
ಮೆಲ್ಬರ್ನ್(ಏ.24): ಅಕ್ಟೋಬರ್ 18ರಿಂದ ನವೆಂಬರ್15ರವರೆಗೆ ಆಸ್ಪ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ಟೂರ್ನಿ ಕೊರೋನಾದಿಂದಾಗಿ 3 ತಿಂಗಳು ಮುಂದೂಡಿಕೆಯಾಗುವ ಸಾಧ್ಯತೆಯಿದೆ ಎಂದು ಆಸ್ಪ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಆ್ಯರೋನ್ ಫಿಂಚ್ ಹೇಳಿದ್ದಾರೆ.
ಕೊರೋನಾದಿಂದಾಗಿ ಜಗತ್ತಿನಾದ್ಯಂತ ಎಲ್ಲಾ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯು 1, 2 ಅಥವಾ 3 ತಿಂಗಳು ಮುಂದೂಡಿಕೆಯಾಗುವ ಸಾಧ್ಯತೆಯಿದೆ ಎಂದಿದ್ದಾರೆ. ಇತ್ತೀಚೆಗಷ್ಟೇ ನ್ಯೂಜಿಲೆಂಡ್ ವಿರುದ್ಧ 1 ಏಕದಿನ ಪಂದ್ಯವನ್ನು ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಲ್ಲದೇ ಆಡಿದ್ದೇವೆ. ನಿಜಕ್ಕೂ ಈ ಪಂದ್ಯ ವಿಚಿತ್ರ ಅನುಭವ ನೀಡಿತ್ತು. ಪ್ರೇಕ್ಷಕರಿಲ್ಲದೇ ಪಂದ್ಯ ಆಡುವುದು ಕಷ್ಟ ಎಂದು ಫಿಂಚ್ ಹೇಳಿದ್ದಾರೆ.
ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ದೀರ್ಘಕಾಲಿಕ ದ್ವಿಪಕ್ಷೀಯ ಸರಣಿಯನ್ನಾಡಲಿದೆ. ಈ ವೇಳೆ ನಡೆಯಲಿರುವ ಟೆಸ್ಟ್ ಸರಣಿ ಸಾಕಷ್ಟು ರೋಚಕತೆಯನ್ನು ಹುಟ್ಟುಹಾಕಿದೆ. ಕಳೆದ ಬಾರಿ ಭಾರತ ತಂಡವು ಆಸೀಸ್ ಪ್ರವಾಸ ಕೈಗೊಂಡಿದ್ದಾಗ ಟೆಸ್ಟ್ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. 7 ದಶಕಗಳ ಬಳಿಕ ಟೀಂ ಇಂಡಿಯಾ ಮೊಟ್ಟಮೊದಲ ಬಾರಿಗೆ ಆಸೀಸ್ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದು ಬೀಗಿತ್ತು.
ಆಸೀಸ್ ಕ್ರಿಕೆಟ್ ಟೀಂಗೆ ಮತ್ತೆ ಸ್ಟೀವ್ ಸ್ಮಿತ್ ನಾಯಕ?
ಆಸೀಸ್ ವೇಗಿ ಜೋಸ್ ಹ್ಯಾಜಲ್‌ವುಡ್, ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೂರ್ನಿಯನ್ನು ಒಂದೇ ಮೈದಾನದಲ್ಲಿ ನಡೆಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದರು. ಮುಂದುವರೆದು ಈ ಟೂರ್ನಿ ಅಡಿಲೇಡ್ ಓವಲ್‌ನಲ್ಲಿ ನಡೆಸಬಹುದು ಎಂದು ಹೇಳಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.