ನಾಯಕ ಸೂರ್ಯಕುಮಾರ್ ಯಾದವ್ 5ರನ್ ಸಿಡಿಸಿ ನಿರ್ಗಮಿಸಿದರು. ಇತ್ತ ತಿಲಕ್ ವರ್ಮಾ ಕೇವಲ 5 ರನ್ ಸಿಡಿಸಿ ಔಟಾದರು. 77 ರನ್‌ಗೆ 1 ವಿಕೆಟ್ ಕಳೆದುಕೊಂಡಿದ್ದ ಭಾರತ 129 ರನ್‌ಗೆ 5 ವಿಕೆಟ್ ಕಳೆದುಕೊಂಡಿತು. ಭಾರತದ ರನ್ ರೇಟ್ ಕುಸಿತಕಂಡಿತ್ತು.
ದಿಢೀರ್ ಕುಸಿತ ಕಂಡ ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ನೆರವಾದರು. ಹಾರ್ದಿಕ್ ಪಾಂಡ್ಯ 38 ರನ್ ಸಿಡಿಸಿದರು. 4 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ ಅಬ್ಬರಿಸಿದರು. ಇತ್ತ ತಿಲಕಮ್ ವರ್ಮಾ ಅಜೇಯ 10 ರನ್ ಸಿಡಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.