
ಕೊರೋಗಿ ಸ್ಪೋರ್ಟ್ಸ್ ಪಾರ್ಕ್: ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮೊದಲ ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ. ಸ್ಮೃತಿ ಮಂಧನಾ, ಶಫಾಲಿ ವರ್ಮಾ ಹಾಗೂ ರಿಚಾ ಘೋಷ್ ಅವರ ಸ್ಫೋಟಕ ಬ್ಯಾಟಿಂಗ್ ಮತ್ತು ಸ್ಪಿನ್ನರ್‌ಗಳ ಕರಾರುವಾಕ್ ದಾಳಿಯಿಂದ ಭಾರತ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 216 ರನ್ ಕಲೆಹಾಕಿತು. ಗುರಿ ಬೆನ್ನತ್ತಿದ ಶ್ರೀಲಂಕಾ 15.4 ಓವರ್‌ಗಳಲ್ಲಿ ಕೇವಲ 69 ರನ್‌ಗಳಿಗೆ ಆಲೌಟ್ ಆಯಿತು. ಲಂಕಾ ಪರ ನಾಯಕಿ ಚಮರಿ ಅಟಪಟ್ಟು (29), ಕವಿಶಾ ದಿಲ್ಹಾರಿ (11) ಮತ್ತು ಕೌಶಾನಿ ನುತ್ಯಂಗನಾ (14) ಮಾತ್ರ ಎರಡಂಕಿ ದಾಟಿದರು. ಭಾರತದ ಪರ ಅನುಭವಿ ಸ್ಪಿನ್ನರ್ ದೀಪ್ತಿ ಶರ್ಮಾ 3 ವಿಕೆಟ್ ಕಿತ್ತರೆ, ಶಫಾಲಿ ವರ್ಮಾ, ಶ್ರೇಯಾಂಕ ಪಾಟೀಲ್ ಮತ್ತು ಶ್ರೀಚರಿಣಿ ತಲಾ 2 ವಿಕೆಟ್ ಪಡೆದು ಮಿಂಚಿದರು.
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಸ್ಮೃತಿ ಮಂಧನಾ ಮತ್ತು ಶಫಾಲಿ ವರ್ಮಾ ಸ್ಪೋಟಕ ಆರಂಭ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 10 ಓವರ್‌ಗಳಲ್ಲಿ 99 ರನ್ ಜೊತೆಯಾಟವಾಡಿತು. ಕೇವಲ 45 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 5 ಫೋರ್‌ಗಳ ನೆರವಿನಿಂದ 79 ರನ್ ಚಚ್ಚಿದ ಸ್ಮೃತಿ ಮಂಧನಾ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11,000 ರನ್ ಪೂರೈಸಿದ ಮೊದಲ ಮಹಿಳಾ ಆಟಗಾರ್ತಿ ಎಂಬ ಐತಿಹಾಸಿಕ ಸಾಧನೆ ಮಾಡಿದರು. ಇನ್ನೊಂದೆಡೆ ಶಫಾಲಿ 48 ರನ್ ಗಳಿಸಿ ಔಟಾದರೆ, ಕೊನೆಯ ಓವರ್‌ಗಳಲ್ಲಿ ಅಬ್ಬರಿಸಿದ ರಿಚಾ ಘೋಷ್ ಕೇವಲ 22 ಎಸೆತಗಳಲ್ಲಿ ಅಜೇಯ 49 ರನ್ ಸಿಡಿಸಿದರು. ಇದರಿಂದ ಭಾರತ 20 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 216 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದು ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಇತಿಹಾಸದಲ್ಲೇ ದಾಖಲಾದ ಅತಿ ಗರಿಷ್ಠ ಸ್ಕೋರ್ ಎನಿಸಿಕೊಂಡಿತು.
GOLD FOR BHARAT! 🇮🇳
Heartiest congratulations to Team India Women on winning the Gold Medal in Cricket at the #AsianGames2026!
India defeated Sri Lanka by 147 runs in the Gold Medal Match, posting 216/3 before bowling Sri Lanka out for 69 in 15.4 overs.
Led by Captain… pic.twitter.com/qMhHjQifx8— SAI Media (@Media_SAI) September 22, 2026
217 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಶ್ರೀಲಂಕಾ ಪಂದ್ಯದಲ್ಲಿ ಒಮ್ಮೆಯೂ ಕಂಬ್ಯಾಕ್ ಮಾಡಲಿಲ್ಲ. ಬ್ಯಾಟಿಂಗ್‌ನಲ್ಲಿ ಮಿಂಚಿದ್ದ ಶಫಾಲಿ ವರ್ಮಾ ಬೌಲಿಂಗ್‌ನಲ್ಲೂ ಆರಂಭದಲ್ಲೇ 2 ವಿಕೆಟ್ ಕಿತ್ತು ಲಂಕಾಗೆ ಆಘಾತ ನೀಡಿದರು. ಲಂಕಾದ ಭರವಸೆಯಾಗಿದ್ದ ನಾಯಕಿ ಚಮರಿ ಅಟಪಟ್ಟು (29) ಅವರನ್ನು ದೀಪ್ತಿ ಶರ್ಮಾ ಪೆವಿಲಿಯನ್‌ಗಟ್ಟಿದರು. 3 ವಿಕೆಟ್ ಪಡೆದ ದೀಪ್ತಿ ಶರ್ಮಾ ಲಂಕಾ ಬ್ಯಾಟಿಂಗ್ ಬೆನ್ನೆಲುಬನ್ನೇ ಮುರಿದುಬಿಟ್ಟರು. ಪರಿಣಾಮ ಭಾರತೀಯ ಬೌಲರ್‌ಗಳು ಲಂಕಾ ಪಡೆಯನ್ನು ಕೇವಲ 69 ರನ್‌ಗಳಿಗೆ ಆಲೌಟ್ ಮಾಡಿದರು. 147 ರನ್‌ಗಳ ಬೃಹತ್ ಗೆಲುವಿನೊಂದಿಗೆ ಭಾರತೀಯ ವನಿತೆಯರು ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದಾರೆ. ಸದ್ಯ 1 ಚಿನ್ನ, 4 ಬೆಳ್ಳಿ ಮತ್ತು 2 ಕಂಚು ಸೇರಿ ಒಟ್ಟು 7 ಪದಕಗಳೊಂದಿಗೆ ಭಾರತ ಪದಕ ಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಸ್ಕೋರ್: ಭಾರತ 20 ಓವರ್‌ಗಳಲ್ಲಿ 216/3, ಶ್ರೀಲಂಕಾ 15.4 ಓವರ್‌ಗಳಲ್ಲಿ 69 ಆಲೌಟ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.