ತವರಲ್ಲೇ ಪಾಕಿಸ್ತಾನಕ್ಕೆ ಮುಖಭಂಗ; ಐತಿಹಾಸಿಕ ಟೆಸ್ಟ್ ಗೆಲುವು ಸಾಧಿಸಿದ ಬಾಂಗ್ಲಾದೇಶ..!

Published : Aug 26, 2024, 11:05 AM IST
ತವರಲ್ಲೇ ಪಾಕಿಸ್ತಾನಕ್ಕೆ ಮುಖಭಂಗ; ಐತಿಹಾಸಿಕ ಟೆಸ್ಟ್ ಗೆಲುವು ಸಾಧಿಸಿದ ಬಾಂಗ್ಲಾದೇಶ..!

ಸಾರಾಂಶ

ಬಾಂಗ್ಲಾದೇಶ ತಂಡವು ಬದ್ದ ಎದುರಾಳಿ ಪಾಕಿಸ್ತಾನ ಎದುರು 10 ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಇದು ಪಾಕ್ ಎದುರು ಬಾಂಗ್ಲಾ ದಾಖಲಿಸಿದ ಮೊದಲ ಗೆಲುವು ಎನಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ರಾವಲ್ಪಿಂಡಿ: ಬಾಂಗ್ಲಾದೇಶ ವಿರುದ್ಧ ತನ್ನದೇ ತವರಿನಲ್ಲಿ ಪಾಕಿಸ್ತಾನ ಹೀನಾಯ ಸೋಲಿನ ಮುಖಭಂಗ ಕ್ಕೊಳಗಾಗಿದೆ. ಭಾನುವಾರ ಕೊನೆಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ 10 ವಿಕೆಟ್ ಹೀನಾಯ ಸೋಲನುಭವಿಸಿತು. ಈ ಮೂಲಕ ಟೆಸ್ಟ್ ನಲ್ಲಿ ಬಾಂಗ್ಲಾ ತಂಡ ಪಾಕ್ ವಿರುದ್ಧ ಮೊದಲ ಬಾರಿ ಗೆಲುವು ಸಾಧಿಸಿತು.

ಮೊದಲ ಇನ್ನಿಂಗ್ಸ್‌ನಲ್ಲಿ ಪಾಕ್ 6 ವಿಕೆಟ್‌ಗೆ 448 ರನ್‌ ಗಳಿಸಿ ಡಿಕ್ಲರ್‌ಮಾಡಿಕೊಂಡಿತ್ತು.ಇದಕ್ಕುತ್ತರವಾಗಿ ಬಾಂಗ್ಲಾ 565 ರನ್ ಗಳಿಸಿ, 117 ರನ್ ಮುನ್ನಡೆ ಪಡೆದಿತ್ತು. ಬಳಿಕ 2ನೇ ಇನ್ನಿಂಗ್ಸ್ ಆರಂಭಿಸಿದ್ದ ಪಾಕ್ 4ನೇ ದಿನದಂತ್ಯಕ್ಕೆ 1 ವಿಕೆಟ್‌ಗೆ 23 ರನ್ ಗಳಿಸಿತ್ತು. ಆದರೆ ಭಾನುವಾದ ಬ್ಯಾಟಿಂಗ್ ವೈಫಲ್ಯಕ್ಕೆ ಗುರಿಯಾಗಿ ಕೇವಲ 146 ರನ್‌ಗೆ ಸರ್ವಪತನ ಕಂಡಿತು.

ಮಹಾರಾಜ ಟ್ರೋಫಿಯಲ್ಲಿ ಬೆಂಗಳೂರಿಗೆ 5ನೇ ಜಯ: ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನ

ಮೆಹಿದಿ ಹಸನ್ ಮೀರಾಜ್ 4, ಶಕೀಬ್ ಹಸನ್ 3 ವಿಕೆಟ್ ಕಬಳಿಸಿದರು. 30 ರನ್‌ಗಳ ಸುಲಭ ಗುರಿ ಪಡೆದ ಬಾಂಗ್ಲಾ 6.3 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ ಜಯಗಳಿಸಿತು. ಪಾಕ್ ಇದೇ ಮೊದಲ ಬಾರಿ ತವರಿನಲ್ಲಿ 10 ವಿಕೆಟ್‌ಗಳ ಸೋಲಿನ ರುಚಿ ಅನುಭವಿಸಿತು.

ಟೆಸ್ಟ್: ಶ್ರೀಲಂಕಾ ವಿರುದ್ಧ ಇಂಗ್ಲೆಂಡ್ ಜಯಭೇರಿ

ಮ್ಯಾಂಚೆಸ್ಟರ್: ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 5 ವಿಕೆಟ್ ಗೆಲುವು ಸಾಧಿಸಿದೆ. ಇದರೊಂದಿಗೆ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು. ಗೆಲುವಿನ 205 ರನ್ ಗುರಿ ಪಡೆದಿದ ಇಂಗ್ಲೆಂಡ್ ಒಂದು ಹಂತದಲ್ಲಿ 70 ರನ್‌ಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆದರೆ ಜೋ ರೂಟ್ (62) ಹಾಗೂ ಹ್ಯಾರಿ ಬೂಕ್ (32) ತಂಡಕ್ಕೆ ಗೆಲುವು ತಂದುಕೊಟ್ಟರು. 

ಆ ಎರಡು ವಿಷ್ಯದಿಂದ ಶಿಖರ್‌ ಧವನ್ ಕೆರಿಯರ್ ಬೇಗ ಕ್ಲೋಸ್ ಆಯ್ತಾ..?

ಮೊದಲ ಇನ್ನಿಂಗ್ಸ್‌ನಲ್ಲಿ ಶ್ರೀಲಂಕಾ 236ಕ್ಕೆ ಆಲೌಟಾಗಿದ್ದರೆ, ಇಂಗ್ಲೆಂಡ್ 358 ರನ್ ಗಳಿಸಿ ಇನ್ನಿಂಗ್ಸ್ ಮುನ್ನಡೆ ಸಾಧಿಸಿತ್ತು. ಬಳಿಕ 2ನೇ ಇನ್ನಿಂಗ್ಸ್‌ನಲ್ಲಿ ತೀವ್ರ ಪ್ರತಿರೋಧ ತೋರಿದ್ದ ಶ್ರೀಲಂಕಾ 326 ರನ್ ಕಲೆ ಹಾಕಿತ್ತು. 2ನೇ ಪಂದ್ಯ ಆ.29ಕ್ಕೆ ಆರಂಭಗೊಳ್ಳಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?