
ಮೆಲ್ಬರ್ನ್(ಏ.28): ಭಾರತದ ವಿಮಾನಗಳಿಗೆ ಆಸ್ಪ್ರೇಲಿಯಾ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಐಪಿಎಲ್‌ನಲ್ಲಿ ಆಡುತ್ತಿರುವ ಆಸ್ಪ್ರೇಲಿಯಾ ಆಟಗಾರರು ಟೂರ್ನಿ ಮುಗಿದ ಬಳಿಕ ತಮ್ಮ ಪ್ರಯಾಣಕ್ಕೆ ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ತಮ್ಮ ಸರ್ಕಾರ ಹಾಗೂ ಕ್ರಿಕೆಟ್ ಆಸ್ಪ್ರೇಲಿಯಾಗೆ ಮನವಿ ಮಾಡಿದ್ದರು. ಈ ಮನವಿಯನ್ನು ಆಸ್ಪ್ರೇಲಿಯಾ ಪ್ರಧಾನಿ ಸ್ಕಾಟ್ ಮೊರ್ರಿಸನ್ ತಿರಸ್ಕರಿಸಿದ್ದಾರೆ.
‘ಆಟಗಾರರು ಖಾಸಗಿಯಾಗಿ ಐಪಿಎಲ್‌ಗೆ ತೆರಳಿದ್ದಾರೆ. ಇದು ಆಸ್ಪ್ರೇಲಿಯಾ ಪ್ರವಾಸದ ಭಾಗವಲ್ಲ. ತಮ್ಮ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಂಡು, ತಾವೇ ವ್ಯವಸ್ಥೆ ಮಾಡಿಕೊಂಡು ಬರಬೇಕು. ಆಸ್ಪ್ರೇಲಿಯಾ ಸರ್ಕಾರ ಯಾವುದೇ ನೆರವು ನೀಡುವುದಿಲ್ಲ’ ಎಂದು ಮೊರ್ರಿಸನ್ ಹೇಳಿದ್ದಾರೆ.
ಐಪಿಎಲ್ 2021: ನಮ್ಮನ್ನು ಕರೆದೊಯ್ಯಲು ವಿಮಾನ ಕಳಿಸಿ: ಕ್ರಿಸ್ ಲಿನ್
ಈ ಮೊದಲು ಮುಂಬೈ ಇಂಡಿಯನ್ಸ್ ಆಟಗಾರ ಕ್ರಿಸ್ ಲಿನ್, ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಬಳಿ ಐಪಿಎಲ್ ಮುಗಿಯುತ್ತಿದ್ದಂತೆಯೇ ಟೂರ್ನಿಯಲ್ಲಿ ಪಾಲ್ಗೊಂಡಿರು ಆಸೀಸ್ ಆಟಗಾರರನ್ನು ವಿಶೇಷ ವಿಮಾನದ ಮೂಲಕ ಕರೆಸಿಕೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದರು.
ವಿದೇಶಿ ಆಟಗಾರರಿಗೆ ಬಿಸಿಸಿಐ ಅಭಯ!
ನವದೆಹಲಿ: ಭಾರತದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ, ಐಪಿಎಲ್‌ನಲ್ಲಿ ಆಡುತ್ತಿರುವ ವಿದೇಶಿ ಆಟಗಾರರು ಆತಂಕಗೊಂಡಿದ್ದಾರೆ. ಕೆಲವರು ಈಗಾಗಲೇ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಈ ಕಾರಣ, ಬಿಸಿಸಿಐ ವಿದೇಶಿ ಆಟಗಾರರಿಗೆ ಅಭಯ ನೀಡಿದೆ.
‘ಹೆದರಬೇಡಿ, ಬಿಸಿಸಿಐ ಪರಿಸ್ಥಿತಿ ಮೇಲೆ ಕಣ್ಣಿಟ್ಟಿದ್ದು, ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ. ನಿಮ್ಮನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವ ವರೆಗೂ ಐಪಿಎಲ್ ಮುಗಿಯುವುದಿಲ್ಲ’ ಎಂದು ಬಿಸಿಸಿಐ ಸಿಒಒ ಹೇಮಾಂಗ್ ಅಮಿನ್ ವಿದೇಶಿ ಆಟಗಾರರಿಗೆ ಪತ್ರ ಬರೆದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.