ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟಿಂಗ್ ಮಾಡುವಲ್ಲಿ ಕಾಂಗರೂ ಪಡೆಯ ಆರಂಭಿಕ ಬ್ಯಾಟರ್‌ಗಳು ಯಶಸ್ವಿಯಾದರು.
ರಾಜ್‌ಕೋಟ್(ಸೆ.27): ಅಗ್ರಕ್ರಮಾಂಕದ ಬ್ಯಾಟರ್‌ಗಳ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ತಂಡವು ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಬೃಹತ್ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪ್ರವಾಸಿ ಆಸ್ಟ್ರೇಲಿಯಾ ತಂಡವು ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 352 ರನ್ ಬಾರಿಸಿದ್ದು ಆತಿಥೇಯ ಟೀಂ ಇಂಡಿಯಾಗೆ ಸವಾಲಿನ ಗುರಿ ನೀಡಿದೆ.
ಇಲ್ಲಿನ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟಿಂಗ್ ಮಾಡುವಲ್ಲಿ ಕಾಂಗರೂ ಪಡೆಯ ಆರಂಭಿಕ ಬ್ಯಾಟರ್‌ಗಳು ಯಶಸ್ವಿಯಾದರು. ಟೀಂ ಇಂಡಿಯಾ ವೇಗಿಗಳ ಎದುರು ಆರಂಭದಿಂದಲೇ ಡೇವಿಡ್ ವಾರ್ನರ್ ಹಾಗೂ ಮಿಚೆಲ್ ಮಾರ್ಷ್ ಸ್ಪೋಟಕ ಬ್ಯಾಟಿಂಗ್ ಮೂಲಕ ತಬ್ಬಿಬ್ಬಾಗುವಂತೆ ಮಾಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 8.1 ಓವರ್‌ಗಳಲ್ಲಿ 78 ರನ್‌ಗಳ ಜತೆಯಾಟವಾಡಿತು. ಮಿಂಚಿನ ಬ್ಯಾಟಿಂಗ್ ನಡೆಸಿದ ಡೇವಿಡ್ ವಾರ್ನರ್ ಕೇವಲ 34 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 56 ರನ್ ಬಾರಿಸಿ ಪ್ರಸಿದ್ದ್ ಕೃಷ್ಣಗೆ ವಿಕೆಟ್ ಒಪ್ಪಿಸಿದರು. ಮೂರು ಪಂದ್ಯಗಳಲ್ಲೂ ಸ್ಥಿರ ಪ್ರದರ್ಶನ ತೋರಿದ ವಾರ್ನರ್, ಹ್ಯಾಟ್ರಿಕ್ ಫಿಫ್ಟಿ ಸಿಡಿಸಿ ಮಿಂಚಿದರು.
Innings break!
Australia post 352/7 in the first innings!
Over to our batters 💪
Scorecard ▶️ https://t.co/H0AW9UXI5Y | | pic.twitter.com/FBH2ZdnEF6
undefined
20 ಓವರ್‌ನಲ್ಲಿ 314 ರನ್, ಕೇವಲ 9 ಎಸೆತಗಳಲ್ಲಿ 50..! ಟಿ20 ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ನೆಟ್ಟ ನೇಪಾಳ..!
ಇದಾದ ಬಳಿಕ ಎರಡನೇ ವಿಕೆಟ್‌ಗೆ ಜತೆಯಾದ ಮಿಚೆಲ್ ಮಾರ್ಷ್ ಹಾಗೂ ಸ್ಟೀವ್ ಸ್ಮಿತ್ ಜೋಡಿ ಭಾರತೀಯ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡಿದರು. ಎರಡನೇ ವಿಕೆಟ್‌ಗೆ ಈ ಜೋಡಿ 137 ರನ್ ಜತೆಯಾಟ ನಿಭಾಯಿಸಿತು. ಆರಂಭಿಕ ಬ್ಯಾಟರ್ ಮಿಚೆಲ್ ಮಾರ್ಷ್ ಕೇವಲ 4 ರನ್‌ಗಳಿಂದ ಶತಕ ವಂಚಿತರಾದರು. ಮಿಚೆಲ್ ಮಾರ್ಷ್ 84 ಎಸೆತಗಳನ್ನು ಎದುರಿಸಿ 13 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 96 ರನ್ ಬಾರಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಸ್ಟೀವ್ ಸ್ಮಿತ್(74) ಅವರನ್ನು ಬಲಿ ಪಡೆಯುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು.
Ind vs Aus: ಭಾರತ ಎದುರು ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ ಆಯ್ಕೆ, ಉಭಯ ತಂಡದಲ್ಲೂ ಮೇಜರ್ ಚೇಂಜ್
ಆಸೀಸ್ ರನ್ ವೇಗಕ್ಕೆ ಕಡಿವಾಣ ಹಾಕಿದ ಬೌಲರ್‌ಗಳು: ಒಂದು ಹಂತದಲ್ಲಿ ಆಸ್ಟ್ರೇಲಿಯಾ 31.3 ಓವರ್‌ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 142 ರನ್ ಗಳಿಸಿತ್ತು. ಹೀಗಾಗಿ ಆಸೀಸ್ ಅನಾಯಾಸವಾಗಿ ಇನ್ನುಳಿದ 18.3 ಓವರ್‌ಗಳಲ್ಲಿ 150 ರನ್ ಕಲೆಹಾಕಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸ್ಮಿತ್ ವಿಕೆಟ್ ಪತನದ ಬಳಿಕ ಆಸೀಸ್ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಅಲೆಕ್ಸ್ ಕ್ಯಾರಿ(11), ಗ್ಲೆನ್ ಮ್ಯಾಕ್ಸ್‌ವೆಲ್(5) ಹಾಗೂ ಕ್ಯಾಮರೋನ್ ಗ್ರೀನ್(9) ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಮಾರ್ನಸ್ ಲಬುಶೇನ್ 58 ಎಸೆತಗಳಲ್ಲಿ 9 ಬೌಂಡರಿ ಸಹಿತ 72 ರನ್ ಬಾರಿಸಿ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಇನ್ನು ಟೀಂ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ 3 ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ 2, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ದ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರು.