ವೆಸ್ಟ್‌ ಇಂಡೀಸ್ ಎದುರು ಪಾಕಿಸ್ತಾನಕ್ಕೆ ಹೀನಾಯ ಸೋಲು; ಬಾಬರ್ ಅಜಂ ಕ್ಯಾಪ್ಟನ್ ಆಗುತ್ತಿದ್ದಂತೆ ಪಾಕಿಸ್ತಾನ ದಿವಾಳಿ!

Published : Jul 29, 2026, 11:41 AM IST
Babar Azam

ಸಾರಾಂಶ

ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ 90 ರನ್‌ಗಳ ಹೀನಾಯ ಸೋಲು ಕಂಡಿದೆ. ಈ ಸೋಲಿನೊಂದಿಗೆ, ಪಾಕಿಸ್ತಾನವು 2025-27ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಬಹುತೇಕ ಹೊರಬಿದ್ದಿದ್ದು, ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಟ್ರಿನಿಡ್ಯಾಡ್: ಬಾಬರ್ ಅಜಂ ಮತ್ತೊಮ್ಮೆ ಪಾಕಿಸ್ತಾನ ಟೆಸ್ಟ್ ತಂಡದ ನಾಯಕರಾದ ಬೆನ್ನಲ್ಲೇ ತಂಡ ವೆಸ್ಟ್ ಇಂಡೀಸ್ ಎದುರು ದಯನೀಯ ಸೋಲು ಅನುಭವಿಸಿದೆ. ಇದಷ್ಟೇ ಅಲ್ಲದೇ ಅಧಿಕೃತವಾಗಿ 2025-27ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.

ವೆಸ್ಟ್‌ ಇಂಡೀಸ್ ನೀಡಿದ್ದ 211 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು ಕೇವಲ 120 ರನ್‌ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ವೆಸ್ಟ್ ಇಂಡೀಸ್ ತಂಡವು ಮೊದಲ ಟೆಸ್ಟ್‌ ಪಂದ್ಯವನ್ನು 90 ರನ್‌ಗಳಿಂದ ಜಯಿಸಿದೆ. ಇದರೊಂದಿಗೆ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವು 1-0 ಮುನ್ನಡೆ ಸಾಧಿಸಿದೆ. ಇನ್ನು ಈ ಸೋಲಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಬಾಬರ್ ಅಜಂ ಪಡೆ ಪಾತಾಳಕ್ಕೆ ಕುಸಿದಿದೆ.

ವಿದೇಶಿ ನೆಲದಲ್ಲಿ ಸತತ 8ನೇ ಟೆಸ್ಟ್ ಸೋಲು ಕಂಡ ಪಾಕಿಸ್ತಾನ:

ಸದ್ಯ ಪಾಕಿಸ್ತಾನ ಕ್ರಿಕೆಟ್ ತಂಡದ ದುಸ್ಥಿತಿ ಹೇಳತೀರದಾಗಿದೆ. ವೆಸ್ಟ್ ಇಂಡೀಸ್ ಎದುರಿನ ಮೊದಲ ಟೆಸ್ಟ್ ಸೋಲು, ಪಾಕಿಸ್ತಾನ ಪಾಲಿಗೆ ವಿದೇಶಿ ನೆಲದಲ್ಲಿ ಅನುಭವಿಸಿದ ಸತತ 8ನೇ ಟೆಸ್ಟ್ ಸೋಲು ಎನಿಸಿಕೊಂಡಿದೆ. ಈ ಸೋಲಿನೊಂದಿಗೆ ಪಾಕಿಸ್ತಾನವು ಪಾಯಿಂಟ್‌ ಪ್ರತಿಶತದಲ್ಲಿ 8.33ರಿಂದ 6.66ಕ್ಕೆ ಕುಸಿದಿದೆ. ಈ ಸೋಲಿನೊಂದಿಗೆ ಪಾಕ್ ಬಹುತೇಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ರೇಸ್‌ನಿಂದ ಹೊರಬಿದ್ದಂತೆ ಆಗಿದೆ. ಇನ್ನು ಪಾಕಿಸ್ತಾನ ಎದುರು ಗೆಲುವು ದಾಖಲಿಸಿದ ವೆಸ್ಟ್ ಇಂಡೀಸ್ ಇದೀಗ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನಕ್ಕೆ ಏರಿಕೆಯಾಗಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಪಾತಾಳಕ್ಕೆ ಕುಸಿದ ಪಾಕಿಸ್ತಾನ:

