
ನವದೆಹಲಿ(ಆ.04): ಕೊರೋನಾ ಸೋಂಕಿನ ಭೀತಿ ನಡುವೆಯೇ ಕ್ರಿಕೆಟ್ ಅಭ್ಯಾಸಕ್ಕೆ ಮರಳುವ ದೇಸಿ ಕ್ರಿಕೆಟಿಗರು, ಸೋಂಕು ತಗುಲಿದರೆ ತಾವೇ ಜವಾಬ್ದಾರರು ಎಂದು ತಮ್ಮ ತಮ್ಮ ರಾಜ್ಯ ಸಂಸ್ಥೆಗಳಿಗೆ ಒಪ್ಪಿಗೆ ಪತ್ರ ನೀಡಬೇಕು ಎಂದು ಬಿಸಿಸಿಐ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಭಾನುವಾರ 100 ಪುಟಗಳ ಮಾರ್ಗಸೂಚಿ ಪ್ರಕಟಿಸಿರುವ ಬಿಸಿಸಿಐ, ಆಟಗಾರರು ಕ್ರೀಡಾಂಗಣಗಳಿಗೆ ಆಗಮಿಸಿ ಅಭ್ಯಾಸ ನಡೆಸುವ ವೇಳೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಅಭ್ಯಾಸ ಶಿಬಿರ ಆರಂಭಗೊಳ್ಳುವ ಮುನ್ನ ಆಟಗಾರರ 2 ವಾರಗಳ ಪ್ರವಾಸ ಹಾಗೂ ಆರೋಗ್ಯ ವಿವರಗಳನ್ನು ಆನ್‌ಲೈನ್‌ನಲ್ಲಿ ಸಂಗ್ರಹಿಸಬೇಕು ಎಂದು ತಿಳಿಸಿದೆ. ಯಾವುದೇ ಆಟಗಾರನಿಗೆ ಸೋಂಕಿನ ಲಕ್ಷಣ ಕಂಡು ಬಂದಲ್ಲಿ 2 ಬಾರಿ ಪರೀಕ್ಷೆ ನಡೆಸುವಂತೆ ರಾಜ್ಯ ಸಂಸ್ಥೆಗಳಿಗೆ ಬಿಸಿಸಿಐ ಸೂಚಿಸಿದೆ. ಐಸಿಸಿ ನಿಯಮದ ಪ್ರಕಾರ, ಆಟಗಾರರು ಚೆಂಡಿಗೆ ಎಂಜಲು ಹಾಕಿ ಉಜ್ಜುವಂತಿಲ್ಲ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
2004ರ ಸುನಾಮಿ ಅಲೆಯಿಂದ ಪಾರಾಗಿದ್ದ ಅನಿಲ್ ಕುಂಬ್ಳೆ!
60 ದಾಟಿದವರಿಗಿಲ್ಲ ಪ್ರವೇಶ: 60 ವರ್ಷದ ದಾಟಿದ ಕೋಚ್, ಸಹಾಯಕ ಸಿಬ್ಬಂದಿ, ಮೈದಾನ ಸಿಬ್ಬಂದಿ ಸೇರಿ ಇನ್ಯಾವುದೇ ಅಧಿಕಾರಿಗಳು ಅಭ್ಯಾಸ ಶಿಬಿರ ನಡೆಯುವ ಸ್ಥಳಕ್ಕೆ ಪ್ರವೇಶಿಸುವಂತಿಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಿರುವ ಬಿಸಿಸಿಐ, ದೇಸಿ ಕ್ರಿಕೆಟ್ ಟೂರ್ನಿಗಳನ್ನು ಆರಂಭಿಸಲು ಟಾಸ್ಕ್ ಫೋರ್ಸ್ ರಚನೆ ಮಾಡಲು ಮುಂದಾಗಿದೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ರಾಹುಲ್ ದ್ರಾವಿಡ್, ಟಾಸ್ಕ್ ಫೋರ್ಸ್‌ನ ಭಾಗವಾಗಿರಲಿದ್ದಾರೆ.
2020-21ರ ದೇಸಿ ಋುತು ಆಗಸ್ಟ್‌ನಲ್ಲಿ ಆರಂಭಗೊಳ್ಳಬೇಕಿತ್ತು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಕೆಲ ಟೂರ್ನಿಗಳನ್ನು ನಡೆಸದಿರುವ ನಿರ್ಧರಿಸಿರುವ ಬಿಸಿಸಿಐ, ಕೆಲ ದಿನಗಳಲ್ಲಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.