Asia Cup 2022 ಕೊಹ್ಲಿ, ಸೂರ್ಯಕುಮಾರ್ ಅಬ್ಬರ, ಹಾಂಕಾಂಗ್‌ಗೆ 193 ರನ್ ಟಾರ್ಗೆಟ್!

By Suvarna NewsFirst Published Aug 31, 2022, 9:13 PM IST
Highlights

ಹಾಂಕಾಗ್ ವಿರುದ್ಧದ ಏಷ್ಯಾಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ಹಂತದಲ್ಲಿ ನಿಧಾನಗತಿಯಲ್ಲಿ ಆಟದ ಮೊರೆ ಹೋಗಿತ್ತು. ಆದರೆ ಅಂತಿಮ ಹಂತದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ 192 ರನ್ ಸಿಡಿಸಿದೆ. 

ದುಬೈ(ಆ.31): ವಿರಾಟ್ ಕೊಹ್ಲಿ ಹಾಫ್ ಸೆಂಚುರಿ, ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಹಾಂಕಾಗ್ ವಿರುದ್ಧದ ಏಷ್ಯಾಕಪ್ ಟೂರ್ನಿಯ ಪಂದ್ಯದಲ್ಲಿ ಟೀಂ ಇಂಡಿಯಾ ವಿಕೆಟ್ 2 ನಷ್ಟಕ್ಕೆ 192 ರನ್ ಸಿಡಿಸಿದೆ. ಸುದೀರ್ಘ ದಿನಗಳ ಬಳಿಕ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. ಇತ್ತ ಸೂರ್ಯಕುಮಾರ್ ಯಾದವ್ ಉತ್ತಮ ಸಾಥ್ ನೀಡಿದರು. ಇದರಿಂದ ಸ್ಲಾಗ್ ಓವರ್‌ಗಳಲ್ಲಿ ಭಾರತ ದಿಟ್ಟ ಹೋರಾಟದ ಮೂಲಕ ರನ್ ಸಿಡಿಸಿದೆ.  ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಅಬ್ಬರಿಸುವ ವಿಶ್ವಾಸದಲ್ಲಿತ್ತು. ಆದರೆ ಟೀಂ ಇಂಡಿಯಾ  38 ರನ್ ಗಳಿಸುವಷ್ಟರಲ್ಲೇ ಮೊದಲ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ 13 ಎಸೆತದಲ್ಲಿ 21 ರನ್ ಸಿಡಿಸಿ ಔಟಾದರು. ರೋಹಿತ್ ಕೊಂಚ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ನಿರ್ಗಮಿಸಿದರು. ಆದರೆ ಕೆಎಲ್ ರಾಹುಲ್ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡಿದರು. ರಾಹುಲ್ 39 ಎಸೆತದಲ್ಲಿ 36 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾ 94 ರನ್‌ಗಗಳಿಗೆ 2 ವಿಕೆಟ್ ಕಳೆದುಕೊಂಡಿತು. 

ವಿರಾಟ್ ಕೊಹ್ಲಿ(Virat Kohli) ಹಾಗೂ ಸೂರ್ಯಕುಮಾರ್ ಯಾದವ್(SuryaKumar yadav) ಸ್ಫೋಟಕ ಬ್ಯಾಟಿಂಗ್ ಪ್ರದರ್ಶನಕ್ಕೆ ಮುಂದಾದರು. ಹೀಗಾಗಿ ನಿಧಾನಗತಿಯಲ್ಲಿ ಸಾಗುತ್ತಿದ್ದ ಟೀಂ ಇಂಡಿಯಾ(Team India) ಸ್ಕೋರ್‌ಗೆ ವೇಗ ಸಿಕ್ಕಿತು. ಕೊಹ್ಲಿಗಿಂತ ವೇಗವಾಗಿ ಸೂರ್ಯಕುಮಾರ್ ಯಾದವ್ ಬ್ಯಾಟ್ ಬೀಸಿದರು. ಸುದೀರ್ಘ ದಿನಗಳ ಬಳಿಕ ವಿರಾಟ್ ಕೊಹ್ಲಿ ಹಾಫ್ ಸೆಂಚುರಿ ಸಿಡಿಸಿ ಮಿಂಚಿದರು.

