ಆಸೀಸ್‌ ನಾಡಲ್ಲಿ ಟೆಸ್ಟ್‌ ದಿಗ್ವಿಜಯ; ಟೀಂ ಇಂಡಿಯಾಗೆ ಭರ್ಜರಿ ಬೋನಸ್ ಘೋಷಿಸಿದ ದಾದಾ..!

By Suvarna NewsFirst Published Jan 19, 2021, 2:20 PM IST
Highlights

ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಂಪರ್ ಬಹುಮಾನ ಘೋಷಿಸಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.

ನವದೆಹಲಿ(ಜ.19): ಅಜಿಂಕ್ಯ ರಹಾನೆ ನೇತೃತ್ವದ ಟೀಂ ಇಂಡಿಯಾ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ಜಯಿಸುತ್ತಿದ್ದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾಗೆ 5 ಕೋಟಿ ರುಪಾಯಿ ಬಹುಮಾನ ಘೋಷಿಸಿದೆ. 

"

Just a remarkable win...To go to Australia and win a test series in this way ..will be remembered in the history of indian cricket forever ..Bcci announces a 5 cr bonus for the team ..The value of this win is beyond any number ..well done to every member of the touring party..

— Sourav Ganguly (@SGanguly99)

ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಆಸ್ಟ್ರೇಲಿಯಾ ತಂಡವು ಭಾರತಕ್ಕೆ ಗೆಲ್ಲಲು 328 ರನ್‌ಗಳ ಸವಾಲಿನ ಗುರಿ ನೀಡಿತ್ತು. ಅಲ್ಲದೇ ಗಾಬಾ ಮೈದಾನದಲ್ಲಿ ಆಸ್ಟ್ರೇಲಿಯಾ ತಂಡವು ಕಳೆದ 32 ವರ್ಷಗಳಿಂದಲೂ ಸೋಲಿನ ಕಹಿ ಉಂಡಿರಲಿಲ್ಲ. ಹೀಗಾಗಿ ಟೀಂ ಇಂಡಿಯಾ ಈ ಟೆಸ್ಟ್‌ ಪಂದ್ಯವನ್ನು ಗೆಲ್ಲುವುದು ಸುಲಭವಲ್ಲ ಎಂದೇ ಕ್ರಿಕೆಟ್ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ ರಿಷಭ್‌ ಪಂತ್‌, ಶುಭ್‌ಮನ್‌ ಗಿಲ್‌ ಸ್ಫೋಟಕ ಆಟ ಹಾಗೂ ಚೇತೇಶ್ವರ್ ಪೂಜಾರ ತಾಳ್ಮೆಯ ಬ್ಯಾಟಿಂಗ್‌ ನೆರವಿನಿಂದ 3 ವಿಕೆಟ್‌ಗಳ ರೋಚಕ ಗೆಲುವು ದಾಖಲಿಸಿದೆ. 

ರಹಾನೆ ಪಡೆ ಈ ಸಾಧನೆ ಮಾಡುತ್ತಿದ್ದಂತೆ ಟ್ವೀಟ್‌ ಮಾಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಇದೊಂದು ಅತ್ಯದ್ಭುತ ಗೆಲುವು. ಆಸ್ಟ್ರೇಲಿಯಾಗೆ ಹೋಗಿ ಟೆಸ್ಟ್ ಸರಣಿ ಗೆಲ್ಲುವುದು ಅಂದರೆ ಅದು ಭಾರತದ ಕ್ರಿಕೆಟ್‌ ಇತಿಹಾಸದಲ್ಲಿ ಸದಾಕಾಲ ನೆನಪಿನಲ್ಲಿ ಉಳಿಯುವ ಕ್ಷಣ. ಹೀಗಾಗಿ ಭಾರತ ತಂಡಕ್ಕೆ ಬಿಸಿಸಿಐ 5 ಕೋಟಿ ರುಪಾಯಿ ಬೋನಸ್‌ ಘೋಷಿಸುತ್ತಿದೆ. ಆಸ್ಟ್ರೇಲಿಯಾ ಟೆಸ್ಟ್ ಸರಣಿ ಗೆಲುವಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಆಸೀಸ್‌ ಪ್ರವಾಸದಲ್ಲಿರುವ ಎಲ್ಲರಿಗೂ ಅಭಿನಂದನೆಗಳು ಎಂದು ದಾದಾ ಟ್ವೀಟ್ ಮಾಡಿದ್ದಾರೆ.

ಬ್ರಿಸ್ಬೇನ್‌ನಲ್ಲಿ ಟೀಂ ಇಂಡಿಯಾ ದಿಗ್ವಿಜಯ; ಬಾರ್ಡರ್‌-ಗವಾಸ್ಕರ್‌ ಸರಣಿ ಕೈವಶ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳ ಪೈಕಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಜಯಿಸಿದ್ದವು. ಇನ್ನು ಸಿಡ್ನಿ ಟೆಸ್ಟ್ ಪಂದ್ಯ ರೋಚಕ ಡ್ರಾನಲ್ಲಿ ಅಂತ್ಯವಾಗಿತ್ತು. ಬ್ರಿಸ್ಬೇನ್ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಭಾರತ ಯಶಸ್ವಿಯಾಗಿದೆ.
 

click me!