
ಢಾಕಾ: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಮುಂಬರುವ ಫೆಬ್ರವರಿ 07ರಿಂದ ಆರಂಭವಾಗಲಿದ್ದು, ಈ ಪ್ರತಿಷ್ಠಿತ ಕ್ರಿಕೆಟ್ ಟೂರ್ನಿಗೆ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿವೆ. ಈ ಟೂರ್ನಿಯನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಚುಟುಕು ಕ್ರಿಕೆಟ್ ವಿಶ್ವಕಪ್ ಟೂರ್ನಿಗೆ ಹಾಲಿ ಚಾಂಪಿಯನ್ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ದೇಶಗಳು ತಮ್ಮ ತಂಡವನ್ನು ಪ್ರಕಟಿಸಿವೆ. ಇದೀಗ ನೆರೆಯ ಬಾಂಗ್ಲಾದೇಶ ತಂಡವು 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿವೆ. ಸದ್ಯ ಭಾರತ-ಬಾಂಗ್ಲಾದೇಶ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟ ಬೆನ್ನಲ್ಲೇ ಇದೀಗ ಬಾಂಗ್ಲಾದೇಶ ತಂಡ ಪ್ರಕಟಗೊಂಡಿದೆ.
ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಬಾಂಗ್ಲಾದೇಶ ತಂಡದ ನಾಯಕರಾಗಿ ಲಿಟನ್ ದಾಸ್ ಅವರನ್ನು ನೇಮಕ ಮಾಡಲಾಗಿದೆ. ಸಾಕಷ್ಟು ಅನುಭವ ಇರುವ ಆಟಗಾರರಾಗಿರುವುದರಿಂದ ಸಾಕಷ್ಟು ನಂಬಿಕೆಯಿಟ್ಟು ಈ ಆಟಗಾರನಾಗಿ ನಾಯಕ ಪಟ್ಟ ಕಟ್ಟಲಾಗಿದೆ. ಇನ್ನು ಮೊಹಮ್ಮದ್ ಸೈಫ್ ಹಸನ್‌ಗೆ ಉಪನಾಯಕ ಪಟ್ಟ ಕಟ್ಟಲಾಗಿದೆ. ಇನ್ನು ತಂಡದಲ್ಲಿ ಅನುಭವಿ ವೇಗದ ಬೌಲರ್‌ಗಳಾದ ಮುಸ್ತಾಫಿಜುರ್ ರೆಹಮಾನ್ ಹಾಗೂ ಟಸ್ಕಿನ್ ಅಹಮದ್ ಕೂಡಾ ಸ್ಥಾನ ಪಡೆದಿದ್ದಾರೆ.
ಲಿಟನ್ ಕುಮಾರ್ ದಾಸ್(ನಾಯಕ), ಮೊಹಮ್ಮದ್ ಸೈಫ್ ಹಸನ್(ಉಪನಾಯಕ), ತಂಜೀದ್ ಹಸನ್. ಮೊಹಮ್ಮದ್ ಪರ್ವೇಜ್ ಹೊಸೈನ್, ತೌಹಿದ್ ಹೃದಯ್, ಶಮಿಮ್ ಹೊಸೈನ್, ಝ್ವಜಿ ನೂರುಲ್ ಹಸನ್ ಸೋಹನ್, ಶಾಕ್ ಮೆಹದಿ ಹಸನ್, ರಿಶಾದ್ ಹೊಸೈನ್, ನಸುಮ್ ಅಹಮದ್, ಮುಸ್ತಾಫಿಜುರ್ ರಹಮಾನ್, ತಂಜಿಮ್ ಹಸನ್ ಶಕಿಬ್, ಟಸ್ಕಿನ್ ಅಹಮದ್, ಮೊಹಮ್ಮದ್ ಸೈಫುದ್ದೀನ್, ಶೌರಿಫುಲ್ ಇಸ್ಲಾಂ.
ಬಾಂಗ್ಲಾದೇಶ-ವೆಸ್ಟ್ ಇಂಡೀಸ್: ಫೆಬ್ರವರಿ 07- ಈಡನ್ ಗಾರ್ಡನ್ಸ್, ಕೋಲ್ಕತಾ
ಬಾಂಗ್ಲಾದೇಶ-ಇಟಲಿ: ಫೆಬ್ರವರಿ 09 - ಈಡನ್ ಗಾರ್ಡನ್ಸ್, ಕೋಲ್ಕತಾ
ಬಾಂಗ್ಲಾದೇಶ-ಇಂಗ್ಲೆಂಡ್: ಫೆಬ್ರವರಿ 14 - ಈಡನ್ ಗಾರ್ಡನ್ಸ್, ಕೋಲ್ಕತಾ
ಬಾಂಗ್ಲಾದೇಶ-ನೇಪಾಳ: ಫೆಬ್ರವರಿ 17 -ವಾಂಖೆಡೆ ಸ್ಟೇಡಿಯಂ, ಮುಂಬೈ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.