ಭಾರತೀಯ ಕ್ರಿಕೆಟಿಗರಿಗೆ ಮನೇಲೆ ಕೋವಿಡ್‌ ಪರೀಕ್ಷೆ

Published : May 13, 2021, 10:18 AM IST
ಭಾರತೀಯ ಕ್ರಿಕೆಟಿಗರಿಗೆ ಮನೇಲೆ ಕೋವಿಡ್‌ ಪರೀಕ್ಷೆ

ಸಾರಾಂಶ

* ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಮನೆಯಲ್ಲಿಯೇ ಕೋವಿಡ್ ಟೆಸ್ಟ್ *  ಜೂನ್ 2ರಂದು ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್‌ಗೆ ಹೊರಡಲಿದೆ. * ಇಂಗ್ಲೆಂಡ್‌ನಲ್ಲಿ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾಗೂ 5 ಪಂದ್ಯಗಳ ಟೆಸ್ಟ್ ಪಂದ್ಯವನ್ನಾಡಲಿರುವ ಭಾರತ

ನವದೆಹಲಿ(ಮೇ.13): ಇಂಗ್ಲೆಂಡ್‌ ಪ್ರವಾಸಕ್ಕೆ ಆಯ್ಕೆಯಾಗಿರುವ ಭಾರತೀಯ ಕ್ರಿಕೆಟಿಗರಿಗೆ ಮನೆಯಲ್ಲಿಯೇ ಕೋವಿಡ್‌ ಪರೀಕ್ಷೆ ನಡೆಸಲು ಬಿಸಿಸಿಐ ವ್ಯವಸ್ಥೆ ಮಾಡಿದೆ. ಆಟಗಾರರು ಮಾತ್ರವಲ್ಲದೆ ಅವರ ಕುಟುಂಬ ಸದಸ್ಯರನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 

ಆಟಗಾರರು ಮೇ 17 ಇಲ್ಲವೇ 18ರಂದು ಮುಂಬೈ ತಲುಪಲಿದ್ದು, ಬಿಸಿಸಿಐ ಸಿದ್ಧಗೊಳಿಸಿರುವ ಬಯೋ ಬಬಲ್‌ನೊಳಕ್ಕೆ ಪ್ರವೇಶಿಸಲಿದ್ದಾರೆ. 14 ದಿನಗಳ ಕ್ವಾರಂಟೈನ್‌ ಬಳಿಕ ಜೂ.2ರಂದು ತಂಡ ಇಂಗ್ಲೆಂಡ್‌ಗೆ ಹೊರಡಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಮನೆಯಿಂದ ಹೊರಬರದಂತೆ ಕ್ರಿಕೆಟಿಗರಿಗೆ ಬಿಸಿಸಿಐ ಎಚ್ಚರಿಕೆ

ಈಗಾಗಲೇ ಬಿಸಿಸಿಐ ಟೀಂ ಇಂಡಿಯಾ ಆಟಗಾರರಿಗೆ ಮನೆಯಿಂದ ಹೊರಬರದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಒಂದು ವೇಳೆ ಯಾವುದೇ ಆಟಗಾರನಿಗೆ ಕೋವಿಡ್ ಪಾಸಿಟಿವ್ ಬಂದರೆ ಆತನನ್ನು ತಂಡದಿಂದ ಕೈಬಿಡಲಾಗುವುದು ಎನ್ನುವ ಎಚ್ಚರಿಕೆಯನ್ನು ನೀಡಿದೆ. ಹೀಗಾಗಿ ಆಟಗಾರರು ಕೋವಿಡ್‌ ಸೋಂಕು ತಗುಲದಂತೆ ಮಾಡಲು ಆಟಗಾರರಿಗೆ ಮನೆಯಲ್ಲಿಯೇ ಪರೀಕ್ಷೆ ಮಾಡಲು ಬಿಸಿಸಿಐ ತೀರ್ಮಾನಿಸಿದೆ.

ಬಹುನಿರೀಕ್ಷಿತ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಪಂದ್ಯವು ಜೂನ್ 18ರಿಂದ ಸೌಥಾಂಪ್ಟನ್‌ನಲ್ಲಿ ಆರಂಭವಾಗಲಿದ್ದು, ಪ್ರಶಸ್ತಿಗಾಗಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಡಲಿವೆ. ಇದಾದ ಬಳಿಕ ಆಗಸ್ಟ್ 04ರಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ದ 5 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾತ್ಮನಿಗೆ ಐಸಿಸಿ ವಿಶೇಷ ಗೌರವ.. 2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ನಿಗದಿ..!
IND vs SL 1st Test Day 2 Highlights : ಮಳೆಯ ನಡುವೆಯೂ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ.. ಪಡಿಕ್ಕಲ್ ಇತಿಹಾಸ