Aus vs Pak: ಪಾಕ್‌ ಎದುರಿನ ಟೆಸ್ಟ್ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಕಟ..!

Suvarna News   | Asianet News
Published : Feb 08, 2022, 02:08 PM IST
Aus vs Pak: ಪಾಕ್‌ ಎದುರಿನ ಟೆಸ್ಟ್ ಸರಣಿಗೆ ಬಲಿಷ್ಠ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಪ್ರಕಟ..!

ಸಾರಾಂಶ

* ಪಾಕ್ ಎದುರಿನ ಟೆಸ್ಟ್ ಸರಣಿಗೆ 18 ಆಟಗಾರರನ್ನೊಳಗೊಂಡ ತಂಡ ಪ್ರಕಟ * ಮಾರ್ಚ್‌ 04ರಿಂದ ಮೂರು ಪಂದ್ಯಗಳ ಟೆಸ್ಟ್ ಸರಣಿ ಆರಂಭ * ಆಸ್ಟ್ರೇಲಿಯಾ ತಂಡ ಕೂಡಿಕೊಂಡ ವೇಗಿ ಜೋಶ್ ಹೇಜಲ್‌ವುಡ್‌

ಮೆಲ್ಬರ್ನ್‌(ಫೆ.08): ಬರೋಬ್ಬರಿ ಎರಡು ದಶಕಗಳ ಬಳಿಕ ಪಾಕಿಸ್ತಾನ ಪ್ರವಾಸ ಮಾಡಲು ಸಜ್ಜಾಗಿರುವ ಆಸ್ಟ್ರೇಲಿಯಾ ತಂಡವು (Australia Cricket Team), ಪಾಕ್‌ ನೆಲದಲ್ಲಿ 3 ಪಂದ್ಯಗಳ ಟೆಸ್ಟ್ ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟಿ20 ಪಂದ್ಯವನ್ನಾಡಲಿದೆ. ಇದೀಗ ಪಾಕ್‌ ಎದುರಿನ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ 18 ಆಟಗಾರರನ್ನೊಳಗೊಂಡ ಬಲಿಷ್ಠ ಕಾಂಗರೂ ಪಡೆ ಪ್ರಕಟವಾಗಿದೆ. ಆ್ಯಷಸ್‌ ಟೆಸ್ಟ್ ಸರಣಿ ವೇಳೆ ಗಾಯಗೊಂಡು ಕೆಲ ಪಂದ್ಯಗಳಿಂದ ಹೊರಗುಳಿದಿದ್ದ ವೇಗಿ ಜೋಶ್ ಹೇಜಲ್‌ವುಡ್‌ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮಿಚೆಲ್ ಸ್ವೆಪ್ಸನ್‌ ಮತ್ತು ಜೋಶ್ ಇಂಗ್ಲಿಶ್ ಕೂಡಾ ಪಾಕ್‌ ಪ್ರವಾಸಕ್ಕೆ ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನು ಮುಖ್ಯವಾದ ವಿಚಾರವೆಂದರೆ ಭದ್ರತೆಯ ನೆಪವೊಡ್ಡಿ ಯಾವೊಬ್ಬ ಆಟಗಾರ ಸಹಾ ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳಲು ಪಾಕ್ ಪ್ರವಾಸದಿಂದ ಹಿಂದೆ ಸರಿಯುವ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಪಾಕಿಸ್ತಾನ ಪ್ರವಾಸ ಮಾಡುವ ಕುರಿತಂತೆ ನಮ್ಮಲ್ಲಿ ಕೊಂಚ ಆತಂಕವಿತ್ತು. ಈ ಕಾರಣಕ್ಕಾಗಿಯೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು 25 ವರ್ಷಗಳಿಂದ ಪಾಕಿಸ್ತಾನ ಪ್ರವಾಸವನ್ನು ಕೈಗೊಂಡಿರಲಿಲ್ಲ. ಇದು ಸಹಜ ಕೂಡಾ ಹೌದು ಎಂದು ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಟೋಡ್‌ ಗ್ರೀನ್‌ಬರ್ಗ್ ತಿಳಿಸಿದ್ದಾರೆ. 

ನಾವು ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದ ಹೊರತಾಗಿಯೂ ಒಂದಿಬ್ಬರು ಆಟಗಾರರು ಮಾತ್ರ ಪಾಕಿಸ್ತಾನ ಪ್ರವಾಸ ಮಾಡುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ನಾವು ಆ ಆಟಗಾರರ ನಿರ್ಧಾರವನ್ನು ಗೌರವಿಸುತ್ತೇವೆ. ಒಂದು ವೇಳೆ ಕೆಲವು ಆಟಗಾರರು ಪಾಕಿಸ್ತಾನ ಪ್ರವಾಸದಿಂದ ಹಿಂದೆ ಸರಿಯುವ ನಿರ್ಧಾರವನ್ನು ಪ್ರಕಟಿಸಿದರೆ, ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯುವ ಅವರ ನಿರ್ಧಾರವನ್ನು ಸ್ವಾಗತಿಸುವುದಾಗಿ ಟೋಡ್‌ ಗ್ರೀನ್‌ಬರ್ಗ್ ತಿಳಿಸಿದ್ದಾರೆ.

