ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಸೆಪ್ಟೆಂಬರ್ ಆರಂಭದಲ್ಲೇ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಮೂರು ಪಂದ್ಯಗಳ ಟಿ20 ಹಾಗೂ ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಮೆಲ್ಬರ್ನ್(ಜು.21): ಸೆಪ್ಟೆಂಬರ್ನಲ್ಲಿ ಆಸ್ಪ್ರೇಲಿಯಾ ತಂಡ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಾಪಸಾಗಲಿದ್ದು, ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಸೆ.4ರಿಂದ 3 ಟಿ20 ಹಾಗೂ 3 ಏಕದಿನ ಪಂದ್ಯಗಳ ಸರಣಿಯಲ್ಲಿ ಪಾಲ್ಗೊಳ್ಳಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಆಸ್ಪ್ರೇಲಿಯಾ ತಂಡ ವಿಶೇಷ ವಿಮಾನದಲ್ಲಿ ಇಂಗ್ಲೆಂಡ್ಗೆ ಪ್ರಯಾಣಿಸಲಿದ್ದು, ಸೌಥಾಂಪ್ಟನ್ ಹಾಗೂ ಮ್ಯಾಂಚೆಸ್ಟರ್ನಲ್ಲಿ ಪಂದ್ಯಗಳು ನಡೆಯಲಿವೆ. ಕೊರೋನಾ ನಡುವೆಯೂ ಇಂಗ್ಲೆಂಡ್ ಕ್ರಿಕೆಟ್ ಸರಣಿಗಳನ್ನು ಆಯೋಜಿಸುತ್ತಿದ್ದು, ಸದ್ಯ ನಡೆಯುತ್ತಿರುವ ವಿಂಡೀಸ್ ವಿರುದ್ಧದ ಸರಣಿ ಬಳಿಕ ಪಾಕಿಸ್ತಾನ ವಿರುದ್ಧ ಸರಣಿ ಆಡಲಿದೆ.
ಆಂಗ್ಲೋ-ವಿಂಡೀಸ್ ಟೆಸ್ಟ್: ಇಂಗ್ಲೆಂಡ್ಗೆ ರೋಚಕ ಜಯ
ಮೊದಲಿಗೆ ಸೆಪ್ಟೆಂಬರ್ 04, 06 ಹಾಗೂ 08ರಂದು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಸಾಂಪ್ರಾದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿವೆ. ಇದಾದ ಬಳಿಕ ಸೆಪ್ಟೆಂಬರ್ 10, 12 ಹಾಗೂ 15ರಂದು ಏಕದಿನ ಸರಣಿಯನ್ನಾಡಲಿವೆ. ಪ್ರಸ್ತುತ ಸೌಥಾಂಪ್ಟನ್ ಹಾಗೂ ಮ್ಯಾಂಚೆಸ್ಟರ್ನಲ್ಲಿ ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್ ತಂಡಗಳು ಟೆಸ್ಟ್ ಪಂದ್ಯವನ್ನಾಡುತ್ತಿವೆ. ಇಲ್ಲಿ ಬಯೋ ಸೆಕ್ಯೂರ್ ಝೋನ್ ನಿರ್ಮಿಸಲಾಗಿದೆ. ಈ ಎರಡು ಮೈದಾನದಲ್ಲೇ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಲಿವೆ.