ಮೇ 29ಕ್ಕೆ ಐಪಿಎಲ್‌, ವಿಶ್ವಕಪ್‌ ಭವಿಷ್ಯ ನಿರ್ಧಾರ?

By Kannadaprabha NewsFirst Published May 20, 2021, 9:01 AM IST
Highlights

* ಉಳಿದಿರುವ ಐಪಿಎಲ್ ಪಂದ್ಯಗಳನ್ನು ಇಂಗ್ಲೆಂಡ್‌ನಲ್ಲಿ ಆಯೋಜಿಸಲು ಬಿಸಿಸಿಐ ಚಿಂತನೆ

* ಮೇ 29ಕ್ಕೆ ಸಾಮಾನ್ಯ ಸಭೆ ಕರೆದಿರುವ ಬಿಸಿಸಿಐ

* ಈ ಸಭೆಯಲ್ಲಿ ಟಿ20 ವಿಶ್ವಕಪ್, ಐಪಿಎಲ್ ಆಯೋಜನೆಯ ಕುರಿತಂತೆ ಚರ್ಚೆ

ನವದೆಹಲಿ(ಮೇ.20): ಕೊರೋನಾದಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ 14ನೇ ಆವೃತ್ತಿಯ ಐಪಿಎಲ್‌ ಟೂರ್ನಿ ಹಾಗೂ ಇದೇ ವರ್ಷ ಅಕ್ಟೋಬರ್‌-ನವೆಂಬರ್‌ನಲ್ಲಿ ಭಾರತದಲ್ಲೇ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗಳ ಭವಿಷ್ಯ ನಿರ್ಧರಿಸಲು ಬಿಸಿಸಿಐ, ಮೇ 29ಕ್ಕೆ ವಿಶೇಷ ಸಾಮಾನ್ಯ ಸಭೆ ಕರೆದಿದೆ. 

ಮೂಲಗಳ ಪ್ರಕಾರ, ಐಪಿಎಲ್‌ ಭಾಗ-2 ಅನ್ನು ಇಂಗ್ಲೆಂಡ್‌ನಲ್ಲಿ ನಡೆಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಈಗಾಗಲೇ ಇಂಗ್ಲೆಂಡ್‌ನ 4 ಕೌಂಟಿಗಳು, ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ (ಇಸಿಬಿ)ಯ ಮೂಲಕ ಐಪಿಎಲ್‌ ಆತಿಥ್ಯಕ್ಕೆ ಆಸಕ್ತಿ ವ್ಯಕ್ತಪಡಿಸಿವೆ. ಇಸಿಬಿ ಸಹ ಐಪಿಎಲ್‌ ಆಯೋಜಿಸಿದರೆ ಕೌಂಟಿಗಳಿಗೆ ಆರ್ಥಿಕ ನೆರವು ಸಿಗಲಿದೆ ಎನ್ನುವ ಲೆಕ್ಕಾಚಾರದಲ್ಲಿದ್ದು, ಭಾರತ ವಿರುದ್ಧದ 5 ಪಂದ್ಯಗಳ ಟೆಸ್ಟ್‌ ಸರಣಿಯ ವೇಳಾಪಟ್ಟಿಯನ್ನು ಪರಿಷ್ಕೃತಗೊಳಿಸಿ, ಐಪಿಎಲ್‌ ಆಯೋಜನೆಗೆ ಮುಂದಾಗಬಹುದು ಎನ್ನಲಾಗಿದೆ.

ಟೀಂ ಇಂಡಿಯಾ ಕ್ರಿಕೆಟ್ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿ ಕೊರೋನಾಗೆ ಬಲಿ

ಮತ್ತೊಂದೆಡೆ ಟಿ20 ವಿಶ್ವಕಪ್‌ ಆತಿಥ್ಯ ಉಳಿಸಿಕೊಳ್ಳಲು ಬಿಸಿಸಿಐ ಯೋಜನೆ ರೂಪಿಸುತ್ತಿದೆ. ಕೇವಲ 2 ನಗರಗಳಲ್ಲಿ ಪಂದ್ಯಗಳನ್ನು ನಡೆಸುವ ಬಗ್ಗೆಯೂ ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ. ಒಂದು ವೇಳೆ ಭಾರತದಲ್ಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆಯೋಜಿಸಲು ಸಾಧ್ಯವಾಗದಿದ್ದರೆ, ಯುಎಇನಲ್ಲಿ ಚುಟುಕು ಕ್ರಿಕೆಟ್ ವಿಶ್ವಕಪ್‌ ಆಯೋಜನೆಯಾಗುವ ಸಾಧ್ಯತೆ ಬಹುತೇಕ ದಟ್ಟವಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!