Rahul Dravid: ಟೀಮ್ ಇಂಡಿಯಾ ನೂತನ ಕೋಚ್ ಆಗಿ ದ್ರಾವಿಡ್ ನೇಮಕ

By Suvarna News  |  First Published Nov 3, 2021, 9:43 PM IST

* ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ
* ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ ಸಭೆಯಲ್ಲಿ  ದ್ರಾವಿಡ್ ಅವಿರೋಧವಾಗಿ ಆಯ್ಕೆ
* ನ್ಯೂಜಿಲೆಂಡ್ ವಿರುದ್ದದ ಸರಣಿ ವೇಳೆ ತಂಡದ  ಜವಾಬ್ದಾರಿ ವಹಿಸಿಕೊಳ್ಳಲಿರುವ ದಿ ವಾಲ್


ಮುಂಬೈ, (ನ.03): ಭಾರತ ಕ್ರಿಕೆಟ್ ತಂಡದ (Team India) ನೂತನ ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ನೇಮಕಗೊಂಡಿದ್ದಾರೆ. ಈ ಮೂಲಕ ಭಾರತ ಕ್ರಿಕೆಟ್‌ ತಂಡದಲ್ಲಿ ಮತ್ತೆ ದ್ರಾವಿಡ್ ಪರ್ವ ಶುರುವಾಗಲಿದೆ.

ಇಂದು(ನ.03) ನಡೆದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ (BCCI) ಸಭೆಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ಕೋಚ್ (Head Coach) ಆಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ನ್ಯೂಜಿಲೆಂಡ್ ವಿರುದ್ದದ ಸರಣಿ ವೇಳೆ ದ್ರಾವಿಡ್ ಟೀಮ್ ಇಂಡಿಯಾ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

Latest Videos

undefined

ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ಅರ್ಜಿ ಹಾಕಿದ ರಾಹುಲ್ ದ್ರಾವಿಡ್!

ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಅವರ ಕಾರ್ಯಾವಧಿ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ(BCCI) ಅರ್ಜಿ ಅಹ್ವಾನಿಸಿತ್ತು. ಈ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಅರ್ಜಿ ಹಾಕಿದ್ದರು. ಇದೀಗ ದ್ರಾವಿಡ್ ಅವರನ್ನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

 ವಿಶ್ವಕಪ್ ಬೆನ್ನಲ್ಲೇ ಟೀಮ್ ಇಂಡಿಯಾ ನವೆಂಬರ್ 17 ರಿಂದ ನ್ಯೂಜಿಲೆಂಡ್ ವಿರುದ್ದ ಸರಣಿ ಆಡಬೇಕಿದ್ದು, ಈ ಸರಣಿಯೊಂದಿಗೆ ರಾಹುಲ್ ದ್ರಾವಿಡ್ ಅವರ ಕೋಚಿಂಗ್ ಕಾರ್ಯಾರಂಭವಾಗಲಿದೆ.

ಈ ಹಿಂದೆ ಅಂಡರ್ 19 ಟೀಮ್ ಇಂಡಿಯಾ ಹಾಗೂ ಭಾರತ ಎ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ರಾಹುಲ್ ದ್ರಾವಿಡ್ ಕಳೆದ ಬಾರಿ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡದ ಹಂಗಾಮಿ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಬಿಸಿಸಿಐ ಕೂಡ ರವಿ ಶಾಸ್ತ್ರಿ ಬಳಿಕ ಭಾರತ ತಂಡದ ಕೋಚ್ ಆಗಿ ದ್ರಾವಿಡ್ ಅವರನ್ನು ನೇಮಿಸಲು ಆಸಕ್ತಿವಹಿಸಿದ್ದರು. ಇದೀಗ ಅಂತಿಮವಾಗಿ ಅವಿರೋಧವಾಗಿ ದ್ರಾವಿಡ್ ಅವರನ್ನು ಬಿಸಿಸಿಐ ಟೀಮ್ ಇಂಡಿಯಾ ಕೋಚ್ ಆಗಿ ಆಯ್ಕೆ ಮಾಡಿದೆ.

ಕ್ರಿಕೆಟಿಗನಾಗಿ, ನಾಯಕನಾಗಿ, ಕೋಚ್ ಆಗಿ, ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ  ರಾಹುಲ್ ದ್ರಾವಿದ್ ಅದ್ವಿತೀಯ ಸಾಧನೆ ಮಾಡಿದ್ದಾರೆ. ಇತ್ತೀಚೆಗೆ ಟೀಂ ಇಂಡಿಯಾ ಏಕಕಾಗಲು ಎರಡು ತಂಡದ ವಿರುದ್ದ ಟೂರ್ನಿ ಆಡಿತ್ತು. ಶಿಖರ್ ಧವನ್ ನಾಯಕತ್ವದ ತಂಡ ಶ್ರೀಲಂಕಾ ಪ್ರವಾಸ ಮಾಡಿತ್ತು. ಈ ವೇಳೆ ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚಿಂಗ್ ಮಾಡಿದ್ದರು. 

ರಾಹುಲ್ ದ್ರಾವಿಡ್ ಕೋಚ್ ಜವಾಬ್ದಾರಿ ವಹಿಸಿಕೊಳ್ಳುವಂತೆ ಬಿಸಿಸಿಐ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಜಯ್ ಶಾ ಮನವೊಲಿಸಿದ್ದರು. ಇದೀಗ ಬಿಸಿಸಿಐ ಕೋಚ್ ಹುದ್ದೆ ಅರ್ಜಿ ಆಹ್ವಾನಕ್ಕೂ ಮೊದಲು ಗಂಗೂಲಿ ಹಾಗೂ ಜಯ್ ಶಾ ರಾಹುಲ್ ದ್ರಾವಿಡ್ ಮನಒಲಿವು ಕೆಲಸ ಮಾಡಿದ್ದರು. 

click me!