ವೆಸ್ಟ್ ಇಂಡೀಸ್ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ 90 ರನ್‌ಗಳ ಹೀನಾಯ ಸೋಲು ಅನುಭವಿಸಿದ ಪಾಕಿಸ್ತಾನ ಇದೀಗ 2025-27ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಎಲ್ಲಕ್ಕಿಂತ ಕಡೆಯ ಸ್ಥಾನಕ್ಕೆ ಜಾರಿದೆ. 2025-27ನೇ ಸಾಲಿನ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಪಾಕಿಸ್ತಾನ ತಂಡದ ಪ್ರದರ್ಶನ ತೀರಾ ನಿರಾಶಾದಾಯಕವಾಗಿದೆ. ಪಾಕಿಸ್ತಾನ ಇದುವರೆಗೂ ಆಡಿದ ಐದು ಟೆಸ್ಟ್ ಪಂದ್ಯಗಳ ಪೈಕಿ ನಾಲ್ಕು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇನ್ನೊಂದು ಪಂದ್ಯದಲ್ಲಿ ಪಾಕ್ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದೆ.

8ನೇ ಸ್ಥಾನಕ್ಕೆ ಜಿಗಿದ ವೆಸ್ಟ್‌ ಇಂಡೀಸ್:

ಪಾಕಿಸ್ತಾನ ಎದುರು ಮೊದಲ ಟೆಸ್ಟ್‌ ಪಂದ್ಯದಲ್ಲೇ ದಿಟ್ಟ ಪ್ರದರ್ಶನ ತೋರಿದ ಆತಿಥೇಯ ವೆಸ್ಟ್‌ ಇಂಡೀಸ್ ತಂಡವು ಇದೀಗ 22.73% ನೊಂದಿಗೆ ಎಂಟನೇ ಸ್ಥಾನಕ್ಕೆ ಜಿಗಿದಿದೆ. ಈ ಸೀಸನ್‌ನಲ್ಲಿ ವೆಸ್ಟ್ ಇಂಡೀಸ್ ದಾಖಲಿಸಿದ ಎರಡನೇ ಗೆಲುವು ಇದಾಗಿದೆ. ವೆಸ್ಟ್ ಇಂಡೀಸ್ ತಂಡವು ಈ ಸೀಸನ್‌ನಲ್ಲಿ 11 ಟೆಸ್ಟ್ ಪಂದ್ಯಗಳನ್ನಾಡಿದ್ದು ಏಳು ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಇನ್ನುಳಿದ 4 ಪಂದ್ಯಗಳ ಪೈಕಿ ಎರಡು ಪಂದ್ಯಗಳನ್ನು ಗೆದ್ದಿದ್ದರೇ, ಇನ್ನೆರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ.

 

ಆಸೀಸ್‌ಗೆ ಅಗ್ರಸ್ಥಾನ; ಐದನೇ ಸ್ಥಾನದಲ್ಲಿದೆ ಭಾರತ

ಇನ್ನು 2025-27ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಪರ್ಸೆಂಟೇಜ್ ಆಧಾರದಲ್ಲಿ ಸದ್ಯ ಆಸ್ಟ್ರೇಲಿಯಾ ತಂಡವು 87.50% ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಈ ಸೀಸನ್‌ನಲ್ಲಿ ಆಸ್ಟ್ರೇಲಿಯಾ ಎಂಟು ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ಪೈಕಿ ಏಳು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನೊಂದು ಪಂದ್ಯದಲ್ಲಿ ಮಾತ್ರ ಸೋಲು ಅನುಭವಿಸಿದೆ. ಇನ್ನು ಹಾಲಿ ಚಾಂಪಿಯನ್ ದಕ್ಷಿಣ ಆಫ್ರಿಕಾ(75), ನ್ಯೂಜಿಲೆಂಡ್(72.22) ಹಾಗೂ ಬಾಂಗ್ಲಾದೇಶ(58.33) ಅಂಕಗಳ ಸಹಿತ ಕ್ರಮವಾಗಿ ಮೊದಲ 4 ಸ್ಥಾನಗಳಲ್ಲಿ ಭದ್ರವಾಗಿದೆ.

ಇನ್ನು ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ 48.15% ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಮುಂಬರುವ ಶ್ರೀಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ತೋರಿದರೆ, ಅಂಕಪಟ್ಟಿಯಲ್ಲಿ ಮೇಲೇರುವಸ ಸಾಧ್ಯತೆಯಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

60 ವಿಕೆಟ್, 950 ರನ್ ಹೊಡೆದ್ರೂ ಸಿಗದ ಅವಕಾಶ! BCCI ನಿರ್ಲಕ್ಷಿಸಿದ ಆ ಆಲ್ರೌಂಡರ್ ಯಾರು?
Sourav Ganguly: ದಾದಾ ನೋ ಅಂದರೂ ಮನೆಗೆ ಬಂದ ರಾಜಕೀಯ! ಗಂಗೂಲಿ ಕುಟುಂಬದಿಂದ ಅಖಾಡಕ್ಕಿಳಿದ ಆ ವ್ಯಕ್ತಿ ಸೇರಿದ್ದು ಯಾವ ಪಕ್ಷ?