Ind vs Ban: ಮೊದಲ ಟೆಸ್ಟ್‌ಗೂ ಮುನ್ನ ಬಾಂಗ್ಲಾ ನಾಯಕ ಶಕೀಬ್ ಆಸ್ಪತ್ರೆಗೆ..!

By Naveena K V  |  First Published Dec 13, 2022, 3:45 PM IST

ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14ರಿಂದ ಆರಂಭ
ಮೊದಲ ಟೆಸ್ಟ್‌ ಪಂದ್ಯಕ್ಕೂ ಮುನ್ನ ಸ್ಕ್ಯಾನ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ತೆರಳಿದ ಬಾಂಗ್ಲಾ ನಾಯಕ ಶಕೀಬ್
ಶಕೀಬ್ ಅಲ್ ಹಸನ್, ಬಾಂಗ್ಲಾದೇಶ ಟೆಸ್ಟ್ ತಂಡದ ನಾಯಕ


ಛಟ್ಟೋಗ್ರಾಮ್‌(ಡಿ.13): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಡಿಸೆಂಬರ್ 14ರಂದು ಮೊದಲ ಟೆಸ್ಟ್‌ ಪಂದ್ಯವು ಇಲ್ಲಿನ ಝಹೂರ್ ಅಹಮ್ಮದ್ ಚೌಧರಿ ಸ್ಟೇಡಿಯಂನಲ್ಲಿ ಜರುಗಲಿದ್ದು, ಟೆಸ್ಟ್‌ ಪಂದ್ಯ ಆರಂಭಕ್ಕೂ ಮುನ್ನ ಬಾಂಗ್ಲಾದೇಶ ಪಾಳಯದಲ್ಲಿ ಆತಂಕ ಮನೆಮಾಡಿದ್ದು, ತಂಡದ ನಾಯಕ ಶಕೀಬ್ ಅಲ್ ಹಸನ್, ಬೆನ್ನು ನೋವಿನ ತೀವ್ರತೆಯನ್ನು ಅರಿಯಲು ಸ್ಕ್ಯಾನ್‌ ಮಾಡಿಸಿಕೊಳ್ಳಲು ಆಸ್ಪತ್ರೆಗೆ ತೆರಳಿದ್ದಾರೆ.

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಬಾಂಗ್ಲಾದೇಶ ತಂಡವು 2-1 ಅಂತರದಲ್ಲಿ ಕೈವಶ ಮಾಡಿಕೊಂಡಿತ್ತು. ಈ ಸರಣಿಯ ವೇಳೆಯಲ್ಲಿ ಟೀಂ ಇಂಡಿಯಾ ವೇಗಿ ಉಮ್ರಾನ್ ಮಲಿಕ್ ಅವರ ಎಸೆದ ಬೌನ್ಸರ್‌ಗಳು ಶಕೀಬ್ ಅವರ ಪಕ್ಕೆಲುಬಿಗೆ ಬಡಿದಿತ್ತು. ಹೀಗಾಗಿ ಡಿಸೆಂಬರ್ 14ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯಕ್ಕೂ ಮುನ್ನ ಶಕೀಬ್ ಅಲ್ ಹಸನ್ ಯಾವುದೇ ಅಭ್ಯಾಸದಲ್ಲಿ ಪಾಲ್ಗೊಂಡಿರಲಿಲ್ಲ. ಆದರೆ ಶಕೀಬ್ ಅವರ ಅಲಭ್ಯತೆಯ ಬಗ್ಗೆ ಯಾವುದೇ ಅನುಮಾನ ಬೇಡ, ಅವರು ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ವಿಶ್ರಾಂತಿ ಪಡೆಯುತ್ತಿದ್ದಾರೆಯಷ್ಟೇ ಎಂದು ಮೂಲಗಳು ತಿಳಿಸಿವೆ.