1998ರಲ್ಲಿ ಆಸ್ಪ್ರೇಲಿಯಾ ಕ್ರಿಕೆಟ್‌ ತಂಡ ಕೊನೆಯದಾಗಿ ಪಾಕಿಸ್ತಾನ ಪ್ರವಾಸ (Pakistan Tour) ಕೈಗೊಂಡಿತ್ತು. 2009ರಲ್ಲಿ ಶ್ರೀಲಂಕಾ ಕ್ರಿಕೆಟ್‌ ತಂಡದ (Sri Lanka Cricket Team) ಮೇಲೆ ಉಗ್ರರ ದಾಳಿ ನಡೆದ ಬಳಿಕ ಹಲವು ವರ್ಷಗಳ ಕಾಲ ಯಾವುದೇ ತಂಡಗಳು ಪಾಕ್‌ ಪ್ರವಾಸ ಕೈಗೊಂಡಿರಲಿಲ್ಲ.

Aus vs Pak: 24 ವರ್ಷಗಳ ಬಳಿಕ ಪಾಕ್ ಪ್ರವಾಸಕ್ಕೆ ಆಸ್ಟ್ರೇಲಿಯಾ ಒಪ್ಪಿಗೆ..!

ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ (Australia vs Pakistan) ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯವು ಮಾರ್ಚ್‌ 04ರಂದು ರಾವುಲ್ಪಿಂಡಿಯಲ್ಲಿ ಆರಂಭವಾಗಲಿದೆ. ಇದಾದ ಬಳಿಕ ಮಾರ್ಚ್‌ 12ರಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಕರಾಚಿ ಕ್ರಿಕೆಟ್‌ ಮೈದಾನ ಸಾಕ್ಷಿಯಾಗಲಿದೆ. ಇನ್ನು ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯಕ್ಕೆ ಲಾಹೋರ್‌ನಲ್ಲಿರುವ ಗಡಾಫಿ ಸ್ಟೇಡಿಯಂ ಆತಿಥ್ಯವನ್ನು ವಹಿಸಲಿದೆ. 

ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿಯು ಮಾರ್ಚ್‌ ತಿಂಗಳಿನಲ್ಲಿ ಐದು ವಾರಗಳ ಕಾಲ ಪಾಕಿಸ್ತಾನ ಪ್ರವಾಸ ಮಾಡಲು ಒಪ್ಪಿಕೊಂಡಿದೆ ಎನ್ನುವ ವಿಷಯವನ್ನು ನಿಮ್ಮ ಜತೆ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. 24 ವರ್ಷಗಳ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿರುವ ಆಸ್ಟ್ರೇಲಿಯಾ ತಂಡವು ಅತ್ಯುತ್ತಮ ಆಟಗಾರರನ್ನು ಕಳಿಸಿಕೊಡುವುದಾಗಿ ತಿಳಿಸಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಫೈಸಲ್ ಹಸ್ನೈನ್ ತಿಳಿಸಿದ್ದರು.

ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಹೀಗಿದೆ ನೋಡಿ

ಪ್ಯಾಟ್ ಕಮಿನ್ಸ್‌(ನಾಯಕ), ಸ್ಟೀವ್ ಸ್ಮಿತ್(ಉಪ ನಾಯಕ), ಆಸ್ಟನ್ ಅಗರ್, ಸ್ಕಾಟ್ ಬೊಲ್ಯಾಂಡ್, ಅಲೆಕ್ಸ್‌ ಕ್ಯಾರಿ, ಕ್ಯಾಮರೋನ್ ಗ್ರೀನ್, ಮಾರ್ಕಸ್ ಹ್ಯಾರಿಸ್, ಜೋಶ್ ಹೇಜಲ್‌ವುಡ್, ಟ್ರಾವಿಸ್ ಹೆಡ್‌, ಜೋಶ್ ಇಂಗ್ಲಿಶ್, ಉಸ್ಮಾನ್ ಖವಾಜಾ, ಮಾರ್ನಸ್‌ ಲಬುಶೇನ್, ನೇಥನ್ ಲಯನ್, ಮಿಚೆಲ್ ಮಾರ್ಶ್, ಮಿಚೆಲ್ ನೀಶರ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್‌, ಡೇವಿಡ್‌ ವಾರ್ನರ್.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?