ಆರಂಭಿಕ ಹಂತದಲ್ಲಿ ಟೀಂ ಇಂಡಿಯಾ 7ರ ರನ್ ರೇಟ್‌ನಲ್ಲಿ(IND vs HK) ಬ್ಯಾಟ್ ಬೀಸಿತ್ತು. ಆದರೆ ಕೊಹ್ಲಿ ಹಾಗೂ ಸೂರ್ಯಕುಮಾರ್ ಅಬ್ಬರಿಂದ ಟೀಂ ಇಂಡಿಯಾ ಬೃಹತ್ ಮೊತ್ತದತ್ತ ದಾಪುಗಾಲಿಟ್ಟುತು. ಅಂತಿಮ ಹಂತದಲ್ಲಿ ಟೀಂ ಇಂಡಿಯಾ ರನ್‌ರೇಟ್ 9ಕ್ಕೇರಿಸಿಕೊಂಡಿತು.  ಅಂತಿಮ ಓವರ್‌ನಲ್ಲಿ ಸೂರ್ಯಕುಮಾರ್ ಸತತ ಎರಡು ಸಿಕ್ಸರ್ ಸಿಡಿಸುವ ಮೂಲಕ 22 ಎಸೆತದಲ್ಲಿ ಅರ್ಧಶತಕ ಸಿಡಿಸಿದರು. 

ಅಂತಿ ಓವರ್‌ನಲ್ಲಿ 3 ಸಿಕ್ಸರ್ ಮೂಲಕ ಸೂರ್ಯಕುಮಾರ್ ಯಾದವ್ 26 ಎಸೆತದಲ್ಲಿ ಅಜೇಯ 68 ರನ್ ಸಿಡಿಸಿದರು. ಇತ್ತ ಕೊಹ್ಲಿ 44 ಎಸೆತದಲ್ಲಿ 59 ರನ್ ಸಿಡಿಸಿದರು. ಈ ಮೂಲಕ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 192 ರನ್ ಸಿಡಿಸಿತು. 

ಈ ಪಂದ್ಯದಲ್ಲಿ ಟೀಂ ಇಂಡಿಯಾ(Team India Squad) ಒಂದು ಬದಲಾವಣೆ ಮಾಡಿ ಕಣಕ್ಕಿಳಿದಿದೆ.  ಮೊದಲ ಪಂದ್ಯದಲ್ಲಿ ಸಂಪೂರ್ಣ ಜವಾಬ್ದಾರಿ ಹೊತ್ತು ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಿದ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ(Hardik Pandya) ಬದಲು ರಿಷಬ್ ಪಂತ್‌ಗೆ ಅವಕಾಶ ನೀಡಲಾಗಿದೆ. ಮೊದಲ ಪಂದ್ಯದಲ್ಲಿ ಪಂತ್ ಬದಲು ದಿನೇಶ್ ಕಾರ್ತಿಕ್‌ಗೆ(Dinesh Karthik) ಅವಕಾಶ ನೀಡಲಾಗಿತ್ತು. ಕಾರ್ತಿಕ್ ಎರಡನೇ ಪಂದ್ಯದಲ್ಲೂ ಸ್ಥಾನ ಉಳಿಸಿಕೊಂಡಿದ್ದಾರೆ. 

Asia Cup 2022 T20 ಟೀಂ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ರವೀಂದ್ರ ಜಡೇಜಾ, ದಿನೇಶ್ ಕಾರ್ತಿಕ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜುವೇಂದ್ರ ಚಹಾಲ್, ಅರ್ಶದೀಪ್ ಸಿಂಗ್
 

click me!