ಚೇತರಿಸಿಕೊಂಡ ಸ್ಮಿತ್-IPL ಟೂರ್ನಿಗೆ ಕಮ್‌ಬ್ಯಾಕ್?

Published : Mar 01, 2019, 10:30 AM ISTUpdated : Mar 01, 2019, 11:22 AM IST
ಚೇತರಿಸಿಕೊಂಡ ಸ್ಮಿತ್-IPL  ಟೂರ್ನಿಗೆ ಕಮ್‌ಬ್ಯಾಕ್?

ಸಾರಾಂಶ

ಐಪಿಎಲ್ ಟೂರ್ನಿಗೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಮರಳೋ ಸೂಚನೆ ನೀಡಿದ್ದಾರೆ. ರಾಜಸ್ಥಾನ ರಾಯಲ್ಸ್ ನಾಯಕ ಸ್ಮಿತ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ತಂಡಕ್ಕೆ ಮರಳೋದರಿಂದ ಈ ಬಾರಿ ಚುಟುಕು ಹೋರಾಟ ಮತ್ತಷ್ಟು ರೋಚಕವಾಗಲಿದೆ.

ಸಿಡ್ನಿ(ಮಾ.01): ಬಾಂಗ್ಲಾದೇಶ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಇಂಜುರಿಗೆ ತುತ್ತಾದ ಆಸ್ಟ್ರೇಲಿಯಾದ ನಿಷೇಧಿತ ಕ್ರಿಕೆಟಿಗ ಸ್ಟೀವ್ ಸ್ಮಿತ್ ಇದೀಗ ಚೇತರಿಸಿಕೊಂಡಿದ್ದಾರೆ. ಸ್ಮಿತ್ ನೆಟ್ಸ್‌ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಆಸ್ಟ್ರೇಲಿಯಾ ಕೋಚ್ ಜಸ್ಟಿನ್ ಲ್ಯಾಂಗರ್ ಹೇಳಿದ್ದಾರೆ.

ಇದನ್ನೂ ಓದಿ: ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾದ ವಿರಾಟ್ ಕೊಹ್ಲಿ: ಕೋಚ್ ಲ್ಯಾಂಗರ್!

ಸ್ಟೀವ್ ಸ್ಮಿತ್ ನೆಟ್ಸ್ ಪ್ರಾಕ್ಟೀಸ್ ವಿಡೀಯೋವನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಡೇವಿಡ್ ವಾರ್ನರ್ ಕೂಡ ಇಂಜುರಿಗೆ ತುತ್ತಾಗಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಐಪಿಎಲ್ ಟೂರ್ನಿಯಲ್ಲಿ ಇಬ್ಬರೂ ಪಾಲ್ಗೊಳ್ಳು  ಸಾಧ್ಯತೆ ಹೆಚ್ಚಿದೆ. ಈ ಮೂಲಕ 2019ರ ವಿಶ್ವಕಪ್ ಟೂರ್ನಿಗೂ ಆಯ್ಕೆಯಾಗಲಿದ್ದಾರೆ ಎಂದು ಲ್ಯಾಂಗರ್ ಹೇಳಿದ್ದಾರೆ.

 

 

ಇದನ್ನೂ ಓದಿ: ಹೊಸ ಇನ್ನಿಂಗ್ಸ್ ಆರಂಭಿಸಿದ ಸ್ಟೀವ್ ಸ್ಮಿತ್

2018ರಲ್ಲಿ ಸೌತ್ಆಫ್ರಿಕಾ ವಿರುದ್ದದ ಟೆಸ್ಟ್ ಪಂದ್ಯದಲ್ಲಿ ಬಾಲ್ ಟ್ಯಾಂಪರಿಂಗ್ ನಡೆಸಿದ ಆಸಿಸ್ ನಾಯಕ  ಸ್ಟೀವ್ ಸ್ಮಿತ್ ಹಾಗೂ ಡೇವಿಡ್ ವಾರ್ನರ್ ನಿಷೇಧಕ್ಕೊಳಗಾಗಿದ್ದಾರೆ. ಒಂದು ವರ್ಷದ ನಿಷೇಧ ಅನುಭವಿಸುತ್ತಿರುವ ಈ ಕ್ರಿಕೆಟಿಗರು ಇದೇ ಮಾರ್ಚ್‌ನಲ್ಲಿ ಶಿಕ್ಷೆಯಿಂದ ಮುಕ್ತರಾಗಲಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?