ಇಂಡೋ-ಆಸೀಸ್ 2ನೇ ಏಕದಿನ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಆಟಗಾರ ಆಡೋದು ಡೌಟ್..!

Suvarna News   | Asianet News
Published : Nov 28, 2020, 02:29 PM IST
ಇಂಡೋ-ಆಸೀಸ್ 2ನೇ ಏಕದಿನ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ ಆಟಗಾರ ಆಡೋದು ಡೌಟ್..!

ಸಾರಾಂಶ

ಭಾರತ-ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಲ್ರೌಂಡರ್ ಆಡುವುದು ಅನುಮಾನ ಎನ್ನುವಂತಹ ಮಾತುಗಳು ಕೇಳಿ ಬಂದಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಸಿಡ್ನಿ(ನ.28): ಆಸ್ಪ್ರೇಲಿಯಾ ತಂಡದ ಆಲ್ರೌಂಡರ್‌ ಮಾರ್ಕಸ್‌ ಸ್ಟೋಯ್ನಿಸ್‌ ನವೆಂಬರ್ 29ರಂದು ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿರುವ ಭಾರತ ವಿರುದ್ದದ 2ನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

ಶುಕ್ರವಾರ ಇಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್‌ ಮಾಡುವ ವೇಳೆ ಸ್ಟೋಯ್ನಿಸ್‌, ಸ್ನಾಯು ಸೆಳೆತಕ್ಕೆ ಒಳಗಾದರು. ತಮ್ಮ 7ನೇ ಓವರ್‌ನ 2 ಎಸೆತ ಬಳಿಕ ತೀವ್ರ ತೆರನಾದ ನೋವಿಗೆ ತುತ್ತಾದ ಸ್ಟೋಯ್ನಿಸ್‌ ಮಧ್ಯದಲ್ಲೇ ಕ್ರೀಡಾಂಗಣದಿಂದ ಹೊರ ನಡೆದರು. ಸ್ಟೋಯ್ನಿಸ್‌ ಅವರ ಓವರನ್ನು ಮ್ಯಾಕ್ಸ್‌ವೆಲ್‌ ಮುಕ್ತಾಯ ಮಾಡಿದರು.  

ಇಂಡೋ-ಆಸೀಸ್ ಮೊದಲ ಏಕದಿನ ಪಂದ್ಯದಲ್ಲಿ 2 ಅಪರೂಪದ ದಾಖಲೆ ನಿರ್ಮಾಣ..!

ಮಾರ್ಕಸ್‌ ಸ್ಟೋಯ್ನಿಸ್ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶೂನ್ಯ ಸುತ್ತಿ ನಿರಾಸೆ ಅನುಭವಿಸಿದ್ದರು. ಇದೆಲ್ಲದರ ಹೊರತಾಗಿಯೂ ಆಸ್ಟ್ರೇಲಿಯಾ 6 ವಿಕೆಟ್ ಕಳೆದುಕೊಂಡು 374 ರನ್‌ ಗಳಿಸಿತ್ತು. ಇದಕ್ಕುತ್ತರವಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ 8 ವಿಕೆಟ್ ಕಳೆದುಕೊಂಡು 308 ರನ್‌ ಗಳಿಸಲಷ್ಟೇ ಶಕ್ತವಾಯಿತು. 

ಮಾರ್ಕಸ್ ಸ್ಟೋಯ್ನಿಸ್‌ ಗೈರು ಹಾಜರಿಯಲ್ಲಿ ನವೆಂಬರ್ 29ರಂದು ನಡೆಯಲಿರುವ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್‌ ತಂಡಕ್ಕೆ ಕೆಮರೂನ್‌ ಗ್ರೀನ್‌ ಅಥವಾ ಮೋಸಿಸ್‌ ಹೆನ್ರಿಕ್ಸ್‌ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಸಿಸಿಗೆ ಬಿಗ್ ಶಾಕ್ ಕೊಟ್ಟ ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಹಾಟ್‌ಸ್ಟಾರ್!
ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!