
ಮುಂಬೈ(ಜ.12): ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದೆ. ಜನವರಿ 24 ರಿಂದ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಆರಂಭಗೊಳ್ಳಲಿದ್ದರೆ ನಂತರ 3 ಏಕದಿನ ಪಂದ್ಯಗಳನ್ನು ಭಾರತ ಮತ್ತು ಕಿವೀಸ್ ಆಡಲಿವೆ.
16 ಜನರ ತಂಡವನ್ನು ಪ್ರಕಟಿಸಲಾಗಿದ್ದು ಗಾಯಗೊಂಡಿರುವ ಶಿಖರ್ ಧವನ್ ಜಾಗವನ್ನು ಪೃಥ್ವಿ ಶಾ ತುಂಬಲಿದ್ದು ಇನ್ಯಾವ ಬದಲಾವಣೆಯನ್ನು ಮಾಡಲಾಗಿಲ್ಲ. 2019ರ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲು ಕಂಡು ಚಾಂಪಿಯನ್ ಆಸೆ ಕೈಬಿಟ್ಟಿತ್ತು.
ಧೋನಿ ಕ್ರಿಕೆಟ್ ಬದುಕಿಗೆ ಏನಾಯ್ತು?
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ 16 ಜನರ ಭಾರತ ತಂಡ ಹೀಗಿದೆ.
ವಿರಾಟ್ ಕೊಹ್ಲಿ(ನಾಯಕ) ರೋಹಿತ್ ಶರ್ಮಾ(ಉಪನಾಯಕ) ಪೃಥ್ವಿ ಶಾ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಶಬ್ ಪಂತ್(ಕೀಪರ್), ಶಿವಂ ದುಬೆ, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ರವೀಂದ್ರ ಜಡೇಜಾ, ಜಸ್ಪ್ರಿತ್ ಬುಮ್ರಾ, ಮೊಮಹದ್ ಶಮಿ, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಕೇದಾರ್ ಜಾಧವ್.
ಹಾರ್ದಿಕ್ ಪಾಂಡ್ಯಾಗೆ ವಿಶ್ರಾಂತಿ ನೀಡಲಾಗಿದೆ. ಒಟ್ಟು 16 ಸದಸ್ಯರ ತಂಡ ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಹಾಗೂ ಮೊಹಮ್ಮದ್ ಶಮಿ ತಂಡ ಕೂಡಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ತಂಡ ಮುನ್ನಡೆಸಿದರೆ, ರೋಹಿತ್ ಶರ್ಮಾ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಜನವರಿ 24 ರಿಂದ ಮಾರ್ಚ್ 4ರ ವರೆಗೆ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.