ಈ ಮೂವರು ಡೇವಿಡ್ ವಾರ್ನರ್ ಸ್ಥಾನ ತುಂಬಬಹುದು ಎಂದ ಆಸೀಸ್‌ ನಾಯಕ ಫಿಂಚ್

Published : Dec 01, 2020, 05:30 PM IST
ಈ ಮೂವರು ಡೇವಿಡ್ ವಾರ್ನರ್ ಸ್ಥಾನ ತುಂಬಬಹುದು ಎಂದ ಆಸೀಸ್‌ ನಾಯಕ ಫಿಂಚ್

ಸಾರಾಂಶ

ಆಸ್ಟ್ರೇಲಿಯಾ ತಂಡದ ನಾಯಕ ಫಿಂಚ್ ಭಾರತ ವಿರುದ್ಧದ 3ನೇ ಏಕದಿನ ಪಂದ್ಯಕ್ಕೆ ಡೇವಿಡ್ ವಾರ್ನರ್ ಸ್ಥಾನದಲ್ಲಿ ಕಣಕ್ಕಿಳಿಯಬಲ್ಲ ಆಟಗಾರರು ಯಾರು ಎನ್ನುವ ಸುಳಿವನ್ನು ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಕ್ಯಾನ್‌ಬೆರಾ(ಡಿ.01): ಭಾರತ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಿಂದ ಆಸ್ಟ್ರೇಲಿಯಾದ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಹೊರಬಿದ್ದಿದ್ದಾರೆ. ಟೀಂ ಇಂಡಿಯಾ ವಿರುದ್ದದ ಎರಡನೇ ಏಕದಿನ ಪಂದ್ಯದ ಕ್ಷೇತ್ರ ರಕ್ಷಣೆ ಮಾಡುವ ವೇಳೆ ತೊಡೆಸಂದು ಸ್ನಾಯುಸೆಳತಕ್ಕೆ ಒಳಗಾದ ವಾರ್ನರ್ ಏಕದಿನ ಸರಣಿಯ ಕೊನೆಯ ಪಂದ್ಯ ಹಾಗೂ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

ಡೇವಿಡ್ ವಾರ್ನರ್ ಅನುಪಸ್ಥಿತಿ ಆಸ್ಟ್ರೇಲಿಯಾ ತಂಡಕ್ಕೆ ಕೊಂಚ ಹಿನ್ನಡೆಯಾಗುವ ಸಾಧ್ಯತೆಯಿದೆ. ಇದೆಲ್ಲದರ ನಡುವೆ ಆಸ್ಟ್ರೇಲಿಯಾ ಸೀಮಿತ ಓವರ್‌ಗಳ ತಂಡದ ನಾಯಕ ಆ್ಯರೋನ್ ಫಿಂಚ್ ತಮ್ಮ ಮುಂದೆ ಸಾಕಷ್ಟು ಆಯ್ಕೆಗಳಿವೆ ಎಂದು ಹೇಳಿದ್ದಾರೆ.

ಇಂಡೋ-ಆಸೀಸ್ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ 3 ಬದಲಾವಣೆ..?

ಅಲೆಕ್ಸ್ ಕ್ಯಾರಿ, ಮಾರ್ನಸ್ ಲಬುಶೇನ್ ಹಾಗೂ ಮ್ಯಾಥ್ಯೂ ವೇಡ್ ಮೂರನೇ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರ ಇನಿಂಗ್ಸ್ ಆರಂಭಿಸಬಹುದು ಎಂದು ನಾಯಕ ಆ್ಯರೋನ್ ಫಿಂಚ್ ಸುಳಿವನ್ನು ನೀಡಿದ್ದಾರೆ. ಆಸ್ಟ್ರೇಲಿಯಾ ತಂಡ ಮೂರು ಪಂದ್ಯಗಳ ಸರಣಿಯಲ್ಲಿ ಈಗಾಗಲೇ 2-0 ಅಂತರದಲ್ಲಿ ಏಕದಿನ ಸರಣಿಯನ್ನು ಜಯಿಸಿದ್ದು, ಮೂರನೇ ಏಕದಿನ ಪಂದ್ಯದಲ್ಲಿ ಬೆಂಚ್ ಕಾಯಿಸಿದ್ದ ಕೆಲ ಆಟಗಾರರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವ ಸಾಧ್ಯತೆಯಿದೆ.

ಕೊನೆಯ ಪಂದ್ಯಕ್ಕೆ ನಾವಿನ್ನು ತಂಡವನ್ನು ಅಂತಿಮಗೊಳಿಸಿಲ್ಲ. ನಮ್ಮ ಮುಂದೆ ಸಾಕಷ್ಟು ಆಯ್ಕೆಗಳಿವೆ. ವೇಡ್, ಲಬುಶೇನ್ ಇಲ್ಲವೇ ಕ್ಯಾರಿ ಇನಿಂಗ್ಸ್ ಆರಂಭಿಸಬಹುದು. ಇನ್ನು ಮಧ್ಯಮ ಕ್ರಮಾಂಕದಿಂದಲೂ ಉತ್ತಮ ಪ್ರದರ್ಶನ ಮೂಡಿಬರುತ್ತಿರುವುದು ತಂಡದ ಆತ್ಮವಿಶ್ವಾಸ ಮತ್ತಷ್ಟು ಹೆಚ್ಚುವಂತೆ ಮಾಡಿದೆ ಎಂದು ಆ್ಯರೋನ್ ಫಿಂಚ್ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ind vs pak ಪಂದ್ಯದಲ್ಲಿ ಭಾವನಾತ್ಮಕ ಕ್ಷಣ: ಭಾರತದ ರಾಷ್ಟ್ರಗೀತೆ ಹಾಡಿದ ಪಾಕ್ ಅಭಿಮಾನಿ VIDEO
Ind Vs Pak: ನಿಮ್ಮ ವಯಸ್ಸೆಷ್ಟು? ಎಂದು ಕೇಳಿದ ಪಾಕಿಸ್ತಾನಿ ಫ್ಯಾನ್‌! ಭಾರತೀಯ ಅಜ್ಜಿ ಕೊಟ್ಟ ಖಡಕ್ ಉತ್ತರಕ್ಕೆ ಬಾಯಿ ಮುಚ್ಚಿಕೊಂಡ!