ಏಷ್ಯನ್ ಗೇಮ್ಸ್‌ನ 4 ಕ್ವಾರ್ಟರ್‌ ಫೈನಲ್ ಪಂದ್ಯಗಳು ಮಳೆಯಿಂದ ರದ್ದು; ಭಾರತಕ್ಕೆ ಈಗ ಸೆಮೀಸ್‌ನಲ್ಲಿ ಎದುರಾಳಿ ಯಾರು?

Published : Sep 29, 2026, 11:21 AM IST
Shreyas Iyer

ಸಾರಾಂಶ

ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಟೂರ್ನಿಯ ಎಲ್ಲಾ ನಾಲ್ಕು ಕ್ವಾರ್ಟರ್ ಫೈನಲ್ ಪಂದ್ಯಗಳು ಮಳೆಯಿಂದಾಗಿ ರದ್ದಾಗಿವೆ. ಐಸಿಸಿ ರ್‍ಯಾಂಕಿಂಗ್ ಆಧಾರದ ಮೇಲೆ ಭಾರತ, ಶ್ರೀಲಂಕಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸೆಮಿಫೈನಲ್ ಪ್ರವೇಶಿಸಿವೆ. ಮೊದಲ ಸೆಮಿಫೈನಲ್‌ನಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದೆ.

ನಗೋಯಾ: ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಟೂರ್ನಿಯಲ್ಲಿ ಮಳೆಯ ಕಾಟ ಮತ್ತೆ ಮುಂದುವರೆದಿದೆ. ಏಷ್ಯನ್ ಗೇಮ್ಸ್‌ನ ಕ್ವಾರ್ಟರ್‌ ಫೈನಲ್‌ನ ಎಲ್ಲಾ ನಾಲ್ಕು ಪಂದ್ಯಗಳು ಮಳೆಯಿಂದ ರದ್ದಾಗಿವೆ. ಹೀಗಾಗಿ ಇದೀಗ ಸೆಮಿಫೈನಲ್‌ನಲ್ಲಿ ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದೆ. ನಗೋಯಾದ ಕೊರೊಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆಯಬೇಕಿದ್ದ ಶ್ರೀಲಂಕಾ ಮತ್ತು ನೇಪಾಳ ನಡುವಿನ ಕ್ವಾರ್ಟರ್ ಫೈನಲ್ ಪಂದ್ಯ ಭಾರಿ ಮಳೆಯಿಂದಾಗಿ ರದ್ದಾಗಿದೆ. ಟಾಸ್ ಕೂಡ ನಡೆಯದ ಕಾರಣ, ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಮುಂದಿರುವ ಶ್ರೀಲಂಕಾ ನೇರವಾಗಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ಪ್ರಸ್ತುತ ಟಿ20 ರ್‍ಯಾಂಕಿಂಗ್‌ನಲ್ಲಿ ಶ್ರೀಲಂಕಾ 9ನೇ ಸ್ಥಾನದಲ್ಲಿದ್ದರೆ, ನೇಪಾಳ 14ನೇ ಸ್ಥಾನದಲ್ಲಿದೆ. ಇಂದು ನಡೆಯಬೇಕಿದ್ದ ಬಾಂಗ್ಲಾದೇಶ ಮತ್ತು ಮಲೇಷ್ಯಾ ನಡುವಿನ ನಾಲ್ಕನೇ ಕ್ವಾರ್ಟರ್ ಫೈನಲ್ ಕೂಡ ಮಳೆಗೆ ಆಹುತಿಯಾಗಿದೆ. ಹೀಗಾಗಿ ರ್‍ಯಾಂಕಿಂಗ್ ಬಲದಿಂದ ಬಾಂಗ್ಲಾದೇಶ ಸೆಮೀಸ್ ತಲುಪಿದೆ. ಹಾಂಗ್ ಕಾಂಗ್ ವಿರುದ್ಧದ ಪಂದ್ಯ ರದ್ದಾದ ಕಾರಣ ಪಾಕಿಸ್ತಾನ ಕೂಡ ಈಗಾಗಲೇ ಸೆಮಿಫೈನಲ್ ಖಚಿತಪಡಿಸಿಕೊಂಡಿದೆ. ಗುರುವಾರ ನಡೆಯಲಿರುವ ಮೊದಲ ಸೆಮಿಫೈನಲ್‌ನಲ್ಲಿ ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದ್ದು, ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ.

