5 ತಂಡಗಳ ಮಹಿಳಾ ಐಪಿಎಲ್ ಟೂರ್ನಿಗೆ ಮುಹೂರ್ತ ಫಿಕ್ಸ್‌

By Naveen Kodase  |  First Published Oct 14, 2022, 12:47 PM IST

ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್ ಟೂರ್ನಿಗೆ ಮುಹೂರ್ತ ಫಿಕ್ಸ್‌
ಚೊಚ್ಚಲ ಆವೃತ್ತಿಯ ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಾಟ
ಪ್ರತಿ ತಂಡಗಳು ಲೀಗ್‌ ಹಂತದಲ್ಲಿ ಪರಸ್ಪರ 2 ಬಾರಿ ಮುಖಾಮುಖಿಯಾಗಲಿವೆ


ನವದೆಹಲಿ(ಅ.14): ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಲಭಿಸಿದ್ದು, ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ ಎಂದು ಗೊತ್ತಾಗಿದೆ. ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ ಲೀಗ್‌ ಹಂತದಲ್ಲಿ 20 ಪಂದ್ಯಗಳು ಇರಲಿದ್ದು, ಪ್ರತಿ ತಂಡಗಳು ಪರಸ್ಪರ 2 ಬಾರಿ ಮುಖಾಮುಖಿಯಾಗಲಿವೆ. ಲೀಗ್‌ನಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದ್ದು, 2 ಮತ್ತು 3ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಪ್ರತಿ ತಂಡ ಆಡುವ 11ರ ಬಳಗದಲ್ಲಿ 5 ವಿದೇಶಿ ಆಟಗಾರ್ತಿಯರನ್ನು ಹೊಂದುವ ಅವಕಾಶವಿದೆ. 

ಮಹಿಳಾ ಐಪಿಎಲ್ ಟೂರ್ನಿಯಲ್ಲಿ ತಂಡವೊಂದರ ಆಡುವ ಹನ್ನೊಂದರ ಬಳಗದಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರು(ಐಸಿಸಿ ಪೂರ್ಣ ಸದಸ್ಯತ್ವ ಹೊಂದಿದ ಆಟಗಾರ್ತಿಯರು) ಹಾಗೂ ಅಸೋಸಿಯೇಟ್‌ ರಾಷ್ಟ್ರದ ಓರ್ವ ಆಟಗಾರ್ತಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನು ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ವಿಜೇತ ತಂಡವು ಫೈನಲ್‌ ಪಂದ್ಯದಲ್ಲಿ ಸೆಣಸಾಡಲಿದೆ.   '

Tap to resize

Latest Videos

T20 World Cup: ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ INOX

ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 9ರಿಂದ 26ರ ವರೆಗೆ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದ್ದು, ಆ ಬಳಿಕ ಐಪಿಎಲ್‌ ನಡೆಯುವ ನಿರೀಕ್ಷೆಯಿದೆ. ಕ್ಯಾರವಾನ್‌ ಮಾದರಿಯಲ್ಲಿ 2 ತಾಣಗಳಲ್ಲಿ ತಲಾ 10 ಪಂದ್ಯಗಳನ್ನು ಆಡಿಸುವ ನಿರೀಕ್ಷೆಯಿದೆ. ವಲಯವಾರು ಆಧರಿಸಿ ಬೆಂಗಳೂರು, ಅಹ್ಮದಾಬಾದ್‌, ಚೆನ್ನೈ, ಡೆಲ್ಲಿ, ಕೋಲ್ಕತಾ ಮತ್ತು ಮುಂಬೈ ನಗರಗಳು ಪಂದ್ಯ ಆಯೋಜಿಸುವ ಆಯ್ಕೆ ಪಟ್ಟಿಯಲ್ಲಿವೆ. ಟೂರ್ನಿ ಬಗ್ಗೆ ಐಪಿಎಲ್‌ ಆಡಳಿತ ಮಂಡಳಿ ಮತ್ತು ಬಿಸಿಸಿಐ ಪದಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. 

click me!