Tap to resize

Latest Videos

ಎರಡನೇ ಏಕದಿನ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಎಸೆದ ಚೆಂಡು ಬಡಿದಿದ್ದು, ಶಕೀಬ್ ಅಲ್ ಹಸನ್ ಅವರ ಬೆನ್ನು ನೋವಿಗೆ ಕಾರಣವಾಗಿದೆ. ಹಾಗಾಗಿಯೇ ಶಕೀಬ್ ಅಲ್ ಹಸನ್ ಆಸ್ಪತ್ರೆಗೆ ತೆರಳಿ, ಎಕ್ಸ್‌-ರೇ ಮಾಡಿಸಿಕೊಂಡಿದ್ದಾರೆ. ನಿನ್ನೆ ಶಕೀಬ್ ಅಲ್ ಹಸನ್, ಬ್ಯಾಟಿಂಗ್, ಬೌಲಿಂಗ್ ಅಥವಾ ಫೀಲ್ಡಿಂಗ್‌ ಅಭ್ಯಾಸದಲ್ಲಿ ಭಾಗವಹಿಸಿರಲಿಲ್ಲ. ಅಭ್ಯಾಸ ಮೈದಾನದಲ್ಲಿ ಅವರು ವಿಶ್ರಾಂತಿ ಪಡೆದುಕೊಂಡರು. ಆದರೆ ಶಕೀಬ್ ಅವರ ಲಭ್ಯತೆಯ ಕುರಿತಂತೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಅವರು ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ind vs Ban: ಟೀಂ ಇಂಡಿಯಾ ಎದುರಿನ ಟೆಸ್ಟ್ ಸರಣಿಗೆ 17 ಆಟಗಾರರನ್ನೊಳಗೊಂಡ ಬಲಿಷ್ಠ ಬಾಂಗ್ಲಾದೇಶ ತಂಡ ಪ್ರಕಟ..!

ಶಕೀಬ್ ಅಲ್ ಹಸನ್‌, ಭಾರತ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 26.66ರ ಬ್ಯಾಟಿಂಗ್‌ ಸರಾಸರಿಯಲ್ಲಿ 80 ರನ್ ಬಾರಿಸಿದ್ದರು. ಮೂರನೇ ಏಕದಿನ ಪಂದ್ಯದಲ್ಲಿ ಶಕೀಬ್ 43 ರನ್ ಬಾರಿಸಿದ್ದು, ಆ ಸರಣಿಯಲ್ಲಿ ಅವರ ಗರಿಷ್ಠ ವೈಯುಕ್ತಿಕ ಸ್ಕೋರ್ ಎನಿಸಿಕೊಂಡಿತ್ತು. ಆದರೆ ಬೌಲಿಂಗ್‌ನಲ್ಲಿ ಶಕೀಬ್ ಅಲ್ ಹಸನ್‌, ಎಬೊದತ್ ಹೊಸೈನ್ ಜತೆಗೂಡಿ ತಲಾ 9 ವಿಕೆಟ್‌ ಕಬಳಿಸುವ ಮೂಲಕ ಜಂಟಿ ಗರಿಷ್ಠ ವಿಕೆಟ್‌ ಕಬಳಿಸಿದ ಬೌಲರ್ ಆಗಿ ಹೊರಹೊಮ್ಮಿದ್ದರು. ಇದೀಗ ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವು ಟೆಸ್ಟ್‌ ಸರಣಿಯಲ್ಲಿ ಬಲಿಷ್ಠ ಭಾರತ ತಂಡಕ್ಕೆ ಮತ್ತೆ ಶಾಕ್ ನೀಡಲು ಎದುರು ನೋಡುತ್ತಿದೆ

ಮೊದಲ ಟೆಸ್ಟ್ ಪಂದ್ಯಕ್ಕೆ ಬಾಂಗ್ಲಾದೇಶ ತಂಡ:

ಮೊಹಮದುಲ್ಲಾ ಹಸನ್ ಜಾಯ್, ನಜ್ಮುಲ್ ಹಸನ್ ಶಾಂಟೋ, ಮೊಮಿನುಲ್ ಹಕ್, ಯಾಸಿರ್ ಅಲಿ ಚೌಧರಿ, ಮುಷ್ಫಿಕುರ್ ರಹೀಂ, ಶಕೀಬ್ ಅಲ್ ಹಸನ್(ನಾಯಕ), ಲಿಟನ್ ದಾಸ್, ನೂರುಲ್ ಹಸನ್, ಮೆಹದಿ ಹಸನ್ ಮಿರಜ್, ತೈಜುಲ್ ಇಸ್ಲಾಂ, ಟಸ್ಕಿನ್ ಅಹಮ್ಮದ್, ಸಯ್ಯದ್ ಖಾಲಿದ್ ಅಹಮ್ಮದ್, ಎಬೊದತ್ ಹೊಸೈನ್, ಶೌರಿಫುಲ್ ಇಸ್ಲಾಂ, ಝಾಕೀರ್ ಹಸನ್, ರೆಜೌರ್ ರೆಹಮಾನ್ ರಾಜಾ, ಅನ್ಮುಲ್ ಹಕ್‌ ಬಿಜೈ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ

ಕೆ ಎಲ್ ರಾಹುಲ್(ನಾಯಕ), ಶುಭ್‌ಮನ್ ಗಿಲ್, ಚೇತೇಶ್ವರ್ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಕೆ ಎಸ್ ಭರತ್, ರವೀಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಬ್ ಕುಮಾರ್, ಜಯದೇವ್ ಉನಾದ್ಕಟ್

click me!