ಆಸೀಸ್ ಮಾರಕ ವೇಗಿ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ.!

Suvarna News   | Asianet News
Published : Dec 29, 2019, 02:41 PM IST
ಆಸೀಸ್ ಮಾರಕ ವೇಗಿ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ.!

ಸಾರಾಂಶ

ಆಸ್ಟ್ರೇಲಿಯಾ ತಂಡದ ಅನುಭವಿ ವೇಗಿ ಪೀಟರ್ ಸಿಡ್ಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ತಮ್ಮ ಹುಟ್ಟುಹಬ್ಬದ ದಿನದಂದೇ ಹ್ಯಾಟ್ರಿಕ್ ವಿಕೆಟ್ ಸಾಧನೆ ಮಾಡಿದ್ದ ಸಿಡ್ಲ್, ಇದೀಗ ತಮ್ಮ 11 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜರ್ನಿಗೆ ತೆರೆ ಎಳೆದಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಮೆಲ್ಬರ್ನ್[ಡಿ.29]: ಆಸ್ಟ್ರೇಲಿಯಾದ ಮಾರಕ ವೇಗಿ ಪೀಟರ್ ಸಿಡ್ಲ್ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಿದ್ದಾರೆ. ಇದರೊಂದಿಗೆ 11 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ಸಿಡ್ಲ್ ತೆರೆ ಎಳೆದಿದ್ದಾರೆ.

35 ವರ್ಷದ ಸಿಡ್ಲ್ ಆಸ್ಟ್ರೇಲಿಯಾ ಪರ 67 ಟೆಸ್ಟ್, 20 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಇದೇ ವರ್ಷ ನಡೆದ ಇಂಗ್ಲೆಂಡ್ ವಿರುದ್ಧದ ಆ್ಯಷಸ್ ಸರಣಿಯ ಅಂತಿಮ ಪಂದ್ಯದಲ್ಲಿ ಸಿಡ್ಲ್, ಕಡೆಯ ಬಾರಿಗೆ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.

ಕ್ರಿಕೆಟ್‌ಗೆ CSK ಮಾಜಿ ಸ್ಪಿನ್ನರ್‌ ಶದಾಬ್‌ ಜಕಾತಿ ನಿವೃತ್ತಿ

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗದ ಬೆನ್ನಲ್ಲೇ ಸಿಡ್ಲ್ ನಿವೃತ್ತಿಯ ನಿರ್ಧಾರ ತಳೆದಿದ್ದಾರೆ. ಸಿಡ್ಲ್ 67 ಟೆಸ್ಟ್ ಪಂದ್ಯಗಳಿಂದ 221 ವಿಕೆಟ್ ಕಬಳಿಸಿದ್ದು, ಆಸೀಸ್ ಪರ ಗರಿಷ್ಠ ವಿಕೆಟ್ ಪಡೆದ ಬೌಲರ್’ಗಳ ಪಟ್ಟಿಯಲ್ಲಿ 13ನೇ ಸ್ಥಾನ ಪಡೆದಿದ್ದಾರೆ. ಇನ್ನು 2010ರಲ್ಲಿ ತಮ್ಮ 26ನೇ ಹುಟ್ಟುಹಬ್ಬದ ದಿನದಂದೇ ಇಂಗ್ಲೆಂಡ್ ವಿರುದ್ಧ ಬ್ರಿಸ್ಬೇನ್’ನಲ್ಲಿ ನಡೆದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಳಿಸುವ ಮೂಲಕ ಸ್ಮರಣೀಯವಾಗಿಸಿಕೊಂಡಿದ್ದರು. 

ಪೀಟರ್ ಸಿಡ್ಲ್ ಆಸ್ಟ್ರೇಲಿಯಾ ಪರ 20 ಏಕದಿನ ಹಾಗೂ 2 ಟಿ20 ಪಂದ್ಯಗಳನ್ನಾಡಿದ್ದಾರೆ. ಸಿಡ್ಲ್ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಿದ್ದರೂ, ದೇಸಿ ಕ್ರಿಕೆಟ್’ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಬಿಗ್ ಬ್ಯಾಷ್ ಲೀಗ್ ಟೂರ್ನಿಯಲ್ಲಿ ಸಿಡ್ಲ್ ಅಡಿಲೇಡ್ ಸ್ಟ್ರೈಕರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇನ್ನು ಶೆಫೀಲ್ಡ್ ಶೀಲ್ಡ್ ಟೂರ್ನಿಯಲ್ಲಿ ವಿಕ್ಟೋರಿಯಾ ತಂಡದ ಪರ ಕಣಕ್ಕಿಳಿಯಲಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿನ್ನಸ್ವಾಮಿಯಲ್ಲಿ ಮತ್ತೆ ಐಪಿಎಲ್ : ಇಂದು ನಿರ್ಧಾರ
ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