ಒಂದೂ ಎಸೆತ ಕಾಣದ ನಾಲ್ಕು ಕ್ವಾರ್ಟರ್ ಫೈನಲ್ ಪಂದ್ಯಗಳು ರದ್ದು:

ಏಷ್ಯನ್ ಗೇಮ್ಸ್‌ನ ನಾಲ್ಕೂ ಪುರುಷರ ಕ್ವಾರ್ಟರ್ ಫೈನಲ್ ಪಂದ್ಯಗಳು ಮಳೆಯಿಂದಾಗಿ ಒಂದೇ ಒಂದು ಎಸೆತ ಕಾಣದೆ ರದ್ದಾಗಿವೆ. ಸೋಮವಾರ ಅಫ್ಘಾನಿಸ್ತಾನ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯ ಮಳೆಯಿಂದ ರದ್ದಾದ ಬಳಿಕ, ಹಾಲಿ ಚಾಂಪಿಯನ್ ಭಾರತ ಸೆಮಿಫೈನಲ್ ಪ್ರವೇಶಿಸಿತ್ತು. ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದರೆ, ಅಫ್ಘಾನಿಸ್ತಾನ 10ನೇ ಸ್ಥಾನದಲ್ಲಿದೆ.

ಕಳೆದ ಕೆಲವು ದಿನಗಳಿಂದ ನಗೋಯಾದಲ್ಲಿ ಸುರಿಯುತ್ತಿರುವ ಸತತ ಮಳೆ ಪಂದ್ಯಗಳಿಗೆ ಅಡ್ಡಿಯಾಗುತ್ತಿದೆ. ಶನಿವಾರ ನಡೆದ ನೇಪಾಳ ಮತ್ತು ಜಪಾನ್ ನಡುವಿನ ಗ್ರೂಪ್ ಹಂತದ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. 15 ಓವರ್‌ಗಳಿಗೆ ಕಡಿತಗೊಳಿಸಲಾಗಿದ್ದ ಈ ಪಂದ್ಯದಲ್ಲಿ ನೇಪಾಳ 4 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತ್ತು. ಆದರೆ ಮಳೆ ಬಿರುಸಾದ ಕಾರಣ ಜಪಾನ್ ಬ್ಯಾಟಿಂಗ್ ಆರಂಭಿಸಲೇ ಇಲ್ಲ. ಇದಕ್ಕೂ ಮುನ್ನ ಅಫ್ಘಾನಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ನೇಪಾಳ ತನ್ನ ಶಕ್ತಿ ಪ್ರದರ್ಶಿಸಿತ್ತು. ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಈವರೆಗೆ ಒಂದೇ ಒಂದು ಪಂದ್ಯವನ್ನೂ ಆಡಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಬ್ಯುಸಿಯಾಗಿರುವ ಕಾರಣ, ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್ ಜವಾಬ್ದಾರಿ ಹೊತ್ತಿದ್ದಾರೆ. ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ತಂಡದಲ್ಲಿ ಜಸ್ಪ್ರೀತ್ ಬುಮ್ರಾ ಅವರಂತಹ ಅನುಭವಿ ಆಟಗಾರರ ಜೊತೆಗೆ 15 ವರ್ಷದ ವೈಭವ್ ಸೂರ್ಯವಂಶಿ ಕೂಡ ಇದ್ದಾರೆ.

ಏಷ್ಯನ್ ಗೇಮ್ಸ್‌ಗೆ ಭಾರತ ಕ್ರಿಕೆಟ್ ತಂಡ ಹೀಗಿದೆ:

ಶ್ರೇಯಸ್ ಅಯ್ಯರ್(ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಇಶಾನ್ ಕಿಶನ್(ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ(ಉಪನಾಯಕ), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವಿಪ್ರಾಜ್ ನಿಗಮ್, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಯಶ್ ಠಾಕೂರ್, ಅರ್ಶದೀಪ್ ಸಿಂಗ್, ವೈಭವ್ ಸೂರ್ಯವಂಶಿ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

RCB retention list: 13 ಸ್ಟಾರ್‍‌ಗಳನ್ನ ಉಳಿಸಿಕೊಂಡ ಆರ್‌ಸಿಬಿ, ನಾಲ್ವರಿಗೆ ಗೇಟ್‌ಪಾಸ್
Cricket; ಕೊಹ್ಲಿ ಶತಕ ಸಿಡಿಸಿದರೂ ರೋಹಿತ್ 32 ರನ್‌ಗಳದೇ ಸುದ್ದಿ; ಹಿಟ್‌ಮ್ಯಾನ್ ಟ್ಯಾಕ್ಟಿಕ್ಸ್ ಗ್ರಹಿಸಲು ವಿಫಲರಾದ್ರಾ ಫ್ಯಾನ್ಸ್‌?