ಪಾಕ್ ಮಾಜಿ ಕ್ರಿಕೆಟಿಗನ ತಬ್ಬಿ ಸಂತಸ ಹಂಚಿಕೊಂಡ ವಿರಾಟ್ ಕೊಹ್ಲಿ, ಫೋಟೋ ವೈರಲ್!

By Suvarna NewsFirst Published Aug 28, 2022, 7:48 PM IST
Highlights

ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಆರಂಭಕ್ಕೂ ಮುನ್ನ ನಡದೆ ಕೆಲ ಸ್ಮರಣೀಯ ಘಟನೆಗಳು ಇದೀಗ ವೈರಲ್ ಆಗಿದೆ. ಇದರಲ್ಲಿ ಪಾಕಿಸ್ತಾನ ಮಾಜಿ ಕ್ರಿಕೆಟಿಗನ ತಬ್ಬಿದ ಫೋಟೋ ವೈರಲ್ ಆಗಿದೆ.

ದುಬೈ(ಆ.28): ಭಾರತ ಹಾಗೂ ಪಾಕಿಸ್ತಾನ ನಡುವಿನ ಏಷ್ಯಾಕಪ್ ಹೈವೋಲ್ಟೇಜ್ ಪಂದ್ಯ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿದೆ. ಭಾರತ ಈ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನ ಮಾಜಿ ಕ್ರಿಕೆಟರ್ ವಾಸಿಮ್ ಅಕ್ರಮ್ ತಬ್ಬಿದ ವಿರಾಟ್ ಕೊಹ್ಲಿ ಕೆಲ ಹೊತ್ತು ಮಾತುಕತೆ ನಡೆಸಿದ್ದಾರೆ. ಈ ಪೋಟೋ ವೈರಲ್ ಆಗಿದೆ. ವಿರಾಟ್ ಕೊಹ್ಲಿ ಪಂದ್ಯಕ್ಕೂ ಮುನ್ನ ಮೈದಾನದಲ್ಲಿ ವಾರ್ಮ್ ಅಪ್ ಮಾಡುತ್ತಿದ್ದರೆ, ಇತ್ತ ವಾಸಿಮ್ ಅಕ್ರಮ್ ವಾಹಿನಿಗಾಗಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಕೊಹ್ಲಿ ವಾಸಿಮ್ ಅಕ್ರಮ್ ತಬ್ಬಿ ಸಂತಸ ಹಂಚಿಕೊಂಡಿದ್ದಾರೆ. ಇದೇ ವೇಳೆ ಟೀಂ ಇಂಡಿಯಾ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾನ್ ತಬ್ಬಿದ್ದಾರೆ. ಪಂದ್ಯ ಆರಂಭಕ್ಕೂ ಮುನ್ನ ನಡೆದ ಕೆಲ ಸ್ಮರಣೀಯ ಘಟನೆಗಳ ಫೋಟೋ ಹಾಗೂ ವಿಡಿಯೋ ಇದೀಗ ವೈರಲ್ ಆಗಿದೆ.

ಕೊಹ್ಲಿ ಹಾಗೂ ಅಕ್ರಮ್ ಹಗ್ ಕುರಿತು ಹಲವು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ. ಕ್ರಿಕೆಟ್ ಮೈದಾನದ ಅದ್ಬುತ ಕ್ಷಣ ಎಂದು ಬಣ್ಣಿಸಿದ್ದಾರೆ. ಇದೇ ಕಾರಣಕ್ಕೆ ಕ್ರಿಕೆಟ್ ಜಂಟಲ್‌ಮೆನ್ ಗೇಮ್ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟೇ ಅಲ್ಲ ಈ ಫೋಟೋ ಇದೀಗ ವೈರಲ್ ಆಗಿದೆ.

 

Virat Kohli Hugged Wasim Akram. pic.twitter.com/ySFsvYrAnm

— TEJASH 🚩 (@LoyleRohitFan45)

 

ಇಂಡೋ ಪಾಕ್ ಪಂದ್ಯ ವೀಕ್ಷಿಸಿದರೆ 5 ಸಾವಿರ ರೂ ದಂಡ, ಶ್ರೀನಗರದ ಕಾಲೇಜು ಆಡಳಿತ ಮಂಡಳಿ ಆದೇಶ!

ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಬದಲು ದಿನೇಶ್ ಕಾರ್ತಿಕ್ ತಂಡ ಸೇರಿಕೊಂಡಿದ್ದಾರೆ. ಕಾರ್ತಿಕ್ ಉತ್ತಮ ಫಾರ್ಮ್‌ನಲ್ಲಿರುವುದು ಮಾತ್ರವಲ್ಲ, ಚೇಸಿಂಗ್ ವೇಳೆ ಪಂದ್ಯ ಫಿನೀಶ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಇಷ್ಟೇ ಅಲ್ಲ ಪಾಕಿಸ್ತಾನ ವಿರುದ್ದ ಮಹತ್ವದ ಪಂದ್ಯದಲ್ಲಿ ಒತ್ತಡ ನಿಭಾಯಿಸಿ, ಪರಿಸ್ಥಿತಿ ನಿಭಾಯಿಸುವ ಕಲೆ ಕಾರ್ತಿಕ್‌ಗೆ ತಿಳಿದಿದೆ. ಅನುಭವಿ ಆಟಗಾರನಾಗಿರುವ ಕಾರಣ ನಾಯಕ ರೋಹಿತ್ ಶರ್ಮಾ ಕಾರ್ತಿಕ್‌ಗೆ ಮಣೆ ಹಾಕಿದ್ದಾರೆ.

ಆರ್ ಅಶ್ವಿನ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕಾರಣ ಈ ಪಂದ್ಯದಲ್ಲಿ ಟೀಂ ಇಂಡಿಯಾ ಮೂವರು ವೇಗಿಗಳಿಗೆ ಸ್ಥಾನ ನೀಡಿದೆ. ಭುವನೇಶ್ವರ್ ಕುಮಾರ್ ಜೊತೆಗೆ ಆವೇಶ್ ಖಾನ್ ಹಾಗೂ ಅರ್ಶದೀಪ್ ಸಿಂಗ್ ಕೂಡ ಸ್ಥಾನ ಪಡೆದಿದ್ದಾರೆ. ಇನ್ನು ಅಲ್ರೌಂಡರ್ ಕೋಟಾದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ರವೀಂದ್ರ ಜಡೇಜಾಗೆ ಸ್ಥಾನ ನೀಡಲಾಗಿದೆ. ಇನ್ನು ಸ್ಪಿನ್ನರ್ ಆಗಿ ಯಜುವೇಂದ್ರ ಚೆಹಾಲ್ ಸ್ಥಾನ ಪಡೆದಿದ್ದಾರೆ. ಹೀಗಾಗಿ ಆರ್ ಅಶ್ವಿನ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

Ind vs Pak: T20I ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆಯಲು ರೋಹಿತ್ ಶರ್ಮಾಗೆ ಬೇಕಿದೆ ಕೇವಲ 10 ರನ್‌..!

ಟೀಂ ಇಂಡಿಯಾ ಪ್ಲೇಯಿಂಗ್ 11
ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜುವೇಂದ್ರ ಚಹಾಲ್, ಅರ್ಶದೀಪ್ ಸಿಂಗ್

